Vinod Prabhakar : ನಟ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಮಾದೇವ. ಪೋಸ್ಟರ್‌ಗಳ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು, ಸಖತ್ತಾಗಿದೆ. ಮರಿ ಟೈಗರ್ ರಗಡ್ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಟೀಸರ್ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಾಯಕ ವಿನೋದ್ ಪ್ರಭಾಕರ್, ನಾಯಕಿ ಸೋನಲ್, ಹಿರಿಯ ನಟಿ ಶೃತಿ, ನಿರ್ದೇಶಕ ನವೀನ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡಕ್ಕೆ ನಿರ್ದೇಶಕ ತರುಣ್ ಸುಧೀರ್, ನಟರಾದ ಅಭಿಷೇಕ್ ಅಂಬರೀಶ್, ಧನ್ವೀರ್ ಗೌಡ, ಝೈದ್ ಖಾನ್ ಸಾಥ್ ಕೊಟ್ಟರು.
ಇದನ್ನೂ ಓದಿ: ಪ್ರೇಕ್ಷಕರನ್ನು ನಕ್ಕು-ನಗಿಸಿದ ಗೆಜ್ಜೆಪುರದ ಉಪಾಧ್ಯಕ್ಷ: ನಾಯಕನಾಗಿ ಗೆದ್ರಾ ಚಿಕ್ಕಣ್ಣ?
ಟೀಸರ್ ಬಿಡುಗಡೆ ಬಳಿಕ ಮಾತನಾಡಿದ ನಿರ್ದೇಶಕ ತರುಣ್ ಸುಧೀರ್, ವಿನೋದ್ ನನ್ನದು ಒಂದೊಳ್ಳೆ ಬಾಂಡಿಂಗ್ ಇದೆ. ರಿಯಲ್ ಲೈಫ್ ಫೈಟರ್ ವಿನೋದ್. ಮಾದೇವ ಪ್ರಸೆಂಟೇಷನ್, ಅವರ ಲುಕ್ ಬಹಳ ಚೆನ್ನಾಗಿದೆ. ಬಿಯರ್ಡ್ ಲುಕ್ ನಲ್ಲಿ ಅವರು ಚೆನ್ನಾಗಿ ಕಾಣಿಸುತ್ತಾರೆ. ಕೆಲಸದ ವಿಚಾರದಲ್ಲಿ ಪ್ರಾಮಾಣಿಕ, ಡಿಡಿಕೇಟೇಡ್, ಹಾರ್ಡ್ ವರ್ಕರ್. ಸಿನಿಮಾಗೆ ತುಂಬಾ ಎಫರ್ಟ್ ಹಾಕಿ ಕೆಲಸ ಮಾಡುತ್ತಾರೆ. ಈ ಜಾನರ್ ತುಂಬಾ ಕಷ್ಟ. ತುಂಬಾ ವರ್ಕ್, ರಿಸರ್ಚ್ ಇರುತ್ತದೆ. ಅದ್ಭುತವಾಗಿ ತೆರೆಮೇಲೆ ತಂದಿದ್ದಾರೆ. ಇಡೀ ತಂಡಕ್ಕೆ ಒಳ್ಳೆದಾಗಲ್ಲಿ ಎಂದರು.
ನಟ ಅಭಿಷೇಕ್ ಅಂಬರೀಶ್ ಮಾತನಾಡಿ, ಟೈಗರ್ ಅವರ ಆಕ್ಟಿಂಗ್, ಫೈಟ್ ಬಗ್ಗೆ ಅಥವ ಸ್ಕ್ರೀನ್ ಪ್ರೆಸೆನ್ಸ್ ಬಗ್ಗೆ ಮಾತನಾಡುವ ಬಗ್ಗೆ ದೊಡ್ಡವನಲ್ಲ ನಾನು. ನಮ್ಮೆಲ್ಲರಿಗಿಂತ ಅವರು ಹಿರಿಯರು. ಆದರೆ ಯುವಕರಾಗಿ ಕಾಣಿಸಿಕೊಳ್ಳುತ್ತಾರೆ. ವಿಷ್ಯುವಲ್ಸ್, ಕ್ಯಾಮೆರಾವರ್ಕ್, ಮ್ಯೂಸಿಕ್ ಚೆನ್ನಾಗಿದೆ. ಸಬ್ಜೆಕ್ಟ್ ಬೇರೆ ತರ ಇದೆ. ಇತ್ತೀಚೆಗಿನ ದಿನ 70ರ ಕಥೆ ಸಕ್ಸಸ್ ಆಗಿದೆ. ಈಗ 80ರ ಕಥೆಗೆ ಬಂದಿದ್ದೇನೆ. 2023 ಹಿಟ್ ಕಾಟೇರ..2024ರ ಹಿಟ್ ನಿಮ್ಮದಾಗಲಿ ಎಂದು ವಿನೋದ್ ಪ್ರಭಾಕರ್ ಚಿತ್ರಕ್ಕೆ ಶುಭ ಹಾರೈಸಿದರು.
ಇದನ್ನೂ ಓದಿ:ಸಿನಿಮಾ ಜೊತೆ ಸೀರಿಯಲ್‌ಗೂ ಎಂಟ್ರಿ ಕೊಟ್ಟ ನಟಿ ಸಪ್ತಮಿ ಗೌಡ..! ಧಾರಾವಾಹಿ ಯಾವುದು ಗೊತ್ತೆ..?
ನಾಯಕ ವಿನೋದ್ ಪ್ರಭಾಕರ್ ಮಾತನಾಡಿ, ನಾವು ಏನ್ ಅನ್ನೋದನ್ನು ಕೆಲಸದಲ್ಲಿ ತೋರಿಸುತ್ತೇವೆ. ಇದು ಬೇರೆ ರೀತಿಯ ಜಾನರ್. ಬಹಳಷ್ಟು ಜನ ಟಚ್ ಮಾಡಲು ಆಗದ ಕಥೆ. ನನ್ನ ಗೆಟಪ್ ನಿಮಗೆ ಇಷ್ಟ ಆಗಿದೆ ಅಂದುಕೊಳ್ಳುತ್ತೇನೆ. ಬೆಸ್ಟ್ ಲುಕ್ ಮಾದೇವ ಅಂತಾ ನನಗೆ ಅನಿಸುತ್ತದೆ. ಪ್ರೊಡ್ಯೂಸರ್ ಕೇಶವಣ್ಣ ಬಹಳಷ್ಟು ಕಷ್ಟ ಎದುರಿಸಿ ಸಿನಿಮಾ ಮಾಡಿದ್ದೀರಾ? ನಿಮಗೆ ಒಳ್ಳೆದಾಗಲಿ. ಸಿನಿಮಾ ಬಗ್ಗೆ ಮಾತಾನಾಡುವುದು ತುಂಬಾ ಇದೆ. ಟ್ರೇಲರ್ ಇವೆಂಟ್ ನಲ್ಲಿ ಮಾತನಾಡುತ್ತೇನೆ ಎಂದರು.
ನಾಯಕಿ ಸೋನಲ್ ಮಾತನಾಡಿ, ರಾಬರ್ಟ್ ಆದ್ಮೇಲೆ ನನಗೆ ವಿನೋದ್ ಸರ್ ಜೋಡಿಯಾಗಿ ತುಂಬಾ ಸಿನಿಮಾಗಳು ಬಂದವು. ಆದರೆ ಯಾವುದು ಸೆಟ್ ಆಗಲಿಲ್ಲ. ಮಾದೇವ ಸಿನಿಮಾ ವಿನೋದ್ ಸರ್ ಗೆ ಬಂದಿದ್ದು, ಅವರು ನನ್ನ ಕಾಸ್ಟ್ ಮಾಡಿದರೆ ಚೆನ್ನಾಗಿ ಇರುತ್ತದೆ ಎಂದಾಗ ನನ್ನ ಜರ್ನಿ ಶುರುವಾಯ್ತು. ಹಳ್ಳಿ ಹುಡ್ಗಿ ಪಾತ್ರ ನನ್ನದು. ನಾನು ತುಂಬಾ ಎಂಜಾಯ್ ಮಾಡಿ ನನ್ನ ಪಾತ್ರ ಮಾಡಿದ್ದೇನೆ ಎಂದು ತಿಳಿಸಿದರು.
ನಿರ್ದೇಶಕ ನವೀನ್ ರೆಡ್ಡಿ ಮಾತನಾಡಿ, ಶೃತಿ ಮೇಡಂ ಪಾತ್ರ ಚಾಲೆಂಜಿಂಗ್ ಆಗಿದೆ. ಇಡೀ ಸಿನಿಮಾವನ್ನು ವಿನೋದ್ ಸರ್ ಭುಜದ ಮೇಲೆ ಹಾಕಿತೆಗೆದುಕೊಂಡು ಹೋಗುತ್ತಾರೆ.ಅಚ್ಯುತ್ ಸರ್ ಗೆಸ್ಟ್ ಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಲನ್ ಆಗಿ ಕಿಟ್ಟಿ ಸರ್ ನಟಿಸಿದ್ದಾರೆ. ಇಡೀ ತಂಡದ ಶ್ರಮ ಇದು ಎಂದರು.
ಇದನ್ನೂ ಓದಿ:
ಮಾದೇವ ಟೀಸರ್ ಮಾಸ್ ಅಂಶಗಳಿಂದ ಕೂಡಿದೆ. ಮರಿ ಟೈಗರ್ ವಿನೋದ್ ಪ್ರಭಾಕರ್ ರಗಡ್ ಅವಾತರಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದೆಂದೂ ಕಂಡಿರದಂತಹ ಗೆಟಪ್ ನಲ್ಲಿ ಮರಿ ಟೈಗರ್ ಮಿಂಚಿದ್ದಾರೆ. ಖಳನಾಯಕನಾಗಿ ಶ್ರೀನಗರಕಿಟ್ಟಿ, ಶ್ರುತಿ ಮತ್ತು ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ರಾಬರ್ಟ್’ ಸಿನಿಮಾದಲ್ಲಿ ರಾಘವ್ ಮತ್ತು ತನು ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದ್ದ ವಿನೋದ್ ಪ್ರಭಾಕರ್ ಮತ್ತು ಸೋನಲ್ ಮೊಂಥೆರೋ ಮಾದೇವ’ ಚಿತ್ರದಲ್ಲೂ ಜೋಡಿಯಾಗಿ ಅಭಿನಯಿಸಿದ್ದಾರೆ.
ನೈಜ ಘಟನೆಗಳಿಂದ ಸ್ಪೂರ್ತಿ ಪಡೆದ ಈ ಸಿನಿಮಾದ ಕಥೆಯು 1965, 1980 ಮತ್ತು 1999ರ ಕಾಲಘಟ್ಟದಲ್ಲಿ ನಡೆಯಲಿದೆ. ಕನಕಪುರ, ಚನ್ನಪಟ್ಟಣ, ಶಿವಮೊಗ್ಗ, ರಾಮೋಜಿ ಫಿಲ್ಮಂಸಿಟಿ, ಹೆಸರಘಟ್ಟ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಬಾಹುಬಲಿ, ಆರ್ಆರ್ಆರ್ ಸಿನಿಮಾಗಳ ಛಾಯಾಗ್ರಾಹಕ ಸೆಂಥಿಲ್ ಕುಮಾರ್ ಬಳಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಾಲಕೃಷ್ಣ ತೋಟ ‘ಮಾದೇವ’ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ರಾಧಾಕೃಷ್ಣ ಬ್ಯಾನರ್ ನಡಿ ಆರ್ ಆರ್ ಕೇಶವ ದೇವಸಂದ್ರ ಚಿತ್ರಕ್ಕೆ ಹಣ ಹಾಕಿದ್ದಾರೆ. ಮಾರ್ಚ್ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.