Sandalwood Updates: ಸ್ಯಾಂಡಲ್ವುಡ್ ನಟ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.


COMMERCIAL BREAK
SCROLL TO CONTINUE READING

ಸಂಗೀತ ನಿರ್ದೇಶಕ ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಗುರುರಂಜನ್ ಶೆಟ್ಟಿ (ನಟಿ ಅನುಷ್ಕಾ ಶೆಟ್ಟಿ ಸಹೋದರ), ನಾಗರಾಜ್, ಕೃಷ್ಣಪ್ಪ, ಗೌರೀಶ್ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ವಾಸು, ಕೆ.ಎನ್ ನಾಗೇಶ್ ಕುಮಾರ್ ಮುಂತಾದ ಗಣ್ಯರು ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.


ಇದನ್ನೂ ಓದಿ: ಈ ಭಾಗಗಳಲ್ಲಿ ಇನ್ನೂ 5 ದಿನ ಎಡೆಬಿಡದೆ ಸುರಿಯಲಿದೆ ಭಾರೀ ಮಳೆ: ಗುಡುಗು, ಬಿರುಗಾಳಿ ಭೀತಿ


ಈ ಹಾಡಿನ ಮೊದಲ ಪದ "ಐ ವಾನ ಫಾಲೋ" ಎಂಬುದನ್ನು ನಿರ್ದೇಶಕರು ಹೇಳಿದಾಗ "ಫಾಲೋ" ಎಂಬ ಪದದಿಂದಲೇ ಈ ಹಾಡು ಆರಂಭವಾಯಿತು. ವಿಶೇಷವೆಂದರೆ, ಈ  ಹಾಡಿನಲ್ಲಿ ಬರುವ ಪದಗಳಿಗೆ ಎರಡು ಅರ್ಥಗಳಿದೆ. ಕವಿರಾಜ್ ಅದ್ಭುತವಾಗಿ ಹಾಡು ಬರೆದಿದ್ದಾರೆ. ಚೈತ್ರ ಸೊಗಸಾಗಿ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ಹಾಡಿನ ಬಗ್ಗೆ ಮಾಹಿತಿ ನೀಡಿದರು.


ಈ ಹಾಡನ್ನು ಪಾಂಡಿಚೇರಿಯಲ್ಲಿ ಚಿತ್ರಿಸಲಾಗಿದೆ. ಗುರುಕಿರಣ್ ಅವರ ಸಂಗೀತ, ಕವಿರಾಜ್ ಅವರ ಸಾಹಿತ್ಯ, ಮೋಹನ್  ನೃತ್ಯ ನಿರ್ದೇಶನ ಹಾಗೂ ವಿನೋದ್ ಪ್ರಭಾಕರ್, ಲೇಖಾ ಚಂದ್ರ ಅವರ ಅಭಿನಯ ಎಲ್ಲವೂ ಸೇರಿ ಈ "ಫಾಲೋ ಯು" ಹಾಡು ಅದ್ಭುತವಾಗಿ ಹಾಗೂ ಅದ್ದೂರಿಯಾಗಿ ಮೂಡಿಬಂದಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಚಿತ್ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ ಎಂದಿದ್ದಾರೆ ನಿರ್ದೇಶಕ ನೂತನ್ ಉಮೇಶ್.


ಚಿತ್ರದ ಮುಹೂರ್ತಕ್ಕೆ ಬಂದು ಹಾರೈಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೆನೆಯುತ್ತಾ ಮಾತು ಆರಂಭಿಸಿದ ನಾಯಕ ವಿನೋದ್ ಪ್ರಭಾಕರ್, ಈ "ಫೈಟರ್" ಅನ್ಯಾಯದ ವಿರುದ್ಧ ಹಾಗೂ ರೈತರ ಪರವಾಗಿ ಹೋರಾಡುವ ‘ಫೈಟರ್’. ನಿರ್ಮಾಪಕ ಸೋಮಶೇಖರ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರು ಅಷ್ಟೇ ಚೆನ್ನಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಇಂದು ಬಿಡುಗಡೆಯಾದ ಹಾಡಿನ ಚಿತ್ರೀಕರಣ ಮಾರ್ಚ್’ನಲ್ಲಿ ಪಾಂಡಿಚೇರಿಯಲ್ಲಿ ನಡೆದಿತ್ತು. ಆಗ ಅಲ್ಲಿನ ಬಿಸಿಲು ತಡೆಯುವುದು ಕಷ್ಟ. ಎಲ್ಲರ ಶ್ರಮದಿಂದ ಈ ಹಾಡು ಚೆನ್ನಾಗಿ ಬಂದಿದೆ. ನಿರ್ಮಾಪಕ ಸೋಮಶೇಖರ್ ಅವರಿಗೆ ಈ ಚಿತ್ರ ದೊಡ್ಡ ಯಶಸ್ಸು ತಂದು ಕೊಡಲಿ. ಅವರಿಂದ ಸಾಕಷ್ಟು ಚಿತ್ರಗಳು ನಿರ್ಮಾಣವಾಗಲಿ ಎಂದು ಹಾರೈಸಿದರು.


ಇದನ್ನೂ ಓದಿ: ಚೌತಿಗೆ ಮುನ್ನ ಬಂಗಾರದ ಬೆಲೆಯಲ್ಲಿ ತುಸು ಏರಿಕೆ: ಇಂದು 10 ಗ್ರಾಂ ಚಿನ್ನದ ರೇಟ್ ಎಷ್ಟಾಗಿದೆ ಗೊತ್ತಾ


ಇಡೀ ಚಿತ್ರತಂಡದ ಶ್ರಮದಿಂದ "ಫೈಟರ್" ಚಿತ್ರ ಉತ್ತಮವಾಗಿ ಮೂಡಿಬಂದಿದೆ. ‌ಇಂದು ಹಾಡು ಬಿಡುಗಡೆಯಾಗಿದೆ. ಚಿತ್ರತಂಡಕ್ಕೆ ಹಾಗೂ ಆಗಮಿಸಿರುವ ಗಣ್ಯರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಿರ್ಮಾಪಕ ಸೋಮಶೇಖರ್ ಕಟ್ಟಿಗೇನಹಳ್ಳಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ