ಟೀಸರ್‌ ಲಾಂಚ್‌ ವೇಳೆ ಮಾತನಾಡಿದ ಮೋಹನ್ ಬಾಬು, ಪರಮೇಶ್ವರನ ಒಪ್ಪಿಗೆಯ ಮೇರೆಗೆ ನಾವು ಈ ಕಣ್ಣಪ್ಪ ಸಿನಿಮಾ ಮಾಡಿದ್ದೇವೆ. ಅಚ್ಚು ಕಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಬಹುಭಾಷೆಯ ತಾರೆಯರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ. ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದರು.  


COMMERCIAL BREAK
SCROLL TO CONTINUE READING

ವಿಷ್ಣು ಮಂಚು ಹೇಳಿದ್ದೇನು?
"ಮೊದಲ ದಿನದಿಂದ ಇಲ್ಲಿಯವರೆಗೆ 'ಕಣ್ಣಪ್ಪ' ಚಿತ್ರವನ್ನು ಪ್ರತಿಯೊಬ್ಬ ಪ್ರೇಕ್ಷಕ ಕುತೂಹಲದಿಂದಲೇ ನೋಡುತ್ತಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾಕ್ಕೆ ಸಿಗುತ್ತಿರುವ ಬೆಂಬಲ ನೋಡಿದ್ದೇನೆ. ಇದೀಗ ಆ ಕನಸು ನಿಮ್ಮೆಲ್ಲರ ಮುಂದೆ ತೆರೆದಿಡುವ ಹಂತಕ್ಕೆ ಬಂದಿದೆ. ಕಣ್ಣಪ್ಪ ಸಿನಿಮಾ ಪಯಣ 2014 -15ರಲ್ಲಿ ಶುರುವಾಗಿತ್ತು. ತಂದೆ ಮೋಹನ್ ಬಾಬು, ವಿನ್ನಿ ಮತ್ತು ಸಹೋದರ ವಿನಯ್ ಅವರ ಪ್ರೋತ್ಸಾಹದಿಂದಾಗಿ ಇದೀಗ ಅದು ಸಿದ್ಧವಾಗುತ್ತಿದೆ" ‌


ಇದನ್ನೂ ಓದಿ-ರಮ್ಯಾ ಕೃಷ್ಣ ಎಷ್ಟು ಕೋಟಿ ಆಸ್ತಿಗೆ ಗೊತ್ತಾ.. ಪ್ರತಿ ಸಿನಿಮಾಗೆ ಪಡೆಯುವ ಸಂಭಾವನೆ ಇದು !?


"ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಿದ್ದೇವೆ. ಅಷ್ಟೇ ಎಚ್ಚರಿಕೆಯಿಂದ ಈ ಸಿನಿಮಾ ಮಾಡಿದ್ದೇವೆ" ಎಂದರು ವಿಷ್ಣು ಮಂಚು. 


ನಿರ್ದೇಶಕ ಮುಕೇಶ್ ಕುಮಾರ್ ಸಿಂಗ್ ಮಾತನಾಡಿ, ಕಣ್ಣಪ್ಪ ಚಿತ್ರದ ನನ್ನ ಶಕ್ತಿಯೇ ನನ್ನ ಕಲಾವಿದರು. ವಿಷ್ಣು ಅವರ ನಟನೆ ಮತ್ತು ಅವರು ಎದುರಿಸಿದ ಕಷ್ಟಗಳ ಬಗ್ಗೆ ನಾನು ಹೇಳಲಾರೆ. ಕೊರೆಯುವ ಚಳಿಯಲ್ಲೂ ಇಡೀ ತಂಡ ಶ್ರಮಿಸಿದೆ. ವಿಷ್ಣು, ಶರತ್ ಕುಮಾರ್, ಮೋಹನ್ ಬಾಬು ನನ್ನ ನಿರೀಕ್ಷೆಗೂ ಮೀರಿದ ಬೆಂಬಲ ನೀಡಿದ್ದಾರೆ ಎಂದರು. 


ಶರತ್ ಕುಮಾರ್, ಕಣ್ಣಪ್ಪ ಕೇವಲ ಸಿನಿಮಾ ಅಲ್ಲ; ಇದು ನಮ್ಮ ಇತಿಹಾಸ. ಪ್ರತಿಯೊಬ್ಬರೂ ತಮ್ಮ ತಮ್ಮ ಪಾತ್ರಗಳನ್ನು ಜೀವಿಸಿದ್ದಾರೆ. ಈಗಲೂ ನಾವು ಆ ಪಾತ್ರಗಳಲ್ಲಿ ಉಳಿದಿದ್ದೇವೆ. ಅಷ್ಟೊಂದು ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ. ಎಲ್ಲರೂ ಇತಿಹಾಸವನ್ನು ಮರೆಯುತ್ತಿದ್ದಾರೆ. ನಾವು ನಮ್ಮ ಇತಿಹಾಸವನ್ನು ಹೇಳಬೇಕು. ಎಲ್ಲರೂ ಕಣ್ಣಪ್ಪನನ್ನು ನೋಡಬೇಕು" ಎಂದು ಹೇಳಿದರು.


ಇದನ್ನೂ ಓದಿ-ಮುದ್ದಾಗಿ ಫೊಸ್‌ ಕೊಟ್ಟ ಡಾರ್ಲಿಂಗ್‌ ಕೃಷ್ಣಾ- ಮಿಲನಾ ನಾಗರಾಜ್‌


ಮಧುಬಾಲಾ ಮಾತನಾಡಿ, "ಕಣ್ಣಪ್ಪನಂಥ ಪ್ರಾಜೆಕ್ಟ್‌ನಲ್ಲಿ ನಟಿಸಲು ನನಗೆ ಸಂತೋಷ ಮತ್ತು ಹೆಮ್ಮೆ ಇದೆ. ನನಗೆ ಇಂತಹ ಒಳ್ಳೆಯ ಅವಕಾಶ ನೀಡಿದ ಮೋಹನ್ ಬಾಬು ಮತ್ತು ವಿಷ್ಣು ಅವರಿಗೆ ಧನ್ಯವಾದಗಳು. ವಿಷ್ಣು ಮಂಚು ಅವರಿಗೆ ಸಿನಿಮಾ ನಿರ್ಮಾಣದಲ್ಲಿ ಸಾಕಷ್ಟು ಜ್ಞಾನವಿದೆ. ವಿಷ್ಣು ಅವರಂತಹವರು ಈ ಸಿನಿಮಾ ಮೂಲಕ ದೊಡ್ಡ ರಿಸ್ಕ್‌ ತೆಗೆದುಕೊಂಡಿದ್ದಾರೆ. ಒಂದು ದೊಡ್ಡ ಯಜ್ಞದಲ್ಲಿ ಪಾಲ್ಗೊಂಡಂತೆ ಭಾಸವಾಯಿತು" ಎಂದಿದ್ದಾರೆ. 


ಕಣ್ಣಪ್ಪ ಚಿತ್ರದಲ್ಲಿ ಅವಕಾಶ ನೀಡಿದ ಮೋಹನ್ ಬಾಬು, ವಿಷ್ಣು, ಮತ್ತು ಮುಖೇಶ್ ಸಿಂಗ್ ಅವರಿಗೆ ಧನ್ಯವಾದ. ಎಲ್ಲರೂ ಈ ಚಿತ್ರಕ್ಕೆ ತಮ್ಮ ಕೈಲಾದಷ್ಟು ಕೊಟ್ಟಿದ್ದಾರೆ. ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂದು ಭಾವಿಸುತ್ತೇನೆ ಎಂದರು ಪ್ರೀತಿ ಮುಖುಂದನ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.