Watch: ಐಫಾ 2019 ಅವಾರ್ಡ್ಸ್ ಸಮಾರಂಭದಲ್ಲಿ ಕತ್ರಿನಾ ಕೈಫ್ ಡ್ಯಾನ್ಸ್ ಮೋಡಿ!
ಐಫಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಭಾಗವಹಿಸಿ ಸೂಪರ್ ಡ್ಯಾನ್ಸ್ ಮೂಲಕ ಎಲ್ಲರ ಗಮನ ಸೆಳೆದಿದ್ದರು.
ನವದೆಹಲಿ: ಇತ್ತೀಚೆಗೆ ಮುಂಬೈನಲ್ಲಿ ನಡೆದ ಜನಪ್ರಿಯ ಐಫಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಭಾಗವಹಿಸಿ ಸೂಪರ್ ಡ್ಯಾನ್ಸ್ ಮೂಲಕ ಎಲ್ಲರ ಗಮನ ಸೆಳೆದಿದ್ದರು.
ಸಲ್ಮಾನ್ ಖಾನ್, ರಣವೀರ್ ಸಾಂಗ್, ದೀಪಿಕಾ ಪಡುಕೋಣೆ, ಶಾಹಿದ್ ಕಪೂರ್, ಸಾರಾ ಅಲಿ ಖಾನ್, ಅಲಿಯಾ ಭಟ್ ಸೇರಿದಂತೆ ಅನೇಕ ಸೆಲಬ್ರಿಟಿಗಳು ಈ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ರಂಗು ನೀಡಿದ್ದರು.
ಇದೀಗ ಈ ಕಾರ್ಯಕ್ರಮದಲ್ಲಿ ಗೋಲ್ಡನ್ ಡ್ರೆಸ್ ತೊಟ್ಟು ಸ್ಟೆಪ್ ಹಾಕಿದ್ದ ಕತ್ರಿನಾ ಕೈಫ್ ಅದರ ಒಂದು ಝಲಕ್ ಅನ್ನು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. 'ಥಗ್ಸ್ ಆಫ್ ಹಿಂದೂಸ್ತಾನ್' ಚಿತ್ರದ 'ಸುರೈಯಾ' ಹಾಡಿಗೆ ಡ್ಯಾನ್ಸ್ ಮಾಡಿರುವ ಕತ್ರಿನಾ, ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ಆ ವೀಡಿಯೋ ನೀವೂ ವೀಕ್ಷಿಸಿ...