Sapta Sagaradaache Ello Side B Steaming In OTT: ಸ್ಯಾಂಡಲ್‌ವುಡ್‌ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಅಭಿನಯಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯದೆಲ್ಲಡೆ ರಿಲೀಸ್‌ ಆಗಿದ್ದು, ಸದ್ಯ ಈ ಸಿನಿಮಾ ಒಟಿಟಿಯಲ್ಲಿ ಲಭ್ಯವಾಗಿದೆ. ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ತೆರೆಕಂಡ ಎರಡು ತಿಂಗಳಲ್ಲೇ ಗಣರಾಜ್ಯೋತ್ಸವದ ವಿಶೇಷವಾಗಿ ಓಟಿಟಿಗೆ ಲಗ್ಗೆಯಿಟ್ಟು, ಇದೇ ಜನವರಿ 25ರ ಮಧ್ಯರಾತ್ರಿಯಿಂದಲೇ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ಸ್ರೀಮಿಂಗ್‌ ಆಗುತ್ತಿದೆ.


COMMERCIAL BREAK
SCROLL TO CONTINUE READING

ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಓಟಿಟಿಗೆ ಬಂದ ವಿಷಯವನ್ನು ಚಿತ್ರದ ನಿರ್ದೇಶಕ ಹೇಮಂತ್ ರಾವ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎ ಮತ್ತು ಬಿ ಪಾರ್ಟ್ ಎರಡನ್ನೂ ಪ್ರೇಕ್ಷಕರು ಒಪ್ಪಿಕೊಂಡು, ಸದ್ಯ ಬಾಕ್ಸ್ ಆಫೀಸ್‌ನಲ್ಲೂ ಗೆದ್ದಿದ್ದವು. ಈ ಸಿನಿಮಾವನ್ನು ಕೇವಲ ಪ್ರೇಕ್ಷಕರು ಮಾತ್ರವಲ್ಲ, ಸೆಲೆಬ್ರಿಟಿಗಳು ಸಹ ಮೆಚ್ಚುಗೆ ಸೂಚಿಸಿದ್ದು, ಅವರಲ್ಲಿ ಹೆಸರಾಂತ ನಟ ಪ್ರಕಾಶ್ ರಾಜ್ ಕೂಡ ರಕ್ಷಿತ್ ಶೆಟ್ಟಿ ನಟನೆಯ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ.


ಜಾಹೀರಾತಿನಲ್ಲಿ ಕಾಣಿಸಿಕೊಂಡ ಡಿವೈನ್‌ ಸ್ಟಾರ್: ಪಂಚೆಯುಟ್ಟು ತುಳುನಾಡ ಸಂಸ್ಕೃತಿ ಬಿಂಬಿಸಿದ ರಿಷಬ್!


ಬಹುಭಾಷಾ ನಟ ಪ್ರಕಾಶ್‌ ರಾಜ್‌ ಆಗಾಗ ತಾವು ಮೆಚ್ಚಿದ ಚಿತ್ರಗಳ ಬಗ್ಗೆ  ಬರೆಯುತ್ತಲೇ ಇರುತ್ತಿದ್ದು, ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದರು. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದರು. ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದರು. 


ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿ, ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು. ಕೇವಲ ಕನ್ನಡದಲ್ಲಿ ಮಾತ್ರವಲ್ಲ, ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿತ್ತು. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಚಿತ್ರ, ಇದೀಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿತ್ತು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ