ನವದೆಹಲಿ: ದೇಶದ ಪ್ರತಿಯೊಬ್ಬರೂ 5G ಇಂಟರ್ನೆಟ್ ಸೇವೆಗಳ ಬಗ್ಗೆ ಕೇಳುತ್ತಿದ್ದಾರೆ ಮತ್ತು ಈ ವರ್ಷದ ಅಂತ್ಯದ ವೇಳೆಗೆ ದೇಶದಲ್ಲಿ ಬಹುನಿರೀಕ್ಷಿತ 5G ನೆಟ್‌ವರ್ಕ್ ಅನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ರೈಲ್ವೇ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸಂವಹನ ಮಾಧ್ಯಮವು ಭದ್ರತೆಗಾಗಿ ಸ್ಮಾರ್ಟ್ ಮತ್ತು ಸುಧಾರಿತ ತಾಂತ್ರಿಕ ವಿಧಾನಗಳನ್ನು ಹೊಂದಿರುವುದು ಬಹಳ ಮಹತ್ವವಾಗಿದ್ದು, ಇದು ದೂರದ ಪ್ರದೇಶಗಳಲ್ಲಿ, ವಿಶೇಷವಾಗಿ ಬುಡಕಟ್ಟು ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕ ಸಮಸ್ಯೆಗಳ ಬಗ್ಗೆ ಕೇಂದ್ರವು ಕೆಲಸ ಮಾಡುತ್ತದೆ ಮತ್ತು ಸಂವಹನ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ : Broccoli Juice Benefits: ಬ್ರೋಕೊಲಿ ಜ್ಯೂಸ್ ಸೇವನೆಯಿಂದಾಗುವ ಈ ಲಾಭ ನಿಮಗೆ ತಿಳಿದಿದೆಯೇ?


ಇದೆ ವೇಳೆ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾದ ಮತ್ತು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಹಲವಾರು ರೈಲುಗಳನ್ನು ಸುಟ್ಟುಹಾಕಿದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಉದ್ದೇಶಿಸಿ ಮಾತನಾಡಿದ ರೈಲ್ವೇ ಸಚಿವ ವೈಷ್ಣವ್, ರೈಲು ಹಾಗೂ ಬಸ್ಸು ಸೇರಿದಂತೆ ಸಾರ್ವಜನಿಕ ಆಸ್ತಿಯನ್ನು ಸುಟ್ಟುಹಾಕಿದವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.


ಇದನ್ನೂ ಓದಿ : Pratap Simha : 'ಮಂಡ್ಯ ಜನರ ಹೋರಾಟಕ್ಕೆ ಸಿಕ್ಕ ಜಯ'..!


'ಹಿಂಸಾಚಾರ ಮತ್ತು ಅಗ್ನಿಸ್ಪರ್ಶದಲ್ಲಿ ತೊಡಗಿರುವ ಯಾರನ್ನೂ ಬಿಡಲಾಗುವುದಿಲ್ಲ, ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡಿದ ಮತ್ತು ರೈಲುಗಳನ್ನು ಸುಟ್ಟುಹಾಕಿದವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.