ಸಾಹಿತ್ಯ ಸಂಸ್ಕೃತಿಗಳ ಬಗ್ಗೆ ಒಲವು

ಕಲ್ಪನಾ ಸಾಹಿತ್ಯ ಸಂಸ್ಕೃತಿಗಳ ಬಗ್ಗೆ ಒಲವನ್ನು ಇಟ್ಟು ಕೊಂಡಿದ್ದರು. ಪುಸ್ತಕ ಪ್ರೇಮಿಯಾಗಿದ್ದರು. ಒಳ್ಳೆಯ ಕವಿತೆಗಳನ್ನು ಬರೆದಿದ್ದರು. ಅಂಕಣಗಳನ್ನು ಬರೆದಿದ್ದರು. ‘ಯಾವ ಜನ್ಮದ ಮೈತ್ರಿ’ ಚಿತ್ರದ ಪಾತ್ರ ವಿವಾದಕ್ಕೆ ಸಿಲುಕಿದಾಗ ದಾಖಲೆಗಳೊಂದಿಗೆ ತಾವೇ ಸಮರ್ಥಿಸಿಕೊಂಡಿದ್ದರು ಮೊದಲಾದ ಹಲವು ಅಂಶಗಳು ಚರಿತ್ರೆಯಲ್ಲಿ ದಾಖಲಾಗಲಿಲ್ಲ

Manjunath Naragund
Jan 18,2025


ಪೋಸ್ಟ್ ಮಾರ್ಟಂ ವರದಿ ಪ್ರಕಾರ ಕಲ್ಪನಾ ೫೬ ನಿದ್ದೆ ಮಾತ್ರೆಗಳನ್ನು ನುಂಗಿದ್ದರು. ಮಾನಸಿಕವಾಗಿ ವಿಚಲಿತರಾದಾಗಲೆಲ್ಲ ನಿದ್ದೆ ಮಾತ್ರೆ ನುಂಗುವ ಹವ್ಯಾಸ ಅವರಿಗಿತ್ತು. ಹಿಂದೆ ಎರಡು ಮೂರು ಬಾರಿ ಹೀಗೆ ಸಾವಿನ ಅಂಚನ್ನು ಮುಟ್ಟಿ ಬಂದಿದ್ದರು. ಈ ಸಲ ನಿದ್ರಾ ಮಾತ್ರೆಗಳ ಪ್ರಮಾಣ ಅವರು ಕೊನೆಯುಸಿರೆಳೆವಂತೆ ಮಾಡಿತ್ತು.

ಆತ್ಮಹತ್ಯೆಗೆ ಶರಣು

ಇದರಿಂದ ಅವಮಾನಿತನಾದ ಬಸವರಾಜ ‘ ಹೌದು ನಾನು ಹಸು, ಹಲ್ಲು ಕೊಡು’ ಎಂದು ಹೇಳುತ್ತಾ ವೇದಿಕೆಯ ತುಂಬಾ ಓಡಾಡಲು ಆರಂಭಿಸಿದರು. ಜನ ಇನ್ನಷ್ಟು ಕೇಕೆ ಹಾಕಲು ಆರಂಭಿಸಿದಾಗ ಅಪಮಾನಗೊಂಡ ಬಸವರಾಜ್ ನಾಟಕವನ್ನು ಅಲ್ಲಿಗೇ ನಿಲ್ಲಿಸಿದರು. ಪರದೆ ಬಿದ್ದ ನಂತರ ನೇರವಾಗಿ ಕಲ್ಪನಾರ ಕಡೆ ಧಾವಿಸಿ ಕೆನ್ನೆಗೆ ಹೊಡೆದರು. ಇದರಿಂದ ವಿಚಲಿತರಾದ ಅವರು ವೇಷ ಕೂಡ ಬದಲಾಯಿಸದೆ ನೇರವಾಗಿ ಗೋಟೂರು ಪ್ರವಾಸಿ ಧಾಮಕ್ಕೆ ಬಂದು ಆತ್ಮ ಹತ್ಯೆ ಮಾಡಿಕೊಂಡರು

ಸಂಕೇಶ್ವರದಲ್ಲಿ ‘ಕುಮಾರ ರಾಮ’ ನಾಟಕ

ಕಲ್ಪನಾ ಆತ್ಮಹತ್ಯೆ ಮಾಡಿಕೊಂಡ ರಾತ್ರಿ ಸುಮಾರು ೨-೩೦ರ ವೇಳಗೆ ಸಂಕೇಶ್ವರದಲ್ಲಿ ‘ಕುಮಾರ ರಾಮ’ ನಾಟಕ ನಡೆದಿತ್ತು. ಅದರಲ್ಲಿ ಗುಡಗೇರಿ ಬಸವರಾಜು ಕುಮಾರ ರಾಮನಾಗಿದ್ದರೆ ಕಲ್ಪನಾ ಮಲತಾಯಿಯ ಪಾತ್ರದಲ್ಲಿದ್ದರು. ನಾಟಕದಲ್ಲಿ ಭಾಗವಹಿಸುವಾಗಲೇ ಕಲ್ಪನಾ ಅನ್ಯಮನಸ್ಕರಾಗಿದ್ದರು. ನಾಟಕದಲ್ಲಿ ಕುಮಾರ ರಾಮ ತನಗೆ ‘ಹಸಿವಾಗಿದೆ’ ಎಂದಾಗ ‘ರೊಟ್ಟಿ ತಿನ್ನು’ ಎಂದು ಹೇಳುವ ಬದಲು ‘ಹುಲ್ಲು ತಿನ್ನು’ ಎಂದು ಹೇಳಿದ್ದರು. ಜನ ಬಿದ್ದು ಬಿದ್ದು ನಕ್ಕರು

ದುರಂತದ ಸಾವು

ಚಿತ್ರ ರಸಿಕರ ಮನಸ್ಸಿನಲ್ಲಿ ಅಚ್ಚಳಿಯದ ಪಾತ್ರಗಳನ್ನು ನಿರ್ವಹಿಸಿ ಜನಪ್ರಿಯತೆಯ ಉತ್ತುಂಗಕ್ಕೇರಿದ, ನಟಿ ಕಲ್ಪನಾ ದುರಂತದ ಸಾವನ್ನಪ್ಪಿದವರು

VIEW ALL

Read Next Story