ಪಶ್ಚಿಮ ಬಂಗಾಳದಲ್ಲಿ ಜನಿಸಿದ ಮೌನಿ ರಾಯ್, 38ರ ಹರೆಯದಲ್ಲೂ ಸಖತ್ತಾಗಿ ಕಾಣಿಸುತ್ತಿದ್ದಾರೆ..
ಸಿನಿಮಾ, ಧಾರಾವಾಹಿಗಳಲ್ಲಿ ನಟಿಸುತ್ತಲೇ ಬಂದಿರುವ ನಟಿ ಸೋಷಿಯಲ್ ಮೀಡಿಯಾದಲ್ಲಿ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ.
1985 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಜನಿಸಿದ ನಟಿ ಮೌನಿ ರಾಯ್ ನಟನಾ ಕುಟುಂಬದಲ್ಲಿ ಜನಿಸಿದರು. ಅವರ ತಾಯಿ ರಂಗ ಕಲಾವಿದೆ ಎಂಬುದು ಗಮನಾರ್ಹ.
2004 ರಲ್ಲಿ ಬಾಲಿವುಡ್ ಚಲನಚಿತ್ರ "ರನ್" ನಲ್ಲಿ ನೃತ್ಯಗಾರ್ತಿಯಾಗಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ ಮೌನಿ
ರಾಯ್ ಧಾರಾವಾಹಿ, ಚಲನಚಿತ್ರಗಳಲ್ಲಿ ನಟಿಸುವುದನ್ನು ಮುಂದುವರೆಸಿದ್ದಾರೆ. ಕನ್ನಡದಲ್ಲಿ ಇದುವರೆಗೂ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ.
ಮೌನಿ ರಾಯ್ ಸಿನಿಮಾಗಳಿಗಿಂತ ಹೆಚ್ಚಾಗಿ ಪಂಜಾಬಿ ಮತ್ತು ಹಿಂದಿ ಧಾರಾವಾಹಿಗಳಲ್ಲಿ ನಿರಂತರವಾಗಿ ನಟಿಸುತ್ತಿದ್ದಾರೆ.
ಹಿಂದಿಯಲ್ಲಿ ಪ್ರಸಾರವಾದ "ನಾಗಿಣಿ" ಎಂಬ ಧಾರಾವಾಹಿಯಲ್ಲಿ ಮೌನಿ ಪ್ರಮುಖ ಪಾತ್ರವನ್ನು ನಿರ್ವಹಿಸಿದರು.
ಧಾರಾವಾಹಿ ಮತ್ತು ಚಲನಚಿತ್ರಗಳಲ್ಲಿ ನಟಿಸುತ್ತಿರುವ ಮೌನಿ ರಾಯ್‌ಗೆ ಯುಎಇ ಇತ್ತೀಚೆಗೆ "ಗೋಲ್ಡನ್ ವೀಸಾ" ನೀಡಿ ಗೌರವಿಸಿದೆ.