ಏರೋ ಇಂಡಿಯಾ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ (ಭಾನುವಾರ) ರಾತ್ರಿ ಸಿನಿಮಾ ರಂಗದವರೊಂದಿಗೆ ಔತಣಕೂಟದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಪಿಎಂ ಮೋದಿ ಸಿನಿ ಚಂದನವನದ ತಾರೆಯರೊಂದಿಗೆ ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು.
ರಾಕಿಭಾಯ್ ಯಶ್, ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿ ಹಲವರು ಭಾಗಿಯಾಗಿದ್ದರು.
ಕಾಂತಾರ ಸಿನಿಮಾ ಬಗ್ಗೆ ಒಂದಷ್ಟು ವಿಚಾರವನ್ನ ರಿಷಬ್ ಶೆಟ್ಟಿ ಮತ್ತು ವಿಜಯ್ ಕಿರಗಂದೂರು ಜೊತೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ.
ಇದೇ ಸಂದರ್ಭದಲ್ಲಿ ಪಿಎಂ ಮೋದಿ ಅವರು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಧೈರ್ಯ ಹೇಳಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಕೂಡ ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಜೊತೆ ಒಂದಷ್ಟು ಸಮಯ ಕಳೆದಿದ್ದಾರೆ.
ಶ್ರದ್ಧಾ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗೆ ಮನೀಶ್ ಪಾಂಡೇ