ರಾಗಿಣಿ ದ್ವಿವೇದಿ ಕನ್ನಡ ಚಿತ್ರರಂಗದ ಖ್ಯಾತ ನಟಿ.
2009 ರಲ್ಲಿ `ವೀರ ಮದಕರಿ' ಚಿತ್ರದಿಂದ ಸಿನಿಪಯಣ ಆರಂಭಿಸಿದ ರಾಗಿಣಿ ಸುಮಾರು 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
ಕೆಲ ಹಿಂದಿ,ಮಲಯಾಳಂ.ತೆಲಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ.
ಕಿಚ್ಚ ಸುದೀಪ್‌ರ `ವೀರ ಮದಕರಿ' ಚಿತ್ರದಿಂದ ಸಿನಿಪಯಣ ಆರಂಭಿಸಿದ ಇವರು ನಂತರ ಕನ್ನಡದ ಬಹುತೇಕ ನಟರೊಂದಿಗೆ ತೆರೆಹಂಚಿಕೊಂಡಿದ್ದಾರೆ.
ಶಿವಣ್ಣ ಜೊತೆ ನಟಿಸಿದ `ಶಿವ' ಚಿತ್ರಕ್ಕೆ ಸೈಮಾ ಪ್ರಶಸ್ತಿ ಕೂಡ ಪಡೆದಿದ್ದಾರೆ.
2011 ರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ನಂದಿನಿ ಹಾಲು ನಿಯಮಿತದ ರಾಯಭಾರಿಯಾಗಿರುವ ರಾಗಿಣಿ ನೋಂದಾಯಿತ ಅಭಿಮಾನಿಗಳ ಸಂಘವನ್ನು ಹೊಂದಿರುವ ಕನ್ನಡದ ಏಕೈಕ ನಟಿ.