ರಾಧಿಕಾ ಪಂಡಿತ್ ಅವರು ಕನ್ನಡ ಚಿತ್ರರಂಗದಲ್ಲಿ ಸಖತ್ ಫೇಮಸ್ ಆಗಿರೋ ನಟಿ.
2012 ರಲ್ಲಿ, ಬಿಡುಗಡೆಗೊಂಡ ಯೋಗರಾಜ್ ಭಟ್ ರ "ಡ್ರಾಮಾ" ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಜೊತೆಯಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡರು.
ಈ ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ಹೆಸರು ಮಾಡಿದರಿಂದ ರಾಧಿಕಾ ಅವರಿಗೂ ಸಹ ಒಳ್ಳೆ ಇಮೇಜ್ ಬಂತು.
ಮಿಸ್ಟರ್ ಅ೦ಡ್ ಮಿಸ್ಸಸ್ ರಾಮಾಚಾರಿಯಲ್ಲಿ ಪಂಡಿತ್ ಯಶ್ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ಯಶ್ ಹಾಗೂ ರಾಧಿಕಾ ಪಂಡಿತ್ ಅಭಿನಯಿಸಿದ ಎಲ್ಲಾ ಚಿತ್ರಗಳಲ್ಲಿ ಈ ಜೊಡಿ ಮೋಡಿ ಮಾಡಿದೆ.
ಕನ್ನಡದ ಅನೇಕ ನಟರೊಡನೆ ಅಭಿನಯಿಸಿರುವ ರಾಧಿಕಾ ಪಂಡಿತ್ ಈಗ ಕನ್ನಡ ಸಿನಿಮಾರಂಗದಲ್ಲಿ ಬಹುಬೇಡಿಕೆ ನಟಿಯಾಗಿದ್ದರು.