ಬೆಂಗಳೂರು: ಸ್ಯಾಂಡಲ್​ವುಡ್​ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಶೂಟಿಂಗ್ ಬಹುತೇಕ ಪೂರ್ಣವಾಗಿದೆ. ಟೀಸರ್, ಪೋಸ್ಟರ್ ಗಳಿಂದ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಈ ಸಿನಿಮಾ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತದೆ ಎಂದು ಸಿನಿಮಾ ಪಂಡಿತರು ಹೇಳುತ್ತಿದ್ದಾರೆ. ನಟ ಕಿಚ್ಚ ಸುದೀಪ್ ಮುಖ್ಯಭೂಮಿಕೆಯ ಬಹುತಾರಾಗಣದಲ್ಲಿ ಮೂಡಿಬರುತ್ತಿರುವ ಫ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ವನ್ನು ತೆರೆಮೇಲೆ ಕಾಣಲು ಅಭಿಮಾನಿಗಳು ತುದಿಗಾಲ ಮೇಲೆ ನಿಂತಿದ್ದಾರೆ. ಈ ಮಧ್ಯೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಈ ಸಿನಿಮಾ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ್ದಾರೆ.


COMMERCIAL BREAK
SCROLL TO CONTINUE READING

ಹೌದು, ‘ವಿಕ್ರಾಂತ್ ರೋಣ’ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಬಹುದೊಡ್ಡ ಹೆಮ್ಮೆ ತಂದುಕೊಡುತ್ತದೆ ಎಂದು ಜಾಕ್ವೆಲಿನ್ ಫರ್ನಾಂಡಿಸ್(Jacqueline Fernandez) ಹೇಳಿದ್ದಾರೆ. ಈ ಸಿನಿಮಾದ ಹಾಡೊಂದಕ್ಕೆ ಕಿಚ್ಚ ಸುದೀಪ್ ಜೊತೆ ಸೊಂಟ ಬಳುಕಿಸಿರುವ ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಸಿನಿಮಾ ಮತ್ತು ತಂಡದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.


ಇದನ್ನೂ ಓದಿ: Sandalwood StarWars: ಪುಡಂಗಿ ಎಂದ ನಟ ದರ್ಶನ್ ಗೆ ಜೋಗಿ ಪ್ರೇಮ್ ತಿರುಗೇಟು


ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶೂಟಿಂಗ್ ಸೆಟ್ ನಲ್ಲಿ ಕಿಚ್ಚ ಸುದೀಪ್(Kichcha Sudeep) ಜೊತೆಗಿರುವ ಫೋಟೋವನ್ನು ಹಂಚಿಕೊಂಡಿರುವ ಜಾಕ್ವೆಲಿನ್, ‘ನನ್ನ ಮೊದಲ ದಕ್ಷಿಣ ಭಾರತದ ಸಿನಿಮಾ ಶೂಟಿಂಗ್ ಅನುಭವ ಅದ್ಭುತವಾಗಿತ್ತು’ ಎಂದು ಹೇಳಿದ್ದಾರೆ. ಕಿಚ್ಚ ಸುದೀಪ್, ಜ್ಯಾಕ್ ಮಂಜುನಾಥ್ ಮತ್ತು ‘ವಿಕ್ರಾಂತ ರೋಣ’ ತಂಡಕ್ಕೆ ಬಾಲಿವುಡ್ ನಟಿ ಧನ್ಯವಾದ ಅರ್ಪಿಸಿದ್ದಾರೆ. ಅದರಲ್ಲೂ ಕಿಚ್ಚ ಸುದೀಪ್ ಜೊತೆಗಿನ ಶೂಟಿಂಗ್ ಅನುಭವ ಬಹುಕಾಲ ನೆನಪಿನಲ್ಲಿ ಉಳಿಯುತ್ತದೆ ಎಂದು ಜಾಕ್ವೆಲಿನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅನೂಪ್ ಭಂಡಾರಿ ಅವರ ನಿರ್ದೇಶ ಅದ್ಭುತವೆಂದು ಹೇಳಿರುವ ನಟಿ, ‘ನಿಮಗಿರುವ ಸ್ಪಷ್ಟತೆ ಮತ್ತು ಚಿಂತನೆ ಈ ಸಿನಿಮಾವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದಿದೆ. ‘ವಿಕ್ರಾಂತ್ ರೋಣ’(Vikrant Rona) ಖಂಡಿತವಾಗಿಯೂ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಹೆಮ್ಮೆ ತಂದುಕೊಡಲಿದೆ. ತಂಡದ ಎಲ್ಲರಿಗೂ ಧನ್ಯವಾದಗಳು, ಶೀಘ್ರವೇ ಮತ್ತೆ ಭೇಟಿಯಾಗೋಣ’ವೆಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: Rocking Star: ತಮ್ಮ ಸ್ಟಾರ್‌ಡಮ್ ಸೀಕ್ರೆಟ್ ಬಿಚ್ಚಿಟ್ಟ ರಾಕಿ ಬಾಯ್..!


ಕೊರೊನಾ ಸಾಂಕ್ರಾಮಿಕದ ಕಾರಣ ‘ವಿಕ್ರಾಂತ್ ರೋಣ’(Vikrant Rona) ಸಿನಿಮಾ ಚಿತ್ರೀಕರಣಕ್ಕೆ ಸ್ವಲ್ಪ ಅಡ್ಡಿಯಾಗಿತ್ತು. ಬಹುತೇಕ ಕೆಲಸ ಮುಗಿಸಿದ್ದ ಚಿತ್ರತಂಡ ಕೇವಲ ಒಂದು ಹಾಡಿನ ಶೂಟಿಂಗ್ ಮಾತ್ರ ಬಾಕಿ ಉಳಿಸಿಕೊಂಡಿತ್ತು. ಇದೀಗ ಅದನ್ನೂ ಪೂರ್ಣಗೊಳಿಸಲಾಗಿದೆ. ನಿರ್ಮಾಪಕರಾದ ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​ ಸೇರಿ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಿ.ಅಜನೀಶ್​ ಲೋಕನಾಥ್​ ಸಂಗೀತ ನೀಡಿರುವ ಈ ಸಿನಿಮಾ ಆಗಸ್ಟ್​ 19ಕ್ಕೆ ವಿಶ್ವದಾದ್ಯಂತ 3D ವರ್ಷನ್​ನೊಂದಿಗೆ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.   


ಸಿನಿಮಾದ ಶೂಟಿಂಗ್ ವೇಳೆ ಕಿಚ್ಚ ಸುದೀಪ್(Kichcha Sudeep) ಜೊತೆಗೆ ತಾವು ಸ್ವಲ್ಪ ಸ್ವಲ್ಪ ಕನ್ನಡ ಕಲಿತ್ತಿದ್ದೇನೆ ಎಂದು ನಟಿ ಜಾಕ್ವೆಲಿನ್ ಹೇಳಿಕೊಂಡಿದ್ದರು. ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಅನ್ನು ದುಬೈನ ಬುರ್ಜ್ ಖಲೀಫ ಮೇಲೆ ರಿಲೀಸ್ ಮಾಡುವ ಮೂಲಕ ಚಿತ್ರತಂಡ ಗಮನಸೆಳೆದಿತ್ತು.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.