ಬೆಂಗಳೂರು: ಖ್ಯಾತ ನಟ ಕಮಲ್ ಹಾಸನ್ ಅವರ ಕನ್ನಡ ಭಾಷೆಯ ಕುರಿತಾದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್‌ಕುಮಾರ್ (ಶಿವಣ್ಣ) ಮೊದಲ ಬಾರಿಗೆ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಕಮಲ್ ಹಾಸನ್ ಅವರು ‘ಥಗ್ ಲೈಫ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ “ತಮಿಳಿನಿಂದ ಕನ್ನಡ ಜನಿಸಿದೆ” ಎಂದು ಹೇಳಿದ್ದು, ಕನ್ನಡಿಗರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿವಾದಕ್ಕೆ ಶಿವರಾಜ್‌ಕುಮಾರ್ ತಮ್ಮದೇ ಆದ ರೀತಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಜೀ ಕನ್ನಡ ನ್ಯೂಸ್ ಆಯೋಜಿಸಿದ್ದ ರಿಯಲ್ ಸ್ಟಾರ್ಸ್ ಅವಾರ್ಡ್ಸ್-2025 ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಕಮಲ್ ಹಾಸನ್ ನನಗೆ ಬಹಳ ಇಷ್ಟ, ಅವರು ನನಗೆ ಫೇವರಿಟ್. ನನ್ನ ತಂದೆ ಡಾ. ರಾಜ್‌ಕುಮಾರ್ ಮತ್ತು ಕಮಲ್ ಅವರ ಸಂಬಂಧ ಬೇರೆಯೇ ಆಗಿತ್ತು. ಅದಕ್ಕಾಗಿ ನಾನು ಅವರ ಅಭಿಮಾನಿಯಲ್ಲ, ಬದಲಿಗೆ ಅವರನ್ನು ಸ್ಪೂರ್ತಿಯಾಗಿ ಭಾವಿಸಿದ್ದೇನೆ,” ಎಂದು ಶಿವರಾಜ್‌ಕುಮಾರ್ ಹೇಳಿದರು. ಕಾರ್ಯಕ್ರಮದಲ್ಲಿ ತಾವು ಕಮಲ್ ಅವರ ಜೊತೆಗಿದ್ದಾಗ ಈ ವಿಷಯ ದೊಡ್ಡದಾಗಿರುವುದು ಗೊತ್ತಾಗಲಿಲ್ಲ ಎಂದು ತಿಳಿಸಿದ ಅವರು, “ನಮ್ಮನ್ನು ಕಾರ್ಯಕ್ರಮಕ್ಕೆ ಕರೆದಿದ್ದರು, ಹೋದೆವು, ಬಂದೆವು, ಅಷ್ಟೇ,” ಎಂದರು.
ಇದನ್ನೂ ಓದಿ- ಬೇಕಿದ್ರೆ ಈ ನಟಿಯರನ್ನ ರಾಯಭಾರಿಯನ್ನಾಗಿ ಮಾಡಿ ತಮನ್ನಾ ಬೇಡ..! ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳಿಂದ ಎಚ್ಚರಿಕೆ
ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ಅವರಿಗೂ ಪ್ರೀತಿಯಿದೆ ಎಂದು ಶಿವಣ್ಣ ಸಮರ್ಥಿಸಿಕೊಂಡರು. “ಕಮಲ್ ಅವರು ಬೆಂಗಳೂರಿಗೆ ಬಂದಾಗ ಈ ಬಗ್ಗೆ ಎಲ್ಲರೂ ಮಾತನಾಡಬಹುದಿತ್ತು. ಈಗ ಯಾಕೆ ಇದನ್ನು ದೊಡ್ಡ ವಿಷಯ ಮಾಡುತ್ತೀರಿ?” ಎಂದು ಅವರು ಪ್ರಶ್ನಿಸಿದರು. ಆದರೆ, ಕನ್ನಡದ ಬಗ್ಗೆ ಮಾತನಾಡುವಾಗ ಕೇವಲ ಬಾಯಿಮಾತಿಗೆ ಸೀಮಿತವಾಗಬಾರದು ಎಂದು ಒತ್ತಿ ಹೇಳಿದ ಶಿವರಾಜ್‌ಕುಮಾರ್, “ಕನ್ನಡಕ್ಕಾಗಿ ನಾನು ಹೋರಾಟ ಮಾಡುತ್ತೇನೆ, ಕನ್ನಡಕ್ಕಾಗಿ ಸಾಯುತ್ತೇನೆ. ಕನ್ನಡ ಪ್ರೀತಿಯೆಂದರೆ ಕೇವಲ ಸ್ಟಾರ್ ನಟರಿಗೆ ಬೆಂಬಲ ನೀಡುವುದು ಮಾತ್ರವಲ್ಲ, ಹೊಸಬರನ್ನೂ ಬೆಳೆಸಬೇಕು,” ಎಂದು ಕರೆ ನೀಡಿದರು.
ಕಮಲ್ ಹಾಸನ್ ಅವರಿಗೆ ಈ ವಿಷಯದ ಗಂಭೀರತೆ ತಿಳಿದಿದೆ ಎಂದು ಶಿವಣ್ಣ ವಿಶ್ವಾಸ ವ್ಯಕ್ತಪಡಿಸಿದರು. “ಅವರು ಹಿರಿಯರು, ಯಾವುದು ಸರಿ, ಯಾವುದು ತಪ್ಪು ಎಂಬುದು ಅವರಿಗೆ ಗೊತ್ತು. ಅವರೇ ಈ ವಿಷಯವನ್ನು ಸರಿಪಡಿಸಿಕೊಳ್ಳುತ್ತಾರೆ,” ಎಂದು ತಿಳಿಸಿದರು.
ಈ ವಿವಾದದ ಬಗ್ಗೆ ಕೇರಳದಲ್ಲಿ ಮಾತನಾಡಿರುವ ಕಮಲ್ ಹಾಸನ್, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. “ನಾನು ಕನ್ನಡಿಗರ ಪ್ರೀತಿಯಿಂದಲೇ ಆ ಮಾತನ್ನು ಹೇಳಿದ್ದೆ. ಭಾಷೆಯ ಬಗ್ಗೆ ಆಳವಾದ ಚರ್ಚೆಯನ್ನು ಇತಿಹಾಸಕಾರರು ಮತ್ತು ಭಾಷಾತಜ್ಞರಿಗೆ ಬಿಟ್ಟಿದ್ದೇನೆ,” ಎಂದು ಅವರು ಹೇಳಿದ್ದಾರೆ.
ಕನ್ನಡಿಗರಲ್ಲಿ ಈ ವಿಷಯ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕೆಲವು ಕನ್ನಡಪರ ಸಂಘಟನೆಗಳು ಕಮಲ್ ಅವರ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ನಿಷೇಧಿಸುವಂತೆ ಒತ್ತಾಯಿಸಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









