ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಜೈಲುವಾಸ ಅನುಭವಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಪ್ರಾರಂಭವಾಗಿದ್ದ ಈ ಗಲಾಟೆ, ಕೊಲೆಯಲ್ಲಿ ಅಂತ್ಯ ಕಂಡಿದೆ.
ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ವಿಶ್ವದಾಖಲೆ! ಮಾರ್ಗನ್ ದಾಖಲೆ ಪುಡಿ
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹುಡುಕುತ್ತಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಈ ಕೇಸ್ʼಗೆ ಪ್ರಮುಖ ಸಾಕ್ಷಿಯಾಗಿ ಅದೇ ಮಾಹಿತಿ ಇರಲಿದೆ. ಕೊಲೆ ನಡೆದ ಬಳಿಕ ರೇಣುಕಾಸ್ವಾಮಿ ಮೊಬೈಲ್ ಅನ್ನು ಕೊಲೆ ಎಸಗಿದವರು ಮೋರಿಯಲ್ಲಿ ಎಸೆದಿದ್ದರು. ಇದೀಗ ಆ ಮೊಬೈಲ್ ಪೊಲೀಸರಿಗೆ ಸಿಕ್ಕಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ.
ಅಷ್ಟೇ ಅಲ್ಲದೆ, ರೇಣುಕಾಸ್ವಾಮಿ ಮೊಬೈಲ್ ಅನ್ನು ರಿಟ್ರೀವ್ ಮಾಡಲಾಗುತ್ತದೆ. ಒಂದು ವೇಳೆ ಆ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾದರೆ, ನಟ ದರ್ಶನ್ ಸೇರಿ ಇತರರಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ.
ಇದನ್ನೂ ಓದಿ: 7 ತಿಂಗಳು ಮೈದಾನದಿಂದ ಹೊರಗಿದ್ದು ಕ್ರಿಕೆಟ್ ನಿಯಮವನ್ನೇ ಮರೆತ್ರಾ ಕೆಎಲ್ ರಾಹುಲ್!
ರೇಣುಕಾ ಸ್ವಾಮಿ ಬಳಸಿದ್ದ ನಂಬರ್ʼನಲ್ಲೇ ಹೊಸ ಸಿಮ್ ಪಡೆದುಕೊಂಡು ಡೇಟಾ ರಿಟ್ರೀವ್ ಮಾಡಲಾಗಿದೆ. ಇನ್ನು ಆತ ಬಳಕೆ ಮಾಡಿದ್ದ ವಾಟ್ಸಪ್ ,ಇನ್ʼಸ್ಟಾಗ್ರಾಂ, ಫೇಸ್ ಬುಕ್ ಮುಂತಾದ ಆ್ಯಪ್ʼಗಳ ಮಾಹಿತಿ ಕೂಡ ಈಗ ಪೊಲೀಸರಿಗೆ ಸಿಕ್ಕಿದ್ದು, ಆತ ಯಾರಿಗೆಲ್ಲ ಸಂದೇಶ ಕಳಿಸಿದ್ದ? ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ ಮೆಸೇಜ್ ಏನು? ಅದಕ್ಕೆ ಆಕೆ ಕೊಟ್ಟ ಪ್ರತಿಕ್ರಿಯೆ ಏನು ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಇನ್ನು ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವೇ ಪ್ರಮುಖ ಸಾಕ್ಷಿಯಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ