Renukaswamy murder case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗತಿಯಲ್ಲಿ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಹತ್ಯೆಗೆ ಸಹಕರಿಸಿದ ಹಾಗೂ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಮೃತದೇಹ ಸಾಗಿಸಿದ್ದ ಸ್ಕಾರ್ಪಿಯೋ ಕಾರಿನ ಮಾಲಕ ಪುನೀತ್ ಸೇರಿ ಐವರನ್ನು ಬಂಧಿಸಲಾಗಿದೆ. ಈ ಮೂಲಕ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 18ಕ್ಕೆ ಏರಿದೆ.


COMMERCIAL BREAK
SCROLL TO CONTINUE READING

ಈ ನಡುವೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಹಿಂದಿನ ಅಸಲಿ ಕಾರಣ ಬಹಿರಂಗವಾಗಿದೆ. ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್, ಆತನ ಗೆಳತಿ ಪವಿತ್ರಾ ಗೌಡ ಸೇರಿದಂತೆ ಇದುವರೆಗೆ ಪೊಲೀಸರು 18 ಜನರನ್ನು ಬಂಧಿಸಿದ್ದಾರೆ. ಆರೋಪಿಗಳಿದ್ದ ಪೊಲೀಸ್ ಠಾಣೆಯ ಆವರಣದ ಗೋಡೆಗೆ ಶಾಮಿಯಾನ ಹಾಕಲಾಗಿತ್ತು. ಈ ವಿಚಾರದ ಬಗ್ಗ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.


ಇದನ್ನೂ ಓದಿ: ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?


ಕೊಲೆ ಮಾಡಿರುವ ಆರೋಪಿಗಳಿಗೆ ಪೊಲೀಸರೇ ರಾಜಾತಿಥ್ಯ ನೀಡಲಾಗುತ್ತಿದೆ. ಆರೋಪಿಗಳಿಗೆ ಬಿರಿಯಾನಿ, ಸಿಗರೇಟ್‌ ಸೇರಿದಂತೆ ಸಕಲ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ಇದು ಜನರಿಗೆ ಗೊತ್ತಾಗಬಾರದು ಅಂತಾ ಪೊಲೀಸರು ಠಾಣೆಗೆ ಶಾಮಿಯಾನ ಹಾಕಿದ್ದಾರೆ ಅಂತಾ ತೀವ್ರ ಚರ್ಚೆ ನಡೆಯುತ್ತಿದೆ. ಇದಲ್ಲದೆ ಆರೋಪಿಗಳ ಬಂಧನದ ಬಳಿಕ ಪೊಲೀಸ್‌ ಠಾಣೆಯೊಂದಕ್ಕೆ ಶಾಮಿಯಾನ ಹಾಕಿರುವುದು ಇತಿಹಾಸದಲ್ಲೇ ಇದೇ ಮೊದಲು ಎಂದು ಹೇಳಲಾಗಿದೆ. 


ಆದರೆ ಶಾಮಿಯಾನದ ಸೈಡ್‌ವಾಲ್ ಹಾಕಿಸಿದ್ದು ನಟ ದರ್ಶನ್‍ಗಾಗಿಯೇ ಅನ್ನೋ ಸತ್ಯ ಬಯಲಾಗಿದೆ. ಪೊಲೀಸರ ಮುಂದೆ ದರ್ಶನ್ ಮನವಿ ಮಾಡಿಕೊಂಡ ಹಿನ್ನೆಲೆ ಪೊಲೀಸರೇ ಈ ಕೆಲಸ ಮಾಡಿದ್ದಾರೆಂದು ತಿಳಿದುಂಬಿದೆ. ಪ್ರಕರಣದಲ್ಲಿ A1 ಆರೋಪಿಯಾಗಿರುವ ನಟ ದರ್ಶನ್‌, ʼಸರ್... ನನಗೆ ಒಂದೇ ಕಡೆ ಕುಳಿತುಕೊಳ್ಳಲು ಆಗುವುದಿಲ್ಲ. ನಾನು ವಾಕ್ ಮಾಡಬೇಕು. ನನ್ನ ಕೈಲಿ ಆಗುತ್ತಿಲ್ಲ. ನನ್ನ ಬಾಡಿ ರಿಲ್ಯಾಕ್ಸ್ ಆಗಬೇಕು. ಸಿಗರೇಟ್ ಇಲ್ಲದಿದ್ದರೆ ನನ್ನ ಕೈ ನಡುಗುತ್ತದೆ. ನೀವು ಪದೇ ಪದೇ ಪ್ರಶ್ನೆ ಮಾಡುತ್ತಲೇ ಇದ್ದೀರಿʼ ಅಂತಾ ಹೇಳಿದ್ದಾರಂತೆ. ಹೀಗಾಗಿಯೇ ಠಾಣೆಯ ಆವರಣದಲ್ಲಿ ದರ್ಶನ್ ತಿರುಗಾಡಲು ಸೈಡ್‌ವಾಲ್ ಹಾಕಲಾಗಿದೆ ಎಂದು ತಿಳಿದುಬಂದಿದೆ. 


ಇದನ್ನೂ ಓದಿ: ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.