ʼಕನ್ನಡಿಗರ ಸ್ವಾಭಿಮಾನವೇ ಮುಖ್ಯʼ.. ಫೋನ್ ಪೇ ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ ಸುದೀಪ್?

Kichcha Sudeep: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು.‌  

Written by - Savita M B | Last Updated : Jul 21, 2024, 01:39 PM IST
  • ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ
  • ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ
ʼಕನ್ನಡಿಗರ ಸ್ವಾಭಿಮಾನವೇ ಮುಖ್ಯʼ.. ಫೋನ್ ಪೇ ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ ಸುದೀಪ್? title=

Phone Pay: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. ಫೋನ್ ಪೇ ಬ್ರಾಂಡ್ ಅಂಬಾಸಿಡರ್ ಆಗಿರುವ ಕಿಚ್ವ ಸುದೀಪ್ ಅವರು ಕೂಡಾ ಈಗ ಕನ್ನಡಿಗರ ಪರ ನಿಂತಿದ್ದಾರೆ. 

ಇದನ್ನೂ ಓದಿ-ಸಿನಿರಂಗಕ್ಕೆ ಪ್ರವೇಶಿಸುವ ಮುನ್ನ ಐಶ್ವರ್ಯ ರೈ ಯಾವ ಕೆಲಸ ಮಾಡುತ್ತಿದ್ದರು ಗೊತ್ತಾ? ಐಶ್‌ ಲಕ್‌ ಬದಲಿಸಿದ್ದು ʼಆʼ ಜಾಹೀರಾತು!

ಫೋನ್ ಪೇ ಇನ್ನು ಒಂದು ದಿನದ ಒಳಗಾಗಿ ಕನ್ನಡಿಗರ ಕ್ಷಮೆ ಕೋರಿ, ರಾಜ್ಯ ಸರ್ಕಾರದ ನಿಲುವಿಗೆ ಬದ್ದವಾಗದಿದ್ದರೆ ತಾವು ಫೋನ್ ಪೇ ಬ್ರಾಂಡ್ ಅಂಬಾಸಡರ್ ಆಗಿ ಮುಂದುವರೆಯದೇ ಇರಲು ನಿರ್ಧರಿಸಿದ್ದಾರೆ. ಈಗ ಫೋನ್ ಪೇ ವಿಚಾರವಾಗಿ ಸುದೀಪ ಅವರ ನಿರ್ಧಾರ ಏನಾಗುತ್ತದೆ ಅನ್ನೋದು ಹಲವರ ಪ್ರಶ್ನೆಯಾಗಿತ್ತು. 

ಇದನ್ನೂ ಓದಿ-'ಐಶ್ವರ್ಯಾಗೆ ನನ್ನ ಅನುಮತಿ ಅಗತ್ಯವಿಲ್ಲ', ವಿಚ್ಛೇದನದ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಟ್ವೀಟ್ ವೈರಲ್! ಡಿವೋರ್ಸ್ ಫಿಕ್ಸ್?!‌

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರು ನಾಡು-ನುಡಿಯ ವಿಚಾರ ಬಂದಾಗ ಸದಾ ಮುಂದಿರುತ್ತಾರೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ʻʻಕಂಪನಿ, ಹಣಕ್ಕಿಂತಾ ಕನ್ನಡಿಗನಾಗಿ ನನ್ನ ಸ್ವಾಭಿಮಾನ ಮುಖ್ಯʼʼ ಎನ್ನುವುದು ಸುದೀಪ್ ಅವರ ನಿರ್ಧಾರವಾಗಿದೆ. ಈ ಕಾರಣದಿಂದ ಒಂದು ದಿನದ ಒಳಗಾಗಿ ಕಿಚ್ಚ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News