ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಯನಯದ ಚಿತ್ರ ಪೈಲ್ವಾನ್ ಈಗ ಪೈರಸಿ ಹಾವಳಿ ಮಧ್ಯದಲ್ಲಿಯೇ ಯಶಸ್ವಿ ಪ್ರದರ್ಶನ ಕಾಣುತ್ತಿದೆ.


COMMERCIAL BREAK
SCROLL TO CONTINUE READING

ಈ ಬೆನ್ನಲ್ಲೇ ಈಗ ಸುದೀಪ್ ಅವರು ಮಾಡಿರುವ 'ಬಳೆ' ಟ್ವೀಟ್ ಮಾತ್ರ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದೆ. ಸುದೀಪ್ ತಮ್ಮ ತಮ್ಮ ಟ್ವೀಟ್ ನಲ್ಲಿ  'ನಾನು ಹಾಗೂ ನನ್ನ ಸ್ನೇಹಿತರು, ಕೈಗೆ ಹಾಕಿರುವುದು ಕಡಗ, ಬಳೆ ಅಲ್ಲ. ನನಗೆ ನನ್ನ ಸಿನಿಮಾ ಬಿಟ್ಟರೆ ಬೇರೆನುಗೊತಿಲ್ಲ. ನನ್ನ ಮೌನ, ನನ್ನ ತಾಳ್ಮೆ, ಎರಡನ್ನು ಪರೀಕ್ಷಿಸಿದ್ದಾರೆ. ಸಂಪೂರ್ಣ ಪೈಲ್ವಾನ್ ತಂಡದ ಶ್ರಮವನ್ನು ಹಾಳುಮಾಡಲು ತಮ್ಮ ಶಕ್ತಿಯನ್ನು ಹಾಕಿದ್ದಾರೆ. ಇದರ ಹಿಂದಿರುವ ವ್ಯಕ್ತಿಗಳ ನೆಮ್ಮದಿಯ ನಿದ್ರೆ,ಇನ್ನು ಕೆಲವು ದಿನಗಳು ಮಾತ್ರ.' ಎಂದು ಟ್ವೀಟ್ ಮಾಡಿದ್ದರು. 


ಈಗ ಈ ಟ್ವೀಟ್ ಗೆ ಮಹಿಳೆಯರು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.