'ನಿಮಗೆ ನಾನು ಕನ್ನಡದಲ್ಲಿ ಪ್ರತಿಕ್ರಿಯಿಸಿದ್ದರೆ ಹೇಗಿರ್ತಿತ್ತು....! ಅಜಯ್ ದೇವಗನ್ ಗೆ ತಿರುಗೇಟು ನೀಡಿದ ಕಿಚ್ಚ ಸುದೀಪ್

 ಹಿಂದಿ ರಾಷ್ಟ್ರಭಾಷೆಯಲ್ಲ ಎಂದಿರುವ ನಟ ಕಿಚ್ಚ ಸುದೀಪ್ ಅವರ ಹೇಳಿಕೆ ಈಗ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ.

Written by - Zee Kannada News Desk | Last Updated : Apr 27, 2022, 08:58 PM IST
  • ಹಿಂದಿ ರಾಷ್ಟ್ರಭಾಷೆಯಲ್ಲ ಎಂದಿರುವ ನಟ ಕಿಚ್ಚ ಸುದೀಪ್ ಅವರ ಹೇಳಿಕೆ ಈಗ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ.
  • ಈಗ ಸುದೀಪ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಾಲಿವುಡ್ ನಟ ಅಜಯ್ ದೇವಗನ್ ಹಾಗಾದರೆ ಕನ್ನಡದ ಚಿತ್ರಗಳನ್ನು ಹಿಂದಿಗೆ ಏಕೆ ಡಬ್ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
  • ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸುದೀಪ್ ನಾನು ಎಲ್ಲಾ ಭಾಷೆಗಳನ್ನು ಗೌರವಿಸುತ್ತೇನೆ, ಆದರೆ ಒಂದು ವೇಳೆ ನಾನು ನಿಮಗೆ ಕನ್ನಡದಲ್ಲಿ ಪ್ರತಿಕ್ರಿಯಿಸಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತು ಎಂದು ತೀರುಗೇಟು ನೀಡಿದ್ದಾರೆ.
'ನಿಮಗೆ ನಾನು ಕನ್ನಡದಲ್ಲಿ ಪ್ರತಿಕ್ರಿಯಿಸಿದ್ದರೆ ಹೇಗಿರ್ತಿತ್ತು....! ಅಜಯ್ ದೇವಗನ್ ಗೆ ತಿರುಗೇಟು ನೀಡಿದ ಕಿಚ್ಚ ಸುದೀಪ್  title=

ಬೆಂಗಳೂರು:  ಹಿಂದಿ ರಾಷ್ಟ್ರಭಾಷೆಯಲ್ಲ ಎಂದಿರುವ ನಟ ಕಿಚ್ಚ ಸುದೀಪ್ ಅವರ ಹೇಳಿಕೆ ಈಗ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ.ಈಗ ಸುದೀಪ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಹಿಂದಿ ನಟ ಅಜಯ್ ದೇವಗನ್, ಹಾಗಾದರೆ ಕನ್ನಡದ ಚಿತ್ರಗಳನ್ನು ಹಿಂದಿಗೆ ಏಕೆ ಡಬ್ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸುದೀಪ್ ನಾನು ಎಲ್ಲಾ ಭಾಷೆಗಳನ್ನು ಗೌರವಿಸುತ್ತೇನೆ, ಆದರೆ ಒಂದು ವೇಳೆ ನಾನು ನಿಮಗೆ ಕನ್ನಡದಲ್ಲಿ ಪ್ರತಿಕ್ರಿಯಿಸಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: 'ವಿಕ್ರಾಂತ್‌ ರೋಣ' ಟೀಸರ್‌ಗೆ ಬಾಲಿವುಡ್‌ ನಟ ರಿತೇಶ್‌ ದೇಶ್‌ಮುಖ್ ಫುಲ್‌ ಖುಷ್..!‌

ಸುದೀಪ್ ಅವರ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ಹಿಂದಿಯಲ್ಲಿ ಪ್ರತಿಕ್ರಿಯಿಸಿದ ನಟ ಅಜಯ್ ದೇವಗನ್ ' ನನ್ನ ಸಹೋದರ ಕಿಚ್ಚ ಸುದೀಪ್, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲದಿದ್ದರೆ ನಿಮ್ಮ ಮಾತೃಭಾಷೆಯ ಚಲನಚಿತ್ರಗಳನ್ನು ಹಿಂದಿಗೆ ಡಬ್ ಮಾಡಿ ಏಕೆ ಬಿಡುಗಡೆ ಮಾಡುತ್ತೀರಿ? ,ಮತ್ತು ಹಿಂದಿ ಯಾವಾಗಲೂ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರ ಭಾಷೆಯಾಗಿತ್ತು, ಜನ ಗಣ ಮನ ಎಂದು ಅವರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: 1959 ರಲ್ಲೇ ಇಡೀ ದೇಶದಲ್ಲೇ ಮೊದಲ ಪ್ಯಾನ್ ಇಂಡಿಯಾ ಸಿನಿಮಾಗೆ ನಾಂದಿ ಹಾಡಿದ್ದ ಅಣ್ಣಾವ್ರು..!

ಇದಕ್ಕೆ ಗೌರವದಿಂದಲೇ ತಿರುಗೇಟು ನೀಡಿರುವ ನಟ ಕಿಚ್ಚ ಸುದೀಪ್  "ನಮ್ಮ ದೇಶದ ಪ್ರತಿಯೊಂದು ಭಾಷೆಯನ್ನು ನಾನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ ಸರ್. ನಾನು ಈ ವಿಷಯದಿಂದ ವಿರಾಮ ಪಡೆಯಬೇಕೆಂದು ನಾನು ಬಯಸುತ್ತೇನೆ..ನಾನು ಸಂಪೂರ್ಣವಾಗಿ ವಿಭಿನ್ನ ಸನ್ನಿವೇಶದಲ್ಲಿ ಹೇಳಿದ್ದೇನೆ.ನಿಮಗೆ ಯಾವಾಗಲೂ ಶುಭಾಶಯಗಳು ಶೀಘ್ರದಲ್ಲೇ ನಿಮ್ಮನ್ನು ಭೇಟಿಯಾಗಲು ಆಶಿಸುತ್ತೇನೆ." ಎಂದು ಹೇಳಿದ್ದಾರೆ.

ಇನ್ನು ಮುಂದುವರೆದು ಟ್ವೀಟ್ ಮಾಡಿರುವ ಅವರು 'ಸರ್ ಅಜಯ್ ದೇವಗನ್ ನೀವು ಹಿಂದಿಯಲ್ಲಿ ಕಳುಹಿಸಿದ ಸಂದೇಶವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಏಕೆಂದರೆ ನಾವೆಲ್ಲರೂ ಹಿಂದಿಯನ್ನು ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಕಲಿತಿದ್ದೇವೆ.ಯಾವುದೇ ಅಪರಾಧವಿಲ್ಲ ಸರ್,,, ಆದರೆ ನನ್ನ ಪ್ರತಿಕ್ರಿಯೆ ಕನ್ನಡದಲ್ಲಿ ನೀಡಿದ್ದರೆ ಏನಾಗಬಹುದು ಎಂದು ಆಶ್ಚರ್ಯ ಪಡುತ್ತಿದ್ದೆ. .!!ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್."ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 
 

Trending News