Yash in Ramayana : ಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ.


COMMERCIAL BREAK
SCROLL TO CONTINUE READING

ʼರಾಮಾಯಣʼಕ್ಕೆ ರಾಕಿ ಕೂಡ ನಿರ್ಮಾಪಕ ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ.


ಇದನ್ನೂ ಓದಿ:2ನೇ ಬಾರಿ ಅದ್ಧೂರಿಯಾಗಿ ಫಸ್ಟ್‌ ನೈಟ್‌ ಮಾಡಿಕೊಂಡ ಖ್ಯಾತ ನಟಿ..! ಫೋಟೋ ವೈರಲ್‌


ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದರು.


ಯಶ್ ಮಾತನಾಡಿ, ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ VFC ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ನ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ ಎಂದರು.


ಇದನ್ನೂ ಓದಿ:ಪ್ರಭಾಸ್‌ ಅಲ್ಲ.. ʼಆʼ ಯಂಗ್ ಹೀರೋ ಜೊತೆ ಸೌತ್‌ ನಟಿ ಅನುಷ್ಕಾ ರಹಸ್ಯ ಸಂಬಂಧ..?  


ನಮಿತ್ ಮಲ್ಹೋತ್ರಾ ಒಡೆತನದ ಪ್ರೈಮ್ ಫೋಕಸ್ ಸ್ಟುಡಿಯೋ ಜಾಗತಿಕ ಮಟ್ಟದ ಕಂಟೆಂಟ್ ಹಾಗೂ ವಿಭಿನ್ನ ಬಗೆಯ ಕ್ರಿಯೇಟ್ ಮಾಡುವ ಸ್ವತಂತ್ರ ನಿರ್ಮಾಣ ಕಂಪನಿಯಾಗಿದೆ. ಈ ಸಂಸ್ಥೆ ಸದ್ಯ ಮೂರು ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ. ಆ ಪೈಕಿ ರಾಮಾಯಣ ಕೂಡ ಒಂದು.


ಯಶ್ ತಮ್ಮದೇ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಎಂಬ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಬ್ಯಾನರ್ ನಡಿ 'ಟಾಕ್ಸಿಕ್' ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.  ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ 'ಮಾನ್ಸ್ಟರ್ ಮೈಂಡ್' ಕ್ರಿಯೇಷನ್ಸ್ ಕೂಡ 'ಟಾಕ್ಸಿಕ್' ಸಿನಿಮಾದ ನಿರ್ಮಾಣದಲ್ಲಿ ಪಾಲುದಾರಿಕೆಯನ್ನು ಹೊಂದಿದೆ. ಇದೇ ಬ್ಯಾನರ್ ನಡಿ 'ರಾಮಾಯಣ' ಸಿನಿಮಾಗೂ  ಯಶ್ ಬಂಡವಾಳ ಹೂಡುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.