ನಿರ್ದೇಶಕ ಯೋಗರಾಜ್ ಭಟ್ ಧ್ವನಿಯಲ್ಲಿ ʼಆಪಲ್ ಕಟ್ʼ ಚಿತ್ರದ ಟೀಸರ್..! 

Yogaraj Bhat : ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಆಪಲ್‌ ಕಟ್‌ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಚಿತ್ರದ ಟೀಸರ್‌ಗೆ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಧ್ವನಿ ನೀಡಿದ್ದಾರೆ. 

Written by - YASHODHA POOJARI | Edited by - Krishna N K | Last Updated : Oct 7, 2023, 04:54 PM IST
  • ಕಟ್‌ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ.
  • ಟೀಸರ್‌ಗೆ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಧ್ವನಿ ನೀಡಿದ್ದಾರೆ.
  • ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಆಪಲ್‌ ಕಟ್‌ ಚಿತ್ರ.
ನಿರ್ದೇಶಕ ಯೋಗರಾಜ್ ಭಟ್ ಧ್ವನಿಯಲ್ಲಿ ʼಆಪಲ್ ಕಟ್ʼ ಚಿತ್ರದ ಟೀಸರ್..!  title=

Apple cut Kannada movie : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ ಸಿಂಧು ಗೌಡ ನಿರ್ದೇಶನದ ಹಾಗೂ ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಾಣ ಮಾಡಿರುವ ʼಆಪಲ್ ಕಟ್ʼ ಚಿತ್ರದ ಟೀಸರ್‌ಗೆ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.

ಹೊಸತಂಡದ ಹೊಸಪ್ರಯತ್ನಕ್ಕೆ ಬೆಂಬಲ ನೀಡಿದ್ದ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಚಿತ್ರತಂಡ ಧನ್ಯವಾದ ಹೇಳುವುದರೊಂದಿಗೆ, ಹುಟ್ಟುಹಬ್ಬದ (ಅಕ್ಟೋಬರ್ 8) ಶುಭಾಶಯವನ್ನು ತಿಳಿಸಿದೆ. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಚಿತ್ರ. 

ಇದನ್ನೂ ಓದಿ: ಕ್ಯೂಟ್‌ ನೋಟದಿಂದಲೇ ಯುವಕರ ಹೃದಯಕ್ಕೆ ಸಿಹಿ ಗಾಯ ಮಾಡಿದ ಜಾನ್ವಿ..!

ಸೂರ್ಯ ಗೌಡ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಅಶ್ವಿನಿ ಪೋಲೆಪಲ್ಲಿ. ಚಿತ್ರದಲ್ಲಿ ಅಪ್ಪಣ್ಣ, ಅಭಿಜಿತ್, ಮೀನಾಕ್ಷಿ, ಬಾಲ ರಾಜವಾಡಿ ಸೇರಿದಂತೆ ಹಲವು ಕಲಾವಿದರು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಸತ್ಯಪ್ರಕಾಶ್ ಬರೆದಿದ್ದಾರೆ. ವಾಸುಕಿ ವೈಭವ್, ವಿಜಯಶ್ರೀ ಹಾಡಿದ್ದಾರೆ. ರಾಜೇಶ್ ಗೌಡ ಛಾಯಾಗ್ರಹಣ, ಸುಚೇಂದ್ರ ಎನ್ ಮೂರ್ತಿ ಸಂಕಲನ ʼಆಪಲ್ ಕಟ್ʼ ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News