Apple cut Kannada movie : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ ಸಿಂಧು ಗೌಡ ನಿರ್ದೇಶನದ ಹಾಗೂ ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಾಣ ಮಾಡಿರುವ ʼಆಪಲ್ ಕಟ್ʼ ಚಿತ್ರದ ಟೀಸರ್‌ಗೆ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.


COMMERCIAL BREAK
SCROLL TO CONTINUE READING

ಹೊಸತಂಡದ ಹೊಸಪ್ರಯತ್ನಕ್ಕೆ ಬೆಂಬಲ ನೀಡಿದ್ದ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಚಿತ್ರತಂಡ ಧನ್ಯವಾದ ಹೇಳುವುದರೊಂದಿಗೆ, ಹುಟ್ಟುಹಬ್ಬದ (ಅಕ್ಟೋಬರ್ 8) ಶುಭಾಶಯವನ್ನು ತಿಳಿಸಿದೆ. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಚಿತ್ರ. 


ಇದನ್ನೂ ಓದಿ: ಕ್ಯೂಟ್‌ ನೋಟದಿಂದಲೇ ಯುವಕರ ಹೃದಯಕ್ಕೆ ಸಿಹಿ ಗಾಯ ಮಾಡಿದ ಜಾನ್ವಿ..!


ಸೂರ್ಯ ಗೌಡ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಅಶ್ವಿನಿ ಪೋಲೆಪಲ್ಲಿ. ಚಿತ್ರದಲ್ಲಿ ಅಪ್ಪಣ್ಣ, ಅಭಿಜಿತ್, ಮೀನಾಕ್ಷಿ, ಬಾಲ ರಾಜವಾಡಿ ಸೇರಿದಂತೆ ಹಲವು ಕಲಾವಿದರು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಸತ್ಯಪ್ರಕಾಶ್ ಬರೆದಿದ್ದಾರೆ. ವಾಸುಕಿ ವೈಭವ್, ವಿಜಯಶ್ರೀ ಹಾಡಿದ್ದಾರೆ. ರಾಜೇಶ್ ಗೌಡ ಛಾಯಾಗ್ರಹಣ, ಸುಚೇಂದ್ರ ಎನ್ ಮೂರ್ತಿ ಸಂಕಲನ ʼಆಪಲ್ ಕಟ್ʼ ಚಿತ್ರಕ್ಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.