Garadi Shoot In Badami: ಬಾದಾಮಿಯಲ್ಲಿ ಯೋಗರಾಜ್ ಭಟ್ಟರ "ಗರಡಿ"

Garadi Shoot In Badami:  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ  ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಹಾಗೂ ಕೌರವ ಬಿ.ಸಿ.ಪಾಟೀಲ್ ಪ್ರಮುಖ ತಾರಾ ವೃಂದದಲ್ಲಿದ್ದಾರೆ. 

Written by - YASHODHA POOJARI | Edited by - Nitin Tabib | Last Updated : Mar 29, 2022, 06:04 PM IST

    ಐತಿಹಾಸಿಕ ಪಟ್ಟಣ ಬಾದಾಮಿಯಲ್ಲಿ 'ಗರಡಿ' ಚಿತ್ರೀಕರಣ

  • ಚಿತ್ರೀಕರಣದಲ್ಲಿ ಭಾಗವಹಿಸಿದ ಬಿ.ಸಿ. ಪಾಟೀಲ್
  • ದರ್ಶನ್ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ
Garadi Shoot In Badami: ಬಾದಾಮಿಯಲ್ಲಿ ಯೋಗರಾಜ್ ಭಟ್ಟರ  "ಗರಡಿ"  title=
Garadi Shooting In Badami

Garadi Shoot In Badami:  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ  ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಹಾಗೂ ಕೌರವ ಬಿ.ಸಿ.ಪಾಟೀಲ್ ಪ್ರಮುಖ ತಾರಾ ವೃಂದದಲ್ಲಿದ್ದಾರೆ. ಖ್ಯಾತ ನಟ ಯೋಗರಾಜ್ ಭಟ್ (Yograj Bhatt) ನಿರ್ದೇಶನದ, ವನಜಾ ಪಾಟೀಲ್ (BC Patil) ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ (Badami) ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಈ ಸುಂದರ ತಾಣದಲ್ಲಿ "ಗರಡಿ" ಚಿತ್ರದ ಟೈಟಲ್ ಸಾಂಗ್ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಕರ್ನಾಟಕ ರಾಜ್ಯದ ಮಂತ್ರಿಗಳು, ನಟರು, ನಿರ್ಮಾಪಕರೂ ಆಗಿರುವ ಕೌರವ ಬಿ.ಸಿ.ಪಾಟೀಲ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಗರಡಿ ಮನೆಯಲ್ಲಿ ತರಬೆತಿ ಪಡೆದಿರುವ ಸಾಕಷ್ಟು ಕುಸ್ತಿಪಟುಗಳು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.  ಬರೀ ಹಾಡಿನ ಚಿತ್ರೀಕರಣವಷ್ಟೇ ಅಲ್ಲದೇ ನಾಯಕ ಸೂರ್ಯ, ನಾಯಕಿ ಸೋನಾಲ್ ಮಾಂಟೆರೊ, ಕೌರವ ಬಿ‌.ಸಿ.ಪಾಟೀಲ್ ಮುಂತಾದವರ ಅಭಿನಯದಲ್ಲಿ ಮಾತಿನ ಭಾಗದ ಚಿತ್ರೀಕರಣ ಸಹ ನಡೆದಿದೆ.

ಇದನ್ನೂ ಓದಿ-Gandharva First Look: 'ಗಂಧರ್ವ' ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ರಾಘವೇಂದ್ರ ರಾಜಕುಮಾರ್

ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಈ ಚಿತ್ರದ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಹಳ ದಿನಗಳ ನಂತರ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ವಿ.ಹರಿಕೃಷ್ಣ ಅವರ ಸುಮಧುರ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ-Viral Photo: ಗುಟ್ಟಾಗಿ ವಿವಾಹವಾಗಿದ್ದಾರೆಯೇ Alia Bhatt-Ranabir Kapoor?

ಸೂರ್ಯ, ಸೋನಾಲ್ ಮಾಂಟೆರೊ, ಕೌರವ ಬಿ.ಸಿ.ಪಾಟೀಲ್, ರವಿಶಂಕರ್, ಎಸ್.ಟಿ.ಸೋಮಶೇಖರ್, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಸೂರಜ್ ಬೇಲೂರ್, ಕಾಮಿಡಿ ಕಿಲಾಡಿಗಳು ನಯನ, ತ್ರಿವೇಣಿ(ಟಗರು), ರವಿಚೇತನ್, ತೇಜಸ್ವಿನಿ ಪ್ರಕಾಶ್ ಮುಂತಾದವರು "ಗರಡಿ" ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News