Yuva Movie: ಅದ್ಧೂರಿಯಾಗಿ ನಡೆದ ʻಯುವʼ ಸಿನಿಮಾ ಪ್ರೀ ರಿಲೀಸ್ ಇವೆಂಟ್.!

Yuva Movie Pre Release Event: ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ. ಯುವ ಸಿನಿಮಾವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.

Written by - Chetana Devarmani | Last Updated : Mar 25, 2024, 10:54 AM IST
  • ಯುವ ರಾಜಕುಮಾರ್ ಸ್ಯಾಂಡಲ್‌ವುಡ್‌ಗೆ ಎಂಟ್ರಿ
  • ʻಯುವʼ ಸಿನಿಮಾ ಪ್ರೀ ರಿಲೀಸ್ ಇವೆಂಟ್.!
  • ಸಂತೋಷ್ ಆನಂದರಾಮ್ ನಿರ್ದೇಶನದ ಸಿನಿಮಾ
Yuva Movie: ಅದ್ಧೂರಿಯಾಗಿ ನಡೆದ ʻಯುವʼ ಸಿನಿಮಾ ಪ್ರೀ ರಿಲೀಸ್ ಇವೆಂಟ್.!  title=

Yuva Movie Pre Release Event: ರಾಜಕುಮಾರ, ಕೆಜಿಎಫ್, ಕಾಂತಾರದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ ಮೂಲಕ ವಿಜಯ್ ಕಿರಗಂದೂರ್ ಅವರು‌ ರಾಜ್‌ ಮನೆಯತನದ ಕುಡಿಯೊಂದಿಗೆ ಯುವ ಚಿತ್ರವನ್ನು ನಿರ್ಮಿಸಿದ್ದಾರೆ. ಯುವ ಸಿನಿಮಾ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ. ಯುವ ಸಿನಿಮಾವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ. 

ಹೊಸಪೇಟೆಯ ಪುನೀತ್ ರಾಜಕುಮಾರ್ ಮೈದಾನದಲ್ಲಿ ಯುವ ಸಿನಿಮಾ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯಿತು. ಯುವ ಸಿನಿಮಾ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದರಾಮ್, ನಾಯಕ ಯುವ ರಾಜಕುಮಾರ್, ನಟ ಅಚ್ಯುತಕುಮಾರ್, ಸುಧಾರಾಣಿ, ಹಿತ, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರು ಆಗಮಿಸಿದ್ದರು.  

ಇದನ್ನೂ ಓದಿ: ಮಾಧುರಿ ದೀಕ್ಷಿತ್‌ ಕೂದಲಿಗೆ ಇದೇ ಎಣ್ಣೆ ಹಾಕೋದಂತೆ.. ಕಪ್ಪಾದ ಹೊಳೆಯುವ ಕೇಶರಾಶಿಯ ರಹಸ್ಯ ಇಲ್ಲಿದೆ..!

ಇಂದು ಈ ಯುವ ಸಿನಿಮಾಆಗಲು ಪ್ರಮುಖ ಕಾರಣ ಅಶ್ವಿನಿ ಪುನೀತ್ ರಾಜಕುಮಾರ್.‌ ಅವರು ವಿಜಯ್ ಕಿರಗಂದೂರ್ ಅವರಿಗೆ ಫೋನ್ ಮಾಡಿ ನಮ್ಮ ಗುರು ಅಂದರೆ ಯುವ ರಾಜಕುಮಾರ್ ಅವರನ್ನು ನಿಮ್ಮ ಸಂಸ್ಥೆಯ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸಿ ಎಂದು ಕೇಳಿದರು. ಅವರ ಮಾತಿಗೆ ವಿಜಯ್ ಕಿರಗಂದೂರ್ ಅವರು ಒಪ್ಪಿಕೊಂಡರು. ಬಳಿಕ ಯುವ ಸಿನಿಮಾ ನಿರ್ಮಾಣ ಮಾಡಿದರು. ಯುವ ರಾಜಕುಮಾರ್ ಕೂಡ ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ಹೇಳಿದರು.

ಯುವ ಅವರು ಯಾವಾಗಲೂ ಚಿತ್ರರಂಗದಲ್ಲಿ ಓಡುವ ಕುದುರೆಯಾಗಿರಲಿ ಎಂದು. ಇನ್ನು ನನ್ನ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ಇದೇ ಮಾರ್ಚ್ 29 ರಂದು ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಬಂದು ಚಿತ್ರ ನೋಡಿ ಪ್ರೋತ್ಸಾಹಿಸಿ. ಈ ಸಂದರ್ಭದಲ್ಲಿ ನಾನು ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ, ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ, ನನ್ನ ತಂಡಕ್ಕೆ ಹಾಗೂ ವಿಶೇಷವಾಗಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು. 

ಇದನ್ನೂ ಓದಿ: Yuva: ʻಯುವʼ ಪ್ರೀ-ರಿಲೀಸ್‌ ಇವೆಂಟ್‌ನಲ್ಲಿ ಕಣ್ಣೀರಿಟ್ಟ ಅಶ್ವಿನಿ ಪುನೀತ್‌ ರಾಜ್‌ಕುಮಾರ್:‌ ಅಪ್ಪು ಮಡದಿ ಅತ್ತಿದ್ದೇಕೆ?? 

ನಾನು ಮೊದಲು ನನ್ನ‌ ಚಿಕ್ಕಪ್ಪ ಪುನೀತ್ ರಾಜಕುಮಾರ್ ಹಾಗೂ ಚಿಕ್ಕಮ್ಮ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾತನಾಡಿದ ಯುವ ರಾಜಕುಮಾರ್, ಏಕೆಂದರೆ ನನ್ನನ್ನು ನಾಯಕನನ್ನಾಗಿ ಮಾಡಿ ಎಂದು ಅವರಿಬ್ಬರು ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಸರ್ ಗೆ ಹೇಳಿದ್ದಾರೆ. ಅವರಿಂದಲೇ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರದಲ್ಲಿ ನಟಿಸಲು ಸಾಧ್ಯವಾಗಿದೆ. ನಿರ್ಮಾಪಕರಾದ ವಿಜಯ್ ಕಿರಗಂದೂರ್ ಹಾಗೂ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ನಾನು ಚಿರ ಋಣಿ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಹಿರಿಯ ನಟರಾದ ಅಚ್ಯುತಕುಮಾರ್, ಸುಧಾರಾಣಿ ಮುಂತಾದವರಿಂದ ಸಾಕಷ್ಟು ಕಲಿತಿದ್ದೇನೆ‌. ನಾಯಕಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಇಡೀ ತಂಡದ ಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು. 

ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್ ಮುಂತಾದವರು ಯುವ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ಸಮಾರಂಭದಲ್ಲಿ ಕರ್ನಾಟಕದ ಹೆಸರಾಂತ ಕಲಾವಿದರ ಗಾಯನ, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮಗಳು ಸಹ ಅದ್ಭುತವಾಗಿ ಮೂಡಿಬಂತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News