Yuva Rajkumar : ವಿಜಯ್ ಕಿರಗಂದೂರ್ ಅವರ ಪತ್ನಿ ಶ್ರೀಮತಿ ಶೈಲಜಾ ವಿಜಯ್ ಕ್ಲಾಪ್ ಮಾಡುವ ಮೂಲಕ “ಎಕ್ಕ” ಚಿತ್ರಕ್ಕೆ ನಾಂದಿ ಹಾಡಲಾಯಿತು, ಮೊದಲ ಶಾಟ್ ಅನ್ನು ನಟರಾಕ್ಷಸ ಡಾಲಿ ಧನಂಜಯ್ ನಿರ್ದೇಶಿಸಿದ್ದು, ನಿರ್ಮಾಪಕ ಕಾರ್ತಿಕ ಗೌಡ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮೀ ರಾಮಕೃಷ್ಣ ಕ್ಯಾಮೆರಾ ಬಟನ್ ಆನ್ ಮಾಡುವ ಮೂಲಕ ಚಾಲನೆ ನೀಡಿದರು. ಕಾಶ್ಮೀರ, ಬೆಂಗಳೂರು, ಮೈಸೂರು, ದೆಹಲಿ, ಕೋಲ್ಕತ್ತಾ, ಮುಂಬೈ ಸೇರಿದಂತೆ ಹಲವಾರು ಸ್ಥಳಗಳಲ್ಲಿ “ಎಕ್ಕ” ಚಿತ್ರದ ಚಿತ್ರೀಕರಣ ನಡೆಯುವುದಾಗಿ ತಂಡ ಇಂದು ತಿಳಿಸಿದೆ.
ಚಿತ್ರದ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, ಎಕ್ಕ ಒಂದು ಮೆಗಾ ಚಿತ್ರವಾಗಿದ್ದು, ಇದರ ಜವಾಬ್ದಾರಿ ಹೊತ್ತಿರುವ ಹೆಮ್ಮೆ ನನಗಿದೆ. ಚಿತ್ರದ ಎಲ್ಲ ನಿರ್ಮಾಪಕರು, ಕನ್ನಡ ಜನರು, ಯುವ ರಾಜ್ ಕುಮಾರ್ ಮತ್ತು ಅವರ ಅಭಿಮಾನಿಗಳ ಎಲ್ಲರ ನಂಬಿಕೆಯನ್ನು ಈ ಚಿತ್ರ ಉಳಿಸಲಿದೆ, ಜನರ ಮೇಲೆ ಆಳವಾದ ಭಾವನಾತ್ಮಕ ಪ್ರಭಾವ ಬೀರಲಿದೆ ಎಂದು ತಿಳಿಸಿದರು.
ಇದನ್ನೂ ಓದಿ:ರಜನಿ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಕಾದಿದೆ 3 ಬಿಗ್ ಸರ್ಪ್ರೈಸ್..! ಏನ್ ಗೊತ್ತೆ..?
ಚಿತ್ರದ ನಾಯಕ ನಟ ಯುವ ರಾಜ್ ಕುಮಾರ್ ಮಾತನಾಡಿ, ತಾಯಿ ಆಶಿರ್ವಾದದೊಂದಿಗೆ, ಅಪ್ಪು ಚಿಕ್ಕಪ್ಪನ ಆಶಿರ್ವಾದದೊಂದಿಗೆ ಇವತ್ತು "ಎಕ್ಕ" ಚಿತ್ರವನ್ನು ಆರಂಭಿಸಿದ್ದೇವೆ. ಮೂರು ಹೆಸರಾಂತ ನಿರ್ಮಾಣ ಸಂಸ್ಥೆಗಳೊಡನೆ, ರೋಹಿತ್ ಪದಕಿ ಅಂತಹ ದೊಡ್ಡ ನಿರ್ದೇಶಕರೊಡನೆ ಕೆಲಸ ಮಾಡುತ್ತಿರುವುದು ನನಗೆ ತುಂಬಾ ಖುಷಿ ಇದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಚಿತ್ರದ ನಾಯಕಿ ಸಂಪದಾ ಮಾತನಾಡಿ, ಎಕ್ಕ ಚಿತ್ರದ ಆರಂಭ ಬಹಳ ಮಂಗಳಕರವಾಗಿ ನೆರವೇರಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಚಿತ್ರೀಕರಣವನ್ನು ನಾನು ಕಾತುರವಾಗಿ ಎದುರು ನೋಡುತ್ತಿದೇನೆ ಎಂದು ತಿಳಿಸಿದರು.
ಇದನ್ನೂ ಓದಿ:ಎಲಿಮಿನೇಷನ್ ಅಲ್ಲ.. ʼಈʼ ಕಾರಣದಿಂದ ಕನ್ನಡ ಬಿಗ್‌ಬಾಸ್ ಮನೆಯಿಂದ ಹೊರಬರುತ್ತಾರಾ ಸ್ಟ್ರಾಂಗ್ ಲೇಡಿ ಸ್ಪರ್ಧಿ!?
ರೋಹಿತ್ ಪದಕಿ ನಿರ್ದೇಶನದ “ಎಕ್ಕ” ಒಬ್ಬ ಯುವಕನ ಕಥೆಯನ್ನು ಹೇಳುತ್ತದೆ. ಒಬ್ಬ ಮನುಷ್ಯನು ಭೂಗತ ಲೋಕಕ್ಕೆ ತುತ್ತಾದಾಗ, ಆತನಿಗೆ ಆಗುವ ಅನುಭವಗಳನ್ನು ಹೇಳುವ ಕಥೆಯೇ “ಎಕ್ಕ”. ಈ ಚಿತ್ರದಲ್ಲಿ ಯುವ ರಾಜ್ ಕುಮಾರ್, ಸಂಪದಾ, ಅತ್ತುಲ್ ಕುಲಕರ್ಣೀ, ಶ್ರುತಿ ಕೃಷ್ಣ, ರಾಹುಲ್ ದೇವ್ ಶೆಟ್ಟಿ ಮುಂತಾದವರು ನಟಿಸಲಿದ್ದು, ಚಿತ್ರಿಕಥೆಯನ್ನು ರೋಹಿತ್ ಪದಕಿ ಮತ್ತು ವಿಕ್ರಮ್ ಹತ್ವಾರ್ ರಚಿಸಿರುತ್ತಾರೆ. ಚಿತ್ರಕ್ಕೆ ಸಂಗೀತವನ್ನು ಚರಣ್ ರಾಜ್ ಸಂಯೋಜಿಸಲಿದ್ದು, ಹಾಡುಗಳಿಗೆ ಸಾಹಿತ್ಯವನ್ನು ವಿ.ನಾಗೇಂದ್ರ ಪ್ರಸಾದ್, ನಾಗಾರ್ಜುನ ಶರ್ಮ, ನಟರಾಕ್ಷಸ ಡಾಲಿ ಧನಂಜಯ, ರೋಹಿತ್ ಪದಕಿ ರಚಿಸಲಿದ್ದಾರೆ.
ಸತ್ಯ ಹೆಗಡೆ ಮುಖ್ಯ ಛಾಯಾಗ್ರಾಹಕರಾಗಿದ್ದು, ದೀಪು ಎಸ್ ಕುಮಾರ್ ಸಂಕಲನಕಾರರಾಗಲಿದ್ದಾರೆ ಮತ್ತು ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸವನ್ನು ಮಾಡಲಿದ್ದಾರೆ. ಚಿತ್ರದ ಫೈಟ್ಸ್ ಗಳನ್ನು ಅರ್ಜುನ್ ರಾಜ್ ಮತ್ತು ಚೇತನ್ ಡಿಸೌಜಾ಼ ನಿರ್ದೇಶಿಸಲಿದ್ದಾರೆ.ಈ ಚಿತ್ರವನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ, ಜಯಣ್ಣ ಮತ್ತು ಭೋಗೇಂದ್ರ ಜಯಣ್ಣ ಫಿಲಂಸ್ ಲಾಂಛನದಡಿಯಲ್ಲಿ ಹಾಗು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟುಡಿಯೋಸ್ ಲಾಂಛನದಡಿಯಲ್ಲಿ ನಿರ್ಮಿಸಲ್ಲಿದ್ದಾರೆ. “ಎಕ್ಕ” ಚಿತ್ರವು ಜೂನ್ 6 , 2025 ರಂದು ತೆರೆ ಕಾಣುವುದಾಗಿ ಚಿತ್ರತಂಡ ತಿಳಿಸಿದೆ. ಈ ಚಿತ್ರವು ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಲಿದೆ ಎಂಬ ಆಶ್ವಾಸನೆಯನ್ನು ಚಿತ್ರ ತಂಡ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.