)
ಬೆಂಗಳೂರು: ನಟ ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿ ಮಾಡಿದ ಒಂದು ಪೋಸ್ಟ್ ಮತ್ತೆ ಕಿಚ್ಚು ಹಚ್ಚಿದೆ. ನಟ ದರ್ಶನ್ ಅಭಿಮಾನಿಗಳಿಂದ ಬರುತ್ತಿರುವ ಅಸಭ್ಯ ಸಂದೇಶಗಳ ವಿರುದ್ಧ ರಮ್ಯಾ ದೂರು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಸಿನಿರಂಗದ ಅನೇಕರು ರಮ್ಯಾ ಬೆಂಬಲಕ್ಕೆ ನಿಂತಿದ್ದಾರೆ.
ಪ್ರಥಮ್, ಶಿವರಾಜ್ಕುಮಾರ್ , ವಿನಯ್ ರಾಜ್ ಕುಮಾರ್ ಮುಂತಾದವರು ರಮ್ಯಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ರಮ್ಯಾ ನಿರ್ಧಾರಕ್ಕೆ ಅಣ್ಣಾವ್ರ ಕುಟುಂಬದ ಸದಸ್ಯರ ಬೆಂಬಲ ದೊರೆತಿದ್ದೇ ತಡ ನಟ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ತಿರುಗೇಟು ನೀಡಿದ್ದಾರೆ. ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಶಾಕಿಂಗ್ ಪೋಸ್ಟ್ ಮಾಡಿದ್ದಾರೆ.
"ಮಾಧ್ಯಮಗಳಲ್ಲಿ ಮಹಿಳೆಯರನ್ನು ಅವಮಾನಿಸುವುದರ ವಿರುದ್ಧ ಮಾತನಾಡುವುದು ನೋಡಿದಾಗ, ತಮ್ಮ ಕುಟುಂಬದಲ್ಲೇ ಇದೆಲ್ಲ ನಡೆಯುವಾಗ ಮಾತಾಡದೇ ಸುಮ್ಮನೇ ಇದ್ರಲ್ಲ... ಆವಾಗ ನಿದ್ದೆ ಮಾಡ್ತಾ ಇದ್ರಾ ಎಲ್ಲ?" ಎಂದು ಶ್ರೀದೇವಿ ಭೈರಪ್ಪ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.
ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಮಾಡಿದ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ದರ್ಶನ್ ಅಭಿಮಾನಿಗಳ ಫ್ಯಾನ್ಸ್ ಪೇಜ್ ಗಳಲ್ಲಿ ಹರಿದಾಡುತ್ತಿದೆ. ‘ಶಿವರಾಜ್ ಕುಮಾರ್ ಶ್ರೀದೇವಿಗೆ ಈಗಲಾದರೂ ನ್ಯಾಯ ಕೊಡಿಸುತ್ತಾರಾ? ನಿಮ್ಮ ಮನೆಯಿಂದಲೇ ನ್ಯಾಯ ಶುರುವಾಗಬೇಕು’ ಎಂದು ದರ್ಶನ್ ಫ್ಯಾನ್ಸ್ ಟ್ರೋಲ್ ಮಾಡುತ್ತಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.