"ಬನಾರಸ್" ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ ಹಾಗೂ ಈ ವರ್ಷದ ಮೊದಲ ಹಿಟ್ "ಉಪಾಧ್ಯಕ್ಷ" ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು. ಈ ಕುರಿತಂತೆ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ‌‌. ಈ ಹೊಸಚಿತ್ರ, ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಶ್ರೀಮುರಳಿ ಅವರಿಂದ ಅನಾವರಣವಾಯಿತು "ದಿಲ್ ಖುಷ್" ಟ್ರೇಲರ್!


 ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌.           


 ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.


ಇದನ್ನೂ ಓದಿ: 'ಲಕ್ಷ್ಮಿ ನಿವಾಸ' ಧಾರಾವಾಹಿಯಿಂದ ಹೊರಬಂದ ಖ್ಯಾತ ನಟಿ... ಆ ಜಾಗಕ್ಕೆ ಈ ಬ್ಯೂಟಿ ಎಂಟ್ರಿ !!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.