Early morning foods : ಬಹಳಷ್ಟು ಜನರು ಬೆಳಿಗ್ಗೆ ಕಾಫಿ, ಟೀ, ಬಿಸ್ಕತ್ತನ್ನು ಸೇವಿಸುತ್ತಾರೆ. ಆದರೆ ಖಾಲಿ ಹೊಟ್ಟೆಯಲ್ಲಿದ್ದಾಗ ಕೆಲವೊಂದಿಷ್ಟು ಆಹಾರಗಳನ್ನು ಸೇವಿಸಬಾರದು. ಹಾಗಿದ್ರೆ ಯಾವ ಮೂರು ಆಹಾರ ಸೇವಿಸಬಾರದು ಅಂತ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ.. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..


COMMERCIAL BREAK
SCROLL TO CONTINUE READING

ಟೀ ಮತ್ತು ಕಾಫಿ : ಬೆಳಗ್ಗೆ ಎದ್ದ ಕೂಡಲೇ ಅನೇಕರು ಖಾಲಿ ಹೊಟ್ಟೆಯಲ್ಲಿ ಚಹಾ ಮತ್ತು ಕಾಫಿಯನ್ನು ಸೇವಿಸುತ್ತಾರೆ. ಇದು ಒಳ್ಳೆಯ ಅಭ್ಯಾಸವಲ್ಲ. ಕಾಫಿ ಮತ್ತು ಟೀ ಆಮ್ಲೀಯತೆ, ಎದೆಯುರಿ ಮತ್ತು ಅಜೀರ್ಣ ಸಮಸ್ಯೆಗಳಿಗೆ ಕಾರಣವಾಗಬಹುದು. ಆಹಾರ ಅಥವಾ ನೀರನ್ನು ಸೇವಿಸುವ ಮೊದಲು ಇವುಗಳನ್ನು ಸೇವಿಸಿದರೆ ನಿರ್ಜಲೀಕರಣಕ್ಕೆ ಕಾರಣವಾಗಬಹುದು.


ಇದನ್ನೂ ಓದಿ :ಬೆಳಗ್ಗೆ ಎದ್ದ ಕೂಡಲೇ ಈ ರೀತಿಯಲ್ಲಿ ನೀರು ಸೇವಿಸಿದರೆ ಒಂದೇ ವಾರದಲ್ಲಿ ಹೊಟ್ಟೆ ಭಾಗದ ಬೊಜ್ಜು ಕರಗುವುದು !


ಕರಿದ ಆಹಾರಗಳು: ಫ್ರೈಡ್​ ಆಹಾರ ಪದಾರ್ಥಗಳು ಕೊಬ್ಬಿನಾಂಶವನ್ನು ಹೊಂದಿವೆ. ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಒತ್ತಡ ಉಂಟಾಗಬಹುದು. ಇದು ಜೀರ್ಣಕಾರಿ ಸಮಸ್ಯೆಗಳಿಗೆ ಹಾಗೂ ದೇಹದ ತೂಕ ಹೆಚ್ಚಾಗಲು ಪ್ರಮುಖ ಕಾರಣವಾಗಬಹುದು.


ಬ್ರೆಡ್‌-ಬಿಸ್ಕತ್​: ಈ ಆಹಾರಗಳನ್ನು ಪ್ರತ್ಯೇಕವಾಗಿ ಸಂಸ್ಕರಿಸಿದ ಹಿಟ್ಟಿನಿಂದ ಮಾಡಲಾಗಿರುತ್ತದೆ. ಇದರಿಂದಾಗಿ ಸರಳ ಕಾರ್ಬೋಹೈಡ್ರೇಟ್‌ಗಳು ಮತ್ತು ಕಡಿಮೆ ಫೈಬರ್‌ ಇರುತ್ತವೆ. ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ತ್ವರಿತ ಏರಿಕೆಯಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚು ಪಡಿಸುತ್ತದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ