Heart Health: ಬೆಳಿಗ್ಗೆ ಐದು ವಿಧದ ಆಹಾರಗಳನ್ನು ತಪ್ಪಿಸುವುದು ಅನಿವಾರ್ಯ, ಇದು ಅನಾರೋಗ್ಯಕರ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಬೆಳಗ್ಗಿನ ಉಪಹಾರಕ್ಕಾಗಿ ಈ 5 ಆಹಾರಗಳನ್ನು ಸೇವಿಸುವುದರಿಂದ ಇದು ಯಕೃತ್ತಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಅಷ್ಟಕ್ಕೂ ಆ 5 ಆಹಾರಗಳು ಯಾವುದು? ತಿಳಿಯಲು ಮುಂದೆ ಓದಿ...
ಮುಖ್ಯವಾಗಿ ಸಂಸ್ಕರಿಸಿದ ಮಾಂಸವು ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. ಇದಲ್ಲದೆ, ಸೋಡಿಯಂ ಮಟ್ಟಗಳು ಸಹ ಹೆಚ್ಚಿರುತ್ತವೆ. ಬೆಳಗಿನ ಉಪಾಹಾರದ ಸಮಯದಲ್ಲಿ ಇವುಗಳನ್ನು ತೆಗೆದುಕೊಳ್ಳಬೇಡಿ. ಇದು ಹೃದಯದ ಆರೋಗ್ಯದ ಪರಿಣಾಮ ಬೀರುವುದಷ್ಟೇ ಅಲ್ಲದೇ, ಅಧಿಕ ರಕ್ತದೊತ್ತಡವನ್ನುಂಟು ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಇದನ್ನೂ ಓದಿ: ಮಧುಮೇಹ ತಡೆಗೆ ಈ ಪಾನೀಯಗಳು ಪ್ರಯೋಜನಕಾರಿ! ಬೇಸಿಗೆಯಲ್ಲಿ ಸೇವಿಸಿದರೆ ಖಂಡಿತಾ ನಿಯಂತ್ರಣಕ್ಕೆ ಬರುವುದು ಬ್ಲಡ್ ಶುಗರ್ !
ಸಕ್ಕರೆ ಹೆಚ್ಚಿರುವ ಆಹಾರವನ್ನು ಬೆಳಿಗ್ಗೆ ಸೇವಿಸಬಾರದು. ಇವು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆಗೆ ಕಾರಣವಾಗುತ್ತವೆ. ಇದು ಇನ್ಸುಲಿನ್ ಪ್ರತಿರೋಧ, ಉರಿಯೂತ, ಜೊತೆಗೆ ಬೊಜ್ಜು ಮತ್ತು ಮಧುಮೇಹಕ್ಕೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಇದರ ಸೇವನೆ ಮುಂದಿನ ದಿನಗಳಲಿ ಹೃದಯಾಘಾತಕ್ಕೆ ಕಾರಣವಾಗುತ್ತದೆ ಎನ್ನುತ್ತಾರೆ ವೈದ್ಯರು.
ಪೇಸ್ಟ್ರಿ ಮತ್ತು ಕೇಕ್‌ಗಳನ್ನು ಬೆಳಿಗ್ಗೆ ತೆಗೆದುಕೊಳ್ಳಬಾರದು. ಇದು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದಲ್ಲದೆ, ಇದು ದೊಡ್ಡ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತದೆ. ಬೆಳಿಗ್ಗೆ ಇದನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ.
ಕೆಲವರು ಬೆಳಿಗ್ಗೆ ಪೂರ್ಣ ಕೊಬ್ಬಿನ ಕ್ರೀಮ್‌ನಂತಹದ್ದನ್ನು ಸೇವಿಸುತ್ತಾರೆ. ಇದನ್ನು ಚೀಸ್ ಸ್ಪ್ರೆಡ್ ಆಗಿ ಬಳಸಲಾಗುತ್ತದೆ. ಇದು ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದಲ್ಲದೆ, ಹೃದಯರಕ್ತನಾಳದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ ಮತ್ತು ಅಂತಿಮವಾಗಿ ಮಾರಕವಾಗಬಹುದು ಎಂದು ಅವರು ಎಚ್ಚರಿಸುತ್ತಾರೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ, ಇದನ್ನು ZEE KANNADA NEWS ಖಚಿತ ಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









