Milk With Honey And Cinnamon: ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್‌ಗಳು ಮತ್ತು ಪ್ರೋಟೀನ್‌ಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಲು ಕುಡಿಯುವುದರಿಂದ ದೇಹವು ಆರೋಗ್ಯಕರವಾಗಿರುತ್ತದೆ ಮತ್ತು ಅನೇಕ ರೋಗಗಳ ಅಪಾಯವು ದೂರವಾಗುತ್ತದೆ. ಇದರಲ್ಲೂ ಚಕ್ಕೆ ಮತ್ತು ಜೇನುತುಪ್ಪ ಬೆರೆಸಿದ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ದುಪ್ಪಟ್ಟು ಲಾಭ ಸಿಗುತ್ತದೆ. ಜೇನುತುಪ್ಪ ಮತ್ತು ಚಕ್ಕೆಯಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದು ಹಾಕುತ್ತವೆ.
ಮಂಡಿ ನೋವು ನಿವಾರಣೆ :
ಚಳಿಗಾಲದಲ್ಲಿ ಕೀಲು ನೋವು, ಮಂಡಿ ನೋವಿನ ಸಮಸ್ಯೆ ಹೆಚ್ಚುತ್ತದೆ. ಹಾಲು ಕುಡಿಯುವುದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಜೇನುತುಪ್ಪ ಮತ್ತು ಚಕ್ಕೆಯಲ್ಲಿರುವ ದಾಲ್ಚಿನ್ನಿಯಲ್ಲಿರುವ ಆಂಟಿ ಆಕ್ಸಿಡೆಂಟ್ ಕೀಲು ನೋವನ್ನು ನಿವಾರಿಸುತ್ತದೆ. ಹಾಗಾಗಿ ಈ ಎರಡನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕೀಳು ನೋವು ಮತ್ತು ಮಂಡಿ ನೋವು ನಿವಾರಣೆಯಾಗುತ್ತದೆ.
ಇದನ್ನೂ ಓದಿ : ಬೆಳಗ್ಗೆ ಹಳಸಿದ ಬಾಯಿ ಈ ಪಾನೀಯ ಸೇವಿಸಿ ಮಧುಮೇಹ ನಿಯಂತ್ರಿಸಿ
ರೋಗನಿರೋಧಕ ಶಕ್ತಿ ಹೆಚ್ಚುತ್ತದೆ :
ಹಾಲು, ಚಕ್ಕೆ ಮತ್ತು ಜೇನುತುಪ್ಪ ಈ ಮೂರೂ ಪದಾರ್ಥಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಚಕ್ಕೆ ಮತ್ತು ಜೇನುತುಪ್ಪ ಬೆರೆಸಿದ ಹಾಲನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇವುಗಳಲ್ಲಿರುವ ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿ ಫಂಗಲ್ ಗುಣಗಳು ಶೀತ ಮತ್ತು ಕೆಮ್ಮಿನಂತಹ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.
ಜೀರ್ಣಕಾರಿ ಸಮಸ್ಯೆಗಳಿಂದ ಮುಕ್ತಿ:
ಚಕ್ಕೆ ಮತ್ತು ಜೇನುತುಪ್ಪವನ್ನು ಬೆರೆಸಿದ ಹಾಲನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಹಾಲು ಅನೇಕರಿಗೆ ಅಜೀರ್ಣವನ್ನು ಉಂಟುಮಾಡುತ್ತದೆ. ಆದರೆ ಈ ರೀತಿ ಕುಡಿಯುವುದರಿಂದ ಮಲಬದ್ಧತೆ, ಆಸಿಡಿಟಿ ಮತ್ತು ಗ್ಯಾಸ್‌ನಂತಹ ಸಮಸ್ಯೆಗಳು ದೂರವಾಗುತ್ತವೆ.
ಇದನ್ನೂ ಓದಿ : Cholesterol ರೋಗಿಗಳು ಮೊಟ್ಟೆಯನ್ನು ಮರೆತೂ ಸೇವಿಸಬಾರದು, ಕಾರಣ ಇಲ್ಲಿದೆ
ಕೊಲೆಸ್ಟ್ರಾಲ್ ನಿಯಂತ್ರಣ :
ಚಕ್ಕೆ ಮತ್ತು ಜೇನುತುಪ್ಪ ಬೆರೆಸಿ ಹಾಲು ಕುಡಿಸುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣವಾಗುತ್ತದೆ. ಚಕ್ಕೆ ಮತ್ತು ಜೇನುತುಪ್ಪದಲ್ಲಿರುವ ಗುಣಲಕ್ಷಣಗಳು ಕೊಬ್ಬನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ಈ ರೀತಿ ಉಗುರುಬೆಚ್ಚಗಿನ ಹಾಲನ್ನು ಕುಡಿಯುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ.
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.