Constipation Remedies : ಉಗುರು ಬೆಚ್ಚಗಿನ ನೀರಿಗೆ ಈ ವಸ್ತುವನ್ನು ಬೆರೆಸಿ ಕುಡಿದರೆ ಸಂಪೂರ್ಣವಾಗಿ ಸ್ವಚ್ಚವಾಗುವುದು ಹೊಟ್ಟೆ !

Home Remedies for Constipation : ಬೆಳಿಗ್ಗೆ  ಹೊಟ್ಟೆ ಸರಿಯಾಗಿ ಶುಚಿಗೊಳಿಸದ ಕಾರಣ, ದಿನವಿಡೀ ಕಿರಿ ಕಿರಿ ಉಂಟಾಗುತ್ತದೆ. ಇದು ಹಲವಾರು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.   

Written by - Ranjitha R K | Last Updated : Mar 8, 2024, 03:25 PM IST
  • ಇತ್ತೀಚಿನ ದಿನಗಳಲ್ಲಿ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ
  • ಮಲಬದ್ಧತೆ ಉಂಟಾದಾಗ ಮಲವಿಸರ್ಜನೆಯಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ
  • ಮನೆಮದ್ದುಗಳ ಸಹಾಯದಿಂದ ಮಲಬದ್ಧತೆಯನ್ನು ನಿವಾರಿಸಬಹುದು.
Constipation Remedies : ಉಗುರು ಬೆಚ್ಚಗಿನ ನೀರಿಗೆ ಈ ವಸ್ತುವನ್ನು ಬೆರೆಸಿ ಕುಡಿದರೆ ಸಂಪೂರ್ಣವಾಗಿ ಸ್ವಚ್ಚವಾಗುವುದು ಹೊಟ್ಟೆ ! title=

Constipation Home Remedies : ಇತ್ತೀಚಿನ ದಿನಗಳಲ್ಲಿ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅತಿಯಾದ ಪ್ರಮಾಣದಲ್ಲಿ ಜಂಕ್ ಫುಡ್ ಸೇವನೆ, ಆಹಾರದಲ್ಲಿ ನಾರಿನಂಶದ ಕೊರತೆ, ಸಾಕಷ್ಟು ನೀರು ಕುಡಿಯದಿರುವುದು, ವ್ಯಾಯಾಮ ಮಾಡದಿರುವುದು ಮತ್ತು ನಿದ್ರೆಯ ಕೊರತೆಯಿಂದ ಮಲಬದ್ಧತೆ, ಗ್ಯಾಸ್ ಮತ್ತು ಅಜೀರ್ಣದಂತಹ ಸಮಸ್ಯೆಗಳು ಉಂಟಾಗಬಹುದು. ಮಲಬದ್ಧತೆ ಉಂಟಾದಾಗ ವ್ಯಕ್ತಿಯು ಮಲವಿಸರ್ಜನೆಯಲ್ಲಿ ಬಹಳಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಬೆಳಿಗ್ಗೆ  ಹೊಟ್ಟೆ ಸರಿಯಾಗಿ ಶುಚಿಗೊಳಿಸದ ಕಾರಣ, ದಿನವಿಡೀ ಕಿರಿ ಕಿರಿ ಉಂಟಾಗುತ್ತದೆ. ಇದು ಹಲವಾರು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. 

ಕೆಲವು ಮನೆಮದ್ದುಗಳ ಸಹಾಯದಿಂದ ಮಲಬದ್ಧತೆಯನ್ನು ನಿವಾರಿಸಬಹುದು. ಮಲಬದ್ಧತೆಯ ಸಮಸ್ಯೆಯನ್ನು ತಪ್ಪಿಸಲು, ಫೈಬರ್ ಸಮೃದ್ಧವಾಗಿರುವ ಆಹಾರವನ್ನು ತೆಗೆದುಕೊಳ್ಳಬೇಕು. ಪ್ರತಿದಿನ 3-4 ಲೀಟರ್ ನೀರನ್ನು ಕುಡಿಯಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಪ್ರಕ್ರಿಯೆ ಸುಧಾರಿಸುತ್ತದೆ. ಇದು ಕರುಳಿನ ಚಲನೆಯನ್ನು ಸುಲಭಗೊಳಿಸುತ್ತದೆ. ಮಲಬದ್ಧತೆಯಿಂದ ಬೇಗ ಮುಕ್ತಿ ಹೊಂದಬೇಕಾದರೆ  ಬೆಳಗ್ಗೆ ಕೆಲವು ವಿಶೇಷ ವಸ್ತುಗಳನ್ನು ನೀರಿನಲ್ಲಿ ಬೆರೆಸಿ ಕುಡಿಯಬಹುದು. 

ಇದನ್ನೂ ಓದಿ : ಮೊದಲ ಬಾರಿ ʼಸೆಕ್ಸ್‌ʼ ಮಾಡುವಾಗ ಈ 5 ತಪ್ಪುಗಳನ್ನು ಮಾಡಬೇಡಿ..!

ನಿಂಬೆ ರಸ : 
ಮಲಬದ್ಧತೆಯನ್ನು ಹೋಗಲಾಡಿಸಲು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅರ್ಧ ನಿಂಬೆಹಣ್ಣಿನ ರಸವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಸೇವಿಸಬೇಕು. ಇದು ಹೊಟ್ಟೆಯನ್ನು ಶುಚಿಗೊಳಿಸುವುದು ಮಾತ್ರವಲ್ಲದೆ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕಳು ಸಹಾಯ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ನೀರನ್ನು ಸೇವಿಸುವುದರಿಂದ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.

ಜೇನು ತುಪ್ಪ : 
ಮಲಬದ್ಧತೆಯ ಸಮಸ್ಯೆಯಿಂದ ಪರಿಹಾರ ಪಡೆಯಲು, ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ ಒಂದು ಚಮಚ ಜೇನುತುಪ್ಪವನ್ನು ಬೆರೆಸಿ ಕುಡಿಯಬಹುದು.ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. 

ಇಸಾಬ್ಗೋಲ್ :
ಇಸಾಬ್ಗೋಲ್ ಕರುಳಿನ ಚಲನೆಯ ಪ್ರಕ್ರಿಯೆಯನ್ನು ಸುಲಭಗೊಳಿಸುತ್ತದೆ. ಒಂದು ಚಮಚ ಇಸಾಬ್ಗೋಲ್ ಅನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯಬಹುದು. ಇದರ ನಿಯಮಿತ ಸೇವನೆಯಿಂದ ದೀರ್ಘಕಾಲದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

ಇದನ್ನೂ ಓದಿ : ಕ್ಯಾನ್ಸರ್, ತೂಕ ಇಳಿಕೆ, ಹೃದಯದ ಸಮಸ್ಯೆ… ಈ ಮೂರು ಸಮಸ್ಯೆಗೆ ಒಂದೇ ಪರಿಹಾರ ಈ ಕಪ್ಪು ಬೀಜದ ನೀರು!

ಆಪಲ್ ವಿನೆಗರ್ :
ಆಪಲ್ ಸೈಡರ್ ವಿನೆಗರ್ ಕರುಳಿನಲ್ಲಿ ಸೇರಿಕೊಂಡಿರುವ ಮಲವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದರ ಪರಿಹಾರಕ್ಕಾಗಿ ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ಒಂದು ಚಮಚ ಆಪಲ್ ಸೈಡರ್ ವಿನೆಗರ್ ಅನ್ನು ಬೆರೆಸಿ ಕುಡಿಯಬಹುದು.ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ಮಲಬದ್ಧತೆ, ಹೊಟ್ಟೆ ಉಬ್ಬುವುದು ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.

ಶುಂಠಿ ರಸ : 
ಜೀರ್ಣಕಾರಿ ಸಮಸ್ಯೆಗಳನ್ನು ಹೋಗಲಾಡಿಸಲು ಶುಂಠಿ ತುಂಬಾ ಪರಿಣಾಮಕಾರಿಯಾಗಿದೆ. ಇದರ ಸೇವನೆಯಿಂದ ಮಲಬದ್ಧತೆ, ಗ್ಯಾಸ್, ಅಜೀರ್ಣ ಮತ್ತು ಅಸಿಡಿಟಿಯಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ಒಂದು ಚಮಚ ಶುಂಠಿ ರಸವನ್ನು ಬೆರೆಸಿ ಕುಡಿಯುವುದರಿಂದ  ಹೊಟ್ಟೆ  ಸುಲಭವಾಗಿ ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ. 

 

(ಸೂಚನೆ : ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News