Cancer In Women: ಮಹಿಳೆಯರಲ್ಲಿ ಕ್ಯಾನ್ಸರ್ ಅಪಾಯ ಕಡಿಮೆ ಮಾಡುತ್ತೆ ಈ ಅಭ್ಯಾಸಗಳು

Cancer In Women: ಮಹಿಳೆಯರು ತಮ್ಮ ದೈನಂದಿನ ಜೀವನದಲ್ಲಿ ಕೆಲವು ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತದೆ. 

Written by - Yashaswini V | Last Updated : Mar 26, 2024, 04:53 PM IST
  • ಉತ್ತಮ ಆರೋಗ್ಯಕ್ಕೆ ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ.
  • ಆರೋಗ್ಯ ತಜ್ಞರ ಪ್ರಕಾರ, ನಮ್ಮ ಜೀವನಶೈಲಿ, ಆಹಾರಪದ್ದತಿ ನಮ್ಮ ಆರೋಗ್ಯದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ.
  • ಮಹಿಳೆಯರು ಕೆಲವು ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಅವರಲ್ಲಿ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎನ್ನಲಾಗುತ್ತದೆ.
Cancer In Women: ಮಹಿಳೆಯರಲ್ಲಿ ಕ್ಯಾನ್ಸರ್ ಅಪಾಯ ಕಡಿಮೆ ಮಾಡುತ್ತೆ ಈ ಅಭ್ಯಾಸಗಳು  title=

Cancer In Women: ವಿಶ್ವದಾದ್ಯಂತ ಪ್ರತಿ ವರ್ಷ ಕ್ಯಾನ್ಸರ್ ಹಲವು ಜನರನ್ನು ಬಳಿತೆಗೆದುಕೊಳ್ಳುತ್ತದೆ. ಅದರಲ್ಲೂ, ಪುರುಷರಿಗಿಂತ ಮಹಿಳೆಯರಲ್ಲಿ ಈ ಅಪಾಯ ಹೆಚ್ಚು ಎಂದು ಹೇಳಲಾಗುತ್ತಿದೆ. ಆದರೆ, ಅವರು ತಮ್ಮ ಜೀವನಶೈಲಿಯಲ್ಲಿ ಈ ಐದು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಮಹಿಳೆಯರಲ್ಲಿ ಕ್ಯಾನ್ಸರ್ ಅಪಾಯವನ್ನು ಬಹಳಷ್ಟು ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತಿದೆ. 

ಈ 5 ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಮಹಿಳೆಯರಲ್ಲಿ ಕಡಿಮೆ ಆಗುತ್ತೆ ಕ್ಯಾನ್ಸರ್ ಅಪಾಯ: 
ಆರೋಗ್ಯಕರ ತೂಕ: 

ತೂಕ ಹೆಚ್ಚಾದಂತೆ ಸ್ಥೂಲಕಾಯತೆಯು ಸ್ತನ, ಅಂಡಾಶಯ, ಎಂಡೊಮೆಟ್ರಿಯಲ್ ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್ ಸೇರಿದಂತೆ ವಿವಿಧ ರೀತಿಯ ಕ್ಯಾನ್ಸರ್‌ನ ಅಪಾಯವನ್ನು ಹೆಚ್ಚಿಸುತ್ತದೆ. ಇದನ್ನು ತಪ್ಪಿಸಲು ಆರೋಗ್ಯಕರ ಆಹಾರವನ್ನು ಸೇವಿಸಿ, ನಿಯಮಿತ ದೈಹಿಕ ಚಟುವಟಿಕೆಗಳನ್ನು ರೂಢಿಸಿಕೊಳ್ಳುವ ಮೂಲಕ ತೂಕವನ್ನು ನಿಯಂತ್ರಿಸಿ. 

ಸಮತೋಲನ ಆಹಾರ: 
ಆರೋಗ್ಯ ತಜ್ಞರ ಪ್ರಕಾರ, ಸಮತೋಲನ ಆಹಾರವು ನಮ್ಮನ್ನು ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸುತ್ತದೆ. ಮಾತ್ರವಲ್ಲ, ಇದು ಕ್ಯಾನ್ಸರ್ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. 

ಇದನ್ನೂ ಓದಿ- ಬೆಳಗ್ಗೆ ಎದ್ದ ತಕ್ಷಣ ಈ ತರಕಾರಿಯ ನೀರು ಕುಡಿಯಿರಿ ಸಾಕು! ಒಂದೇ ವಾರದಲ್ಲಿ ತೂಕ ಕಡಿಮೆಯಾಗುವುದು ಗ್ಯಾರಂಟಿ

ದೈಹಿಕ ಚಟುವಟಿಕೆ: 
ನಿಯಮಿತ ದೈಹಿಕ ಚಟುವಟಿಕೆ, ವ್ಯಾಯಾಮವನ್ನು ರೂಢಿಸಿಕೊಳ್ಳುವುದರಿಂದ ಮಹಿಳೆಯರು ಸ್ತನ ಮತ್ತು ಕರುಳಿನ ಕ್ಯಾನ್ಸರ್ ನಂತಹ ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡಬಹುದು. ಆರೋಗ್ಯ ತಜ್ಞರ ಪ್ರಕಾರ, ಮಹಿಳೆಯರು ವಾರಕ್ಕೆ ಕನಿಷ್ಠ  150 ನಿಮಿಷಗಳ ಮಧ್ಯಮ-ತೀವ್ರತೆಯ ಏರೋಬಿಕ್ ಚಟುವಟಿಕೆ ಅಥವಾ 75 ನಿಮಿಷಗಳ ಹುರುಪಿನ-ತೀವ್ರತೆಯ ಏರೋಬಿಕ್ ಚಟುವಟಿಕೆ ರೂಢಿಸಿಕೊಳ್ಳುವುದು ಉತ್ತಮ. 

ತಂಬಾಕು ಸೇವನೆ ತಪ್ಪಿಸಿ: 
ಶ್ವಾಸಕೋಶ, ಸ್ತನ, ಗರ್ಭಕಂಠ ಮತ್ತು ಅಂಡಾಶಯದ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳಿಗೆ ಧೂಮಪಾನ ಪ್ರಮುಖ ಕಾರಣ. ಹಾಗಾಗಿ, ಎಲ್ಲಾ ಸ್ವರೂಪದ ತಂಬಾಕು ಸೇವನೆಯನ್ನು ತಪ್ಪಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ತಪ್ಪಿಸಬಹುದು ಎನ್ನಲಾಗುತ್ತದೆ. 

ಇದನ್ನೂ ಓದಿ- ಈ ಸಣ್ಣ ಕಾಳನ್ನು ಊಟ, ತಿಂಡಿಯ ನಂತರ ಹೀಗೆ ಸೇವಿಸಿ !ತಕ್ಷಣ ಕಂಟ್ರೋಲ್ ಆಗುವುದು ಬ್ಲಡ್ ಶುಗರ್ !

ಯಾವುದೇ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ: 
ಕೆಲವೊಮ್ಮೆ ನಾವು ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣಕ್ಕಾಗಿ ಆರೋಗ್ಯದ ಅಪಾಯಗಳು ಹೆಚ್ಚಾಗುತ್ತವೆ. ದೇಹ ಕಾಯಿಲೆಯ ಗೂಡಾಗುತ್ತದೆ. ಇದನ್ನು ತಪ್ಪಿಸಲು ನಿಮಗೆ ಯಾವುದೇ ರೀತಿಯ ಅನಾರೋಗ್ಯಗಳು ಕಂಡು ಬಂದರೂ ತಡಮಾಡದೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಯನ್ನು ಪಡೆಯಿರಿ. 

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News