ಬೆಂಗಳೂರು : ನೆಲ್ಲಿಕಾಯಿಯನ್ನು ಆರೋಗ್ಯ ಸಂಜೀವಿನಿ ಎಂದು ಕರೆಯಲಾಗುತ್ತದೆ. ಆಯುರ್ವೇದದಲ್ಲಿ ನೆಲ್ಲಿಕಾಯಿಗೆ ವಿಶೇಷ ಮಹತ್ವ ಇದೆ.ಚಳಿಗಾಲದಲ್ಲಿ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ. ಇದು ದೇಹವನ್ನು ಅನೇಕ ಸೋಂಕುಗಳಿಂದ ರಕ್ಷಿಸುತ್ತದೆ. ಮಾತ್ರವಲ್ಲ ದೇಹದ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ.ನೆಲ್ಲಿಕಾಯಿಯಲ್ಲಿ ನಾರಿನಂಶ ಹೇರಳವಾಗಿ ಇರುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ಮತ್ತು ಇತರ ಖನಿಜಗಳ ಕಾರಣ, ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸುತ್ತದೆ. ಇದು ತ್ವಚೆ ಮತ್ತು ಕೂದಲು ಎರಡಕ್ಕೂ ಪೋಷಣೆಯನ್ನು ಒದಗಿಸುತ್ತದೆ. ನಿಯಮಿತವಾಗಿ ನೆಲ್ಲಿಕಾಯಿ ಸೇವನೆ ಮಾಡುವುದರಿಂದ ರಕ್ತವನ್ನು ಶುದ್ಧೀಕರಿಸುತ್ತದೆ. ಇದು ಅಸ್ತಮಾದ ಅಪಾಯವನ್ನು ಕಡಿಮೆ ಮಾಡುತ್ತದೆ. ಕೆಮ್ಮನ್ನು ಗುಣಪಡಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ನೆಲ್ಲಿಕಾಯಿಯನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.


COMMERCIAL BREAK
SCROLL TO CONTINUE READING

1. ನೆಲ್ಲಿಕಾಯಿ ಜ್ಯೂಸ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : 
ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದು ವಿಟಮಿನ್ ಸಿ ಯ ಸಮೃದ್ಧ ಮೂಲವಾಗಿದೆ. ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಉತ್ಕರ್ಷಣ ನಿರೋಧಕಗಳು  ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಉರಿಯೂತದ ಗುಣಲಕ್ಷಣಗಳಿಂದಾಗಿ ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ನೆಲ್ಲಿಕಾಯಿ ಜ್ಯೂಸ್ ಅನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಒಂದು ಲೋಟ ನೀರಿಗೆ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. 


ಇದನ್ನೂ ಓದಿ : ವಿಟಮಿನ್ ಡಿ ಕೊರತೆಯ ಪ್ರಮುಖ ಲಕ್ಷಣಗಳು...


2. ನೆಲ್ಲಿಕಾಯಿ ಪುಡಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ :
ನೆಲ್ಲಿಕಾಯಿಯನ್ನು ಒಣಗಿಸಿ ಆಮ್ಲಾ ಪುಡಿಯನ್ನು ತಯಾರಿಸಲಾಗುತ್ತದೆ.ಇದು ನೆಲ್ಲಿಕಾಯಿಯಲ್ಲಿನ ಎಲ್ಲಾ ಪೋಷಕಾಂಶಗಳನ್ನು ಸಂರಕ್ಷಿಸುತ್ತದೆ. ಒಣಗಿಸಿದ ನೆಲ್ಲಿಕಾಯಿಯನ್ನು ವರ್ಷಪೂರ್ತಿ ಬಳಸಬಹುದು. ಇತ್ತೀಚಿನ ದಿನಗಳಲ್ಲಿ ನೆಲ್ಲಿಕಾಯಿ ಪುಡಿಯ  ಅನೇಕ ಬ್ರಾಂಡ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ನೆಲ್ಲಿಕಾಯಿ ಪುಡಿಯನ್ನು ಜೇನುತುಪ್ಪ ಅಥವಾ ಬೆಚ್ಚಗಿನ ನೀರಿನಲ್ಲಿ ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಬೇಕು. ಇದರಲ್ಲಿ  ವಿಟಮಿನ್ ಸಿ ಅನ್ನು ಹೇರಳವಾಗಿ ಕಂಡು ಬರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. 


3. ನೆಲ್ಲಿಕಾಯಿ ಉಪ್ಪಿನಕಾಯಿ ರುಚಿಯ ಜೊತೆಗೆ ಆರೋಗ್ಯ ಹೆಚ್ಚಿಸುತ್ತದೆ : 
ನೆಲ್ಲಿಕಾಯಿ  ಉಪ್ಪಿನಕಾಯಿಯಲ್ಲಿ ಇದರ ಎಲ್ಲಾ ಗುಣಗಳನ್ನು ತನ್ನಲ್ಲಿ ಅಡಗಿಸಿಕೊಂಡಿರುತ್ತದೆ.   ಇದಕ್ಕೆ ಸೇರಿಸುವ ಸಾಸಿವೆ ಎಣ್ಣೆ ಮತ್ತು ಮಸಾಲೆಗಳು ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಈ ಉಪ್ಪಿನಕಾಯಿ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.


4. ಮಕ್ಕಳಿಗೆ ಇಷ್ಟವಾಗುತ್ತದೆ ಆಮ್ಲಾ ಕ್ಯಾಂಡಿ : 
ಆಮ್ಲಾ ಕ್ಯಾಂಡಿಯನ್ನು ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ವಿಶೇಷವೆಂದರೆ ಇದನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದು. ಅದನ್ನು ಸಂಗ್ರಹಿಸಿ ಮತ್ತು ನಿಯಮಿತವಾಗಿ ಕ್ಯಾಂಡಿಯಾಗಿ ತಿನ್ನಬಹುದು. ಮಕ್ಕಳು ಕೂಡಾ ಇದನ್ನು ಆರಾಮವಾಗಿ ತಿನ್ನಬಹುದು.


ಇದನ್ನೂ ಓದಿ : ಅಡುಗೆಯಲ್ಲಿ ಈ ಎಣ್ಣೆಯನ್ನು ಬಳಸಿದರೆ ತೂಕ ಕಡಿಮೆಯಾಗುವುದು ಪಕ್ಕಾ ಅಂತೆ !


5. ಆಮ್ಲಾ ಮುರಬ್ಬಾ ತಿನ್ನುವುದರಿಂದ ಆಗುವ ಪ್ರಯೋಜನಗಳು : 
ಮುರಬ್ಬವನ್ನು ಸಕ್ಕರೆ ಅಥವಾ ಬೆಲ್ಲದ ಪಾಕದಲ್ಲಿ ಮುಳುಗಿಸಿ ನೆಲ್ಲಿಕಾಯಿಯಿಂದ ತಯಾರಿಸಲಾಗುತ್ತದೆ.ಇದು ಸಾಕಷ್ಟು ಪೌಷ್ಟಿಕವಾಗಿದೆ. ಇದು ಸತು, ತಾಮ್ರ ಮತ್ತು ಕಬ್ಬಿಣ ಸೇರಿದಂತೆ ಆಮ್ಲದ ಎಲ್ಲಾ ಗುಣಗಳನ್ನು ಒಳಗೊಂಡಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನ ಸಿಗುತ್ತದೆ. ಇದನ್ನು ತಿನ್ನುವುದರಿಂದ ಅನೇಕ ಜೀರ್ಣಕಾರಿ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದು ಸಂಧಿವಾತ ನೋವಿನಿಂದಲೂ ಪರಿಹಾರವನ್ನು ನೀಡುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.