ಬೆಂಗಳೂರು : Soaked Chana  Benefits : ಕಡಲೆ ಕಾಳನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುತ್ತಾರೆ. ಆದರೆ, ಈ ಕಾಳನ್ನು ಬೇಯಿಸಿ ತಿನ್ನುವುದಕ್ಕಿಂದ ನೆನೆಸಿಟ್ಟ ಹಸಿ ಕಾಳನ್ನು  ತಿಂದರೆ ಆರೋಗ್ಯ ಪ್ರಯೋಜನ ಹೆಚ್ಚು. ಏಕೆಂದರೆ ಪ್ರೋಟೀನ್, ನಾರಿನಂಶ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಸೋಡಿಯಂನಂತಹ ಪೋಷಕಾಂಶಗಳು ಈ ಕಾಳುಗಳಲ್ಲಿ ಕಂಡುಬರುತ್ತವೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಕಡಲೆ ಕಾಳು  ತಿನ್ನುವುದರಿಂದ  ಆರೋಗ್ಯಕೆ ಬಹಳಷ್ಟು ಪ್ರಯೋಜನಗಳಿವೆ. 


COMMERCIAL BREAK
SCROLL TO CONTINUE READING

ನೆನೆಸಿದ ಕಡಲೆ ಕಾಳು ತಿನ್ನುವುದರಿಂದ ಆಗುವ ಪ್ರಯೋಜನಗಳು :
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : 
ಜೀರ್ಣಕ್ರಿಯೆಯನ್ನು ಸುಧಾರಿಸಲು ಪ್ರತಿದಿನ ನೆನೆಸಿದ ಕಡಲೆ ಕಾಳುಗಳನ್ನು ತಿನ್ನಬಹುದು. ಏಕೆಂದರೆ ಇದರಲ್ಲಿ ಫೈಬರ್ ಪ್ರಮಾಣ ಹೆಚ್ಚಾಗಿರುತ್ತದೆ. ಫೈಬರ್ ಕರುಳಿನ ಮತ್ತು ಹೊಟ್ಟೆಯ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಅಂದರೆ ಇದು ದೇಹವನ್ನು ನಿರ್ವಿಷಗೊಳಿಸುತ್ತದೆ. ಈ ಮೂಲಕ  ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ. 


ಇದನ್ನೂ ಓದಿ : Diet Tips : ಬೊಜ್ಜು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿ ಈ ಹಣ್ಣು!


ಹೃದಯದ ಆರೋಗ್ಯಕ್ಕಾಗಿ :
ನೆನೆಸಿದ ಕಡಲೆ ಕಾಳು ತಿನ್ನುವುದು  ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಏಕೆಂದರೆ ಆಂಟಿಆಕ್ಸಿಡೆಂಟ್‌ಗಳು ಮತ್ತು ಆಂಥೋಸಯಾನಿನ್‌ಗಳು  ಇದರಲ್ಲಿ ಕಂಡುಬರುತ್ತವೆ. ಈ ಎಲ್ಲಾ ಅಂಶಗಳು ಹೃದಯ ಮತ್ತು ರಕ್ತನಾಳಗಳನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಇದಲ್ಲದೆ,  ಕಡಲೆ ಕಾಳಿನಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.


ತೂಕ ನಷ್ಟಕ್ಕೆ ಸಹಕಾರಿ : 
ತೂಕ ಇಳಿಸಿಕೊಳ್ಳಲು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಕಾಳುಗಳನ್ನು ಸೇವಿಸಬಹುದು. ಕಾಳುಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಹಾಗಾಗಿ ನೆನೆಸಿದ ಕಾಳುಗಳನ್ನು ಪ್ರತಿನಿತ್ಯ ಬೆಳಗ್ಗೆ ತಿಂದರೆ ಹೆಚ್ಚು ಹೊತ್ತು ಹಸಿವಾಗುವುದಿಲ್ಲ. ಈ ಕಾರಣದಿಂದ ಪದೇ ಪದೇ ತಿನ್ನುವುದು ತಪ್ಪಿದಂತಾಗಿ ತೂಕವು ನಿಯಂತ್ರಣದಲ್ಲಿರುತ್ತದೆ.


ಇದನ್ನೂ ಓದಿ : Pregnancy Tips : ಆಹಾರದಲ್ಲಿನ ಈ ನಿರ್ಲಕ್ಷ್ಯವು ತಾಯಿಯಾಗಲು ಅಡ್ಡಿ!


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.