ಮಾವಿನ ಹಣ್ಣು ತಿನ್ನುವುದರ 05 ಪ್ರಮುಖ ಪ್ರಯೋಜನಗಳು
Mango Benefits: ಮಾವಿನ ಹಣ್ಣಿನ ಹೆಸರು ಕೇಳಿದರೆ ಸಾಕು ಬಾಯಲ್ಲಿ ನೀರೂರುತ್ತದೆ. ಮಾವಿನ ಹಣ್ಣು ತಿನ್ನಲು ಎಷ್ಟು ರುಚಿಯೋ ಇದು ಆರೋಗ್ಯಕ್ಕೂ ಅಷ್ಟೇ ಪ್ರಯೋಜನಕಾರಿ.
Mango Health Benefits: ಹಣ್ಣುಗಳ ರಾಜ ಎಂತಲೇ ಖ್ಯಾತಿ ಪಡೆದಿರುವ ಮಾವಿನ ಹಣ್ಣು ಬಹುತೇಕ ಎಲ್ಲರ ಪ್ರಿಯವಾದ ಹಣ್ಣು ಎಂತಲೇ ಹೇಳಬಹುದು. ಮಾವಿನಹಣ್ಣುಗಳು ವಿಟಮಿನ್ ಎ, ಸಿ ಮತ್ತು ಇ ಮತ್ತು ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನಂತಹ ಖನಿಜಗಳ ಸಮೃದ್ಧ ಮೂಲವಾಗಿದೆ. ಮಾವಿನ ಹಣ್ಣು ತಿನ್ನಲು ತಿನ್ನಲು ರುಚಿಕರವಷ್ಟೇ ಅಲ್ಲ ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳು ಲಭ್ಯವಾಗುತ್ತದೆ.
ಮಾವಿನ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕಿರುವ 5 ಪ್ರಮುಖ ಪ್ರಯೋಜನಗಳೆಂದರೆ...
*ಹೃದಯದ ಆರೋಗ್ಯ:
ಮಾವಿನ ಹಣ್ಣಿನಲ್ಲಿ (Mango) ಫೈಬರ್, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳು ಕಂಡು ಬರುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ.
ಕಣ್ಣಿನ ಆರೋಗ್ಯ:
ಮಾವಿನ ಹಣ್ಣಿನಲ್ಲಿ ವಿಟಮಿನ್ ಎ (Vitamin C) ಸಮೃದ್ಧವಾಗಿದ್ದು ಇದರ ನಿಯಮಿತ ಸೇವನೆಯು ದೃಷ್ಟಿಯನ್ನು ಸುಧಾರಿಸುತ್ತದೆ.
ಇದನ್ನೂ ಓದಿ- ಟೀ vs ಕಾಫಿ..! ಈ ಎರಡರಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ..? ಉತ್ತರ ಇಲ್ಲಿದೆ
ತೂಕ ನಷ್ಟ:
ಮಾವಿನಹಣ್ಣಿನಲ್ಲಿರುವ ಫೈಬರ್ ಅಂಶವು ಪೂರ್ಣತೆಯ ಭಾವನೆಗಳನ್ನು ಉತ್ತೇಜಿಸಲು ಹಾಗೂ ಅತಿಯಾಗಿ ತಿನ್ನುವುದನ್ನು ತಡೆಯಲು ಸಹಕಾರಿ ಆಗಿದೆ. ಹಾಗಾಗಿ, ಹಿತಮಿತವಾದ ಮಾವಿನ ಹಣ್ಣಿನ ಸೇವನೆಯು ತೂಕ ನಷ್ಟವನ್ನು ಸಹ ಪ್ರಚೋದಿಸುತ್ತದೆ.
ಮೆದುಳಿನ ಆರೋಗ್ಯ:
ಮಾವಿನ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಬಿ6 ಸಿರೊಟೋನಿನ್ ಮತ್ತು ಡೋಪಮೈನ್‌ನಂತಹ ನ್ಯೂರೋಟ್ರಾನ್ಸ್‌ಮಿಟರ್‌ಗಳ ಉತ್ಪಾದನೆಗೆ ಸಹಾಯ ಮಾಡುವ ಮೂಲಕ, ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ.
ಇದನ್ನೂ ಓದಿ- ಈ ಹಣ್ಣಿನ ಎಲೆಯ ರಸ ಕುಡಿದರೆ ಬ್ಲಡ್ ಶುಗರ್ ನಿಮಿಷದಲ್ಲೇ ಕಂಟ್ರೋಲ್ ಆಗುವುದು!
ಚರ್ಮದ ಆರೋಗ್ಯ:
ಮಾವಿನ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಇ ಮತ್ತು ಬೀಟಾ-ಕ್ಯಾರೋಟಿನ್ ಅಂಶವೂ ಚರ್ಮವನ್ನು ಒಳಗಿನಿಂದ ಪೋಷಿಸುತ್ತದೆ. ಜೊತೆಗೆ ನೈಸರ್ಗಿಕವಾಗಿ ಮುಖದ ಕಾಂತಿಯನ್ನು ಹೆಚ್ಚಿಸಲು ಸಹಕಾರಿ ಆಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.