ತೆಂಗಿನೆಣ್ಣೆಗೆ ಈ ಎರಡು ವಸ್ತುಗಳನ್ನು ಬೆರೆಸಿ ವಾರಕ್ಕೆ ಎರಡು ಬಾರಿ ಹಚ್ಚಿದರೆ ಬುಡದಿಂದಲೇ ಕಪ್ಪಾಗುವುದು ಬಿಳಿ ಕೂದಲು !
Home Remedies To Get Black Hair Naturally:ಕೆಲವೊಂದು ನೈಸರ್ಗಿಕ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಬಹುದು.
Home Remedies To Get Black Hair Naturally : ವಯಸ್ಸಾದಂತೆ ಕೂದಲು ಬಿಳಿಯಾಗುವುದು ಸಾಮಾನ್ಯ ಸಂಗತಿ. ಆದರೆ ಇತ್ತೀಚಿನ ದಿನಗಳಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬಿಳಿ ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತಿದೆ. ಹೆಚ್ಚಿನವರು ತಮ್ಮ ಬಿಳಿ ಕೂದಲನ್ನು ಕಪ್ಪಾಗಿಸಲು ಹೇರ್ ಡೈ ಬಳಸುತ್ತಾರೆ. ಆದರೆ ಇದು ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿರುತ್ತದೆ. ಹಾಗಾಗಿ ಇದು ಕೂದಲನ್ನು ಬುಡದಿಂದಲೇ ಹಾನಿಗೊಳಿಸುತ್ತದೆ. ಈ ಕಾರಣದಿಂದಾಗಿ, ಕೂದಲು ಉದುರುವಿಕೆ, ತುರಿಕೆ ಮತ್ತು ಒಣ ಕೂದಲು ಮುಂತಾದ ಸಮಸ್ಯೆಗಳು ಕೂಡಾ ಕಾಣಿಸಿಕೊಳ್ಳುತ್ತವೆ. ಕೆಲವೊಂದು ನೈಸರ್ಗಿಕ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಬಹುದು.
ಕೂದಲನ್ನು ಕಪ್ಪಾಗಿಸಲು ನೈಸರ್ಗಿಕ ವಿಧಾನ :
ಕೂದಲು ಕಪ್ಪಾಗಲು ತೆಂಗಿನೆಣ್ಣೆ ಮತ್ತು ಕರಿಬೇವಿನ ಎಲೆಗಳನ್ನು ಬಳಸಬಹುದು. ಈ ಪರಿಣಾಮಕಾರಿ ವಿಧಾನ ನಿಮ್ಮ ಕೂದಲನ್ನು ನೈಸರ್ಗಿಕವಾಗಿ ಮತ್ತು ಶಾಶ್ವತವಾಗಿ ಬುಡದಿಂದಲೇ ಕಪ್ಪಾಗಿಸುತ್ತದೆ.
ಇದನ್ನೂ ಓದಿ : ಮಹಿಳೆಯರು ಏಕಾಂಗಿಯಾಗಿ ಪ್ರವಾಸಕ್ಕೆ ಭಯ ಪಟ್ಟರೆ, ಮಹಿಳೆಯರಿಗೋಸ್ಕರ ಕೆಲ ಸಂಸ್ಥೆಗಳಿಲ್ಲಿವೆ..
ಬೇಕಾಗುವ ಸಾಮಗ್ರಿಗಳು :
1 ಬೌಲ್ ತೆಂಗಿನ ಎಣ್ಣೆ
10-12 ಕರಿಬೇವಿನ ಎಲೆಗಳು
2-3 ಚಮಚ ಆಮ್ಲಾ ಪುಡಿ
ತಯಾರಿಸುವ ವಿಧಾನ :
- ಮೊದಲು ಕರಿಬೇವಿನ ಎಲೆಗಳನ್ನು ರುಬ್ಬಿ ಅದರ ರಸ ತೆಗೆಯಿರಿ.
- ಈಗ ಬಾಣಲೆಯಲ್ಲಿ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ.
- ನಂತರ ಆಮ್ಲಾ ಪುಡಿ ಮತ್ತು ಕರಿಬೇವಿನ ಎಲೆಯ ರಸವನ್ನು ಸೇರಿಸಿ ಸ್ವಲ್ಪ ಸಮಯ ಬಿಸಿ ಮಾಡಿ.
- ಈ ಎಣ್ಣೆಯನ್ನು ಹಾಗೆಯೇ 12 ರಿಂದ 24 ಗಂಟೆಗಳ ಕಾಲ ಬಿಡಿ.
- ನಂತರ ಅದನ್ನು ಫಿಲ್ಟರ್ ಮಾಡಿ ಗಾಜಿನ ಬಾಟಲಿಯಲ್ಲಿ ಸಂಗ್ರಹಿಸಿ.
ಬಳಕೆಯ ವಿಧಾನ :
ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಹಚ್ಚಿ ರಾತ್ರಿಯಿಡೀ ಬಿಡಿ. ಬೆಳಿಗ್ಗೆ ಸೌಮ್ಯವಾದ ಶಾಂಪೂ ಬಳಸಿ ನಿಮ್ಮ ಕೂದಲನ್ನು ತೊಳೆಯಿರಿ. ವಾರಕ್ಕೆ 2 ರಿಂದ 3 ಬಾರಿ ಈ ಎಣ್ಣೆಯನ್ನು ಕೂದಲಿಗೆ ಬಳಸಿ. ಇದರಿಂದ ನಿಮ್ಮ ಕೂದಲು ಕೆಲವೇ ದಿನಗಳಲ್ಲಿ ಕಪ್ಪಾಗುತ್ತದೆ.
ಇದನ್ನೂ ಓದಿ : ಭೃಂಗರಾಜ ಎಣ್ಣೆಯು ಕೂದಲಿಗೆ ಮಾತ್ರವಲ್ಲದೆ ಈ ರೋಗಗಳಿಗೂ ರಾಮಬಾಣವಾಗಿ ಕೆಲಸ ಮಾಡುತ್ತದೆ
ಅನುಕೂಲಗಳು :
ತೆಂಗಿನ ಎಣ್ಣೆ :ತೆಂಗಿನೆಣ್ಣೆಯು ಕೂದಲನ್ನು ಕಪ್ಪಾಗಿಸುವಲ್ಲಿ ಹಾಗೂ ಆರ್ಧ್ರಕಗೊಳಿಸುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ನಿಯಮಿತ ಬಳಕೆಯಿಂದ, ಕೂದಲು ಉದ್ದ ಬೆಳೆಯುತ್ತದೆ.
ನೆಲ್ಲಿಕಾಯಿ : ನೆಲ್ಲಿಕಾಯಿ ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದೆ. ಇದು ಕೂದಲನ್ನು ಬೇರುಗಳಿಂದ ಕಪ್ಪಾಗಿಸುವಲ್ಲಿ ಸಹಾಯ ಮಾಡುತ್ತದೆ. ಇದಲ್ಲದೆ, ತಲೆಹೊಟ್ಟು ಮತ್ತು ತುರಿಕೆ ನೆತ್ತಿಯ ಸಮಸ್ಯೆಯನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ.
ಕರಿಬೇವಿನ ಎಲೆ:ಕರಿಬೇವಿನ ಎಲೆಗಳು ಆಂಟಿಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿವೆ. ಇದು ಕೂದಲನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಕರಿಬೇವಿನ ಎಲೆಗಳನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವ ಸಮಸ್ಯೆಯನ್ನು ಪರಿಹರಿಸಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.