Hing For Lowering High Cholesterol : ಇಂಗು ಭಾರತೀಯ ಅಡುಗೆಮನೆಯಲ್ಲಿ ಬಹಳ ಸುಲಭವಾಗಿ ಲಭ್ಯವಿರುವ ಮಸಾಲೆಯಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಪರಿಣಾಮಕಾರಿಯಾಗಿದೆ. ಮಾತ್ರವಲ್ಲ, ಇದರ ಬಳಕೆಯಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕೂಡಾ ಕಡಿಮೆ ಮಾಡಬಹುದು. ನಿಯಮಿತವಾಗಿ ಇಂಗನ್ನು ನಿಮ್ಮ ಆಹಾರದಲ್ಲಿ ಸೇರಿಸಿದರೆ, ಅದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಗುಣಲಕ್ಷಣಗಳು ಹೃದಯದ ಆರೋಗ್ಯವನ್ನು  ವೃದ್ದಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇಂಗು ಹೇಗೆ ಪ್ರಯೋಜನಕಾರಿಯಾಗಿದೆ ಮತ್ತು ಅದನ್ನು ಹೇಗೆ ಸೇವಿಸಬೇಕು ಎನ್ನುವ ಮಾಹಿತಿ ಇಲ್ಲಿದೆ. 


COMMERCIAL BREAK
SCROLL TO CONTINUE READING

ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇಂಗು ಹೇಗೆ ಪ್ರಯೋಜನಕಾರಿ? : 
ಇಂಗು ಸಾವಯವ ಸಂಯುಕ್ತಗಳನ್ನು ಹೊಂದಿದೆ. ಇದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (LDL ಕೊಲೆಸ್ಟ್ರಾಲ್) ಮಟ್ಟವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ಎಲ್‌ಡಿಎಲ್ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದ್ರೋಗ ಮತ್ತು ಪಾರ್ಶ್ವವಾಯು ಮುಂತಾದ ಅಪಾಯ ಎದುರಾಗುವ ಸಾಧ್ಯತೆ ಇದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇಂಗು ಸೇವನೆಯು ಉತ್ತಮ ಆಯ್ಕೆಯಾಗಿದೆ. 


ಇದನ್ನೂ ಓದಿ : ಈ ಪುಟ್ಟ ಕಾಯಿಯನ್ನು ಈ ರೀತಿ ಸೇವಿಸಿದರೆ ತಕ್ಷಣವೇ ಇಳಿದು ಬಿಡುವುದು ಬ್ಲಡ್ ಶುಗರ್! ತಿನ್ನುವ ಸಮಯ ಇದಾಗಿರಬೇಕು


ಇಷ್ಟೇ ಅಲ್ಲ, ಇಂಗಿನಲ್ಲಿರುವ ಗುಣಲಕ್ಷಣಗಳು ಎಲ್‌ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿನ ಉತ್ತಮ ಕೊಲೆಸ್ಟ್ರಾಲ್ (ಎಚ್‌ಡಿಎಲ್ ಕೊಲೆಸ್ಟ್ರಾಲ್) ಮಟ್ಟವನ್ನು ಹೆಚ್ಚಿಸುತ್ತದೆ. ಇದರ ಜೊತೆಯಲ್ಲಿ, ಇಂಗು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ದೇಹದಲ್ಲಿ ಊತವನ್ನು ಕಡಿಮೆ ಮಾಡುತ್ತದೆ. ಇದು ಹೃದಯ ಸಂಬಂಧಿ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.


ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇಂಗು ಸೇವಿಸುವುದು ಹೇಗೆ? : 
ಆಹಾರಕ್ಕೆ ಸೇರಿಸಿ: ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೀವು ಆಹಾರಕ್ಕೆ ಇಂಗು ಸೇರಿಸಬಹುದು. ಪಲ್ಯ, ಸಾಂಬಾರ್, ರಸಂ ಹೀಗೆ ಯಾವುದೇ ಅಡುಗೆ ಮಾಡಿದರೂ ಅದಕ್ಕೆ ಇಂಗು ಸೇರಿಸಬಹುದು. 


ಇಂಗು ನೀರು: ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇಂಗು ನೀರನ್ನು ಸೇವಿಸಬಹುದು. ಇದಕ್ಕಾಗಿ, 1 ಗ್ಲಾಸ್ ಉಗುರು ಬೆಚ್ಚಗಿನ ನೀರಿನಲ್ಲಿ ಒಂದು ಚಿಟಿಕೆ ಇಂಗು ಮತ್ತು ಬ್ಲಾಕ್ ಸಾಲ್ಟ್ ಬೆರೆಸಿ ಮಿಶ್ರಣ ಮಾಡಿ. ನಂತರ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ. ಇದರಿಂದ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕಡಿಮೆ ಮಾಡಬಹುದು.


ಇದನ್ನೂ ಓದಿ : ಮಧುಮೇಹಿಗಳಿಗೆ ಅಮೃತ ಈ ರಸ.. ನಿತ್ಯ ಈ ಹೂವಿನ ಗಿಡದ ಎಲೆಗಳ ರಸ ಕುಡಿದರೆ ಡಯಾಬಿಟಿಸ್ ನಿಯಂತ್ರಣದಲ್ಲಿರುತ್ತೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ