ಖಾಲಿ ಹೊಟ್ಟೆಯಲ್ಲಿ ಅಪ್ಪಿತಪ್ಪಿಯೂ ಈ ಆಹಾರಗಳನ್ನು ತಿನ್ನಲೇಬಾರದು

ಆರೋಗ್ಯವಾಗಿರಲು ಆಹಾರ ಬಹಳ ಮುಖ್ಯ. ಅದರಲ್ಲೂ ಬೆಳಗಿನ ಉಪಹಾರವನ್ನು ದಿನದ ಪ್ರಮುಖ ಆಹಾರ ಎಂದು ಪರಿಗಣಿಸಲಾಗಿದೆ. ನಿಮ್ಮ ಬೆಳಿಗಿನ ಉಪಹಾರ ಅಂದರೆ ಬ್ರೇಕ್ ಫಾಸ್ಟ್ ವಿಷಯದಲ್ಲಿ ಮಾಡುವ ಕೆಲವು ತಪ್ಪುಗಳು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು.

Written by - Yashaswini V | Last Updated : Aug 11, 2022, 01:16 PM IST
  • ಬೆಳಿಗ್ಗೆ ಎದ್ದ ತಕ್ಷಣ, ಮೊದಲನೆಯದಾಗಿ ನೀವು ಖಾಲಿ ಹೊಟ್ಟೆಯಲ್ಲಿ 4 ನೆನೆಸಿದ ಬಾದಾಮಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ
  • ಇದು ಫೈಬರ್, ಒಮೆಗಾ -3 ಮತ್ತು ಒಮೆಗಾ -6 ಆಮ್ಲಗಳಲ್ಲಿ ಸಮೃದ್ಧವಾಗಿದೆ
  • ಬಾದಾಮಿ ಸಿಪ್ಪೆ ತೆಗೆದು ತಿನ್ನುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು.
ಖಾಲಿ ಹೊಟ್ಟೆಯಲ್ಲಿ ಅಪ್ಪಿತಪ್ಪಿಯೂ ಈ ಆಹಾರಗಳನ್ನು ತಿನ್ನಲೇಬಾರದು  title=
Foods in empty stomach

ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದಾದ ಮತ್ತು ತಪ್ಪಿಸಬೇಕಾದ ಆಹಾರಗಳಿವು : ನಮ್ಮ ಆರೋಗ್ಯಕ್ಕೆ ಆಹಾರ ಎಷ್ಟು ಮುಖ್ಯ ಎಂದು ಎಲ್ಲರಿಗೂ ತಿಳಿದಿದೆ. ಅದರಲ್ಲೂ ಬೆಳಗಿನ ಉಪಹಾರವನ್ನು ದಿನದ ಪ್ರಮುಖ ಆಹಾರ ಎಂದು ಪರಿಗಣಿಸಲಾಗಿದೆ. ನಿಮ್ಮ ಬೆಳಿಗಿನ ಉಪಹಾರ ಅಂದರೆ ಬ್ರೇಕ್ ಫಾಸ್ಟ್ ವಿಷಯದಲ್ಲಿ ಮಾಡುವ ಕೆಲವು ತಪ್ಪುಗಳು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹಾಗಾಗಿ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ತಪ್ಪಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. 

ವಾಸ್ತವವಾಗಿ,  ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗಬಹುದು. ಇದು ಹೊಟ್ಟೆ ಮತ್ತು ಕರುಳಿನ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಖ್ಯಾತ ಆಹಾರ ತಜ್ಞರು ಸಲಹೆ ನೀಡಿದ್ದಾರೆ. 

ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳು ಆರೋಗ್ಯಕ್ಕೆ ಉತ್ತಮ: 
* ನೆನೆಸಿದ ಬಾದಾಮಿ:

ಬೆಳಿಗ್ಗೆ ಎದ್ದ ತಕ್ಷಣ, ಮೊದಲನೆಯದಾಗಿ ನೀವು ಖಾಲಿ ಹೊಟ್ಟೆಯಲ್ಲಿ 4 ನೆನೆಸಿದ ಬಾದಾಮಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ಫೈಬರ್, ಒಮೆಗಾ -3 ಮತ್ತು ಒಮೆಗಾ -6 ಆಮ್ಲಗಳಲ್ಲಿ ಸಮೃದ್ಧವಾಗಿದ್ದು, ರಾತ್ರಿ ವೇಳೆ ನಾಲ್ಕೈದು ಬಾದಾಮಿಯನ್ನು ನೆನೆಸಿಟ್ಟು ಅದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸವಿಯುವುದು ಪ್ರಯೋಜನಕಾರಿ. ನೆನಪಿಡಿ, ಬಾದಾಮಿ ಸಿಪ್ಪೆ ತೆಗೆದು ತಿನ್ನುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು.

ಇದನ್ನೂ ಓದಿ- ದೇಹದಲ್ಲಾಗುವ ಈ ಬದಲಾವಣೆ ನೀಡುತ್ತದೆ ಅಂಡಕೋಶದ ಕ್ಯಾನ್ಸರ್ ನ ಸುಳಿವು,.!

* ಪರಂಗಿ ಹಣ್ಣು:
ಸೂಪರ್ ಫುಡ್ ಎಂದು ಪರಿಗಣಿಸಲಾಗಿರುವ ಪರಂಗಿ ಹಣ್ಣು ಪ್ರತಿ ಋತುವಿನಲ್ಲೂ ಸುಲಭವಾಗಿ ಲಭ್ಯವಿರುವ ಹಣ್ಣಾಗಿದೆ. ಇದು ನಿಮ್ಮ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯಕ್ಕೂ ಒಳ್ಳೆಯದು ಎಂದು ಹೇಳಲಾಗುತ್ತದೆ. 

* ಮೊಟ್ಟೆ: 
ಮೊಟ್ಟೆಯು ಪ್ರೋಟೀನ್‌ನ ಸಮೃದ್ಧ ಮೂಲವಾಗಿದೆ ಮತ್ತು ಇದು ಬೆಳಗಿನ ಉಪಹಾರವಾಗಿದೆ. ಬೆಳಿಗ್ಗೆ ಮೊಟ್ಟೆಯನ್ನು ತಿನ್ನುವುದರಿಂದ ನಿಮ್ಮ ಹೊಟ್ಟೆಯು ದಿನವಿಡೀ ತುಂಬಿದ ಅನುಭವವನ್ನು ನೀಡುತ್ತದೆ ಮತ್ತು ನಿಮಗೆ ಸಾಕಷ್ಟು ಶಕ್ತಿಯನ್ನು ನೀಡುತ್ತದೆ.

* ಓಟ್ಸ್:
ನೀವು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಪೌಷ್ಟಿಕಾಂಶದ ಆಹಾರವನ್ನು ತಿನ್ನಲು ಬಯಸಿದರೆ, ಓಟ್ಸ್ ಉತ್ತಮ ಉಪಹಾರವಾಗಿದೆ. ಇದು ತೂಕವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ.  

ಇದನ್ನೂ ಓದಿ- Weight Loss: ಇದ್ದಕ್ಕಿದ್ದಂತೆ ತೂಕ ನಷ್ಟವಾಗುವುದು ಈ ಗಂಭೀರ ಕಾಯಿಲೆಯ ಲಕ್ಷಣವಾಗಿರಬಹುದು

ಖಾಲಿ ಹೊಟ್ಟೆಯಲ್ಲಿ ಅಪ್ಪಿತಪ್ಪಿಯೂ ಈ ಆಹಾರಗಳನ್ನು ತಿನ್ನಲೇಬಾರದು :
* ಟೊಮ್ಯಾಟೋ: 

ಹಸಿ ಟೊಮ್ಯಾಟೊ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ, ಆದರೆ ಹಸಿ ಟೊಮ್ಯಾಟೋಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಹಾನಿಕಾರಕ ಎಂದು ಸಾಬೀತುಪಡಿಸಬಹುದು.  ಟೊಮ್ಯಾಟೋದಲ್ಲಿರುವ  ಆಮ್ಲೀಯ ಗುಣಗಳು ಹೊಟ್ಟೆಯಲ್ಲಿರುವ ಜಠರಗರುಳಿನ ಆಮ್ಲದೊಂದಿಗೆ ಪ್ರತಿಕ್ರಿಯಿಸಿ ಹೊಟ್ಟೆ ನೋವು, ಸೆಳೆತದಂತಹ ಸಮಸ್ಯೆಗಳನ್ನು ಉಂಟುಮಾಡುವ ಜೆಲ್ ಅನ್ನು ರೂಪಿಸುತ್ತವೆ. ಆದ್ದರಿಂದ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದನ್ನು ತಪ್ಪಿಸಿ.

* ಹುಳಿ ಮೊಸರು:
ನಮ್ಮಲ್ಲಿ ಕೆಲವರಿಗೆ ಪ್ರತಿ ಆಹಾರದೊಂದಿಗೆ ಮೊಸರು ತಿನ್ನುವ ಅಭ್ಯಾಸ ಇರುತ್ತದೆ. ಮೊಸರು ಆರೋಗ್ಯಕ್ಕೆ ಒಳ್ಳೆಯದು ಎಂಬುದರಲ್ಲಿ ಅನುಮಾನವಿಲ್ಲ. ಆದರೆ, ಆದರೆ ಇದನ್ನು ಹಸಿದ ಹೊಟ್ಟೆಯಲ್ಲಿ ತಿನ್ನಬಾರದು.  

* ಸೋಡಾ: 
ಸೋಡಾದಲ್ಲಿ ಉತ್ತಮ ಗುಣಮಟ್ಟದ ಕಾರ್ಬೋನೇಟ್ ಆಮ್ಲವು ಕಂಡುಬರುತ್ತದೆ. ಈ ವಸ್ತುವು ಹೊಟ್ಟೆಯಲ್ಲಿರುವ ಆಮ್ಲದೊಂದಿಗೆ ಬೆರೆತಾಗ, ಹೊಟ್ಟೆ ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ, ಬೆಳಗಿನ ಉಪಹಾರದಲ್ಲಿ ಸೋಡಾ ಬೆರೆಸಿದ ಆಹಾರ ಸೇವನೆಯನ್ನು ತಪ್ಪಿಸುವುದು ಉತ್ತಮ. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News