ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಈ ಸಿಹಿ ಪದಾರ್ಥಗಳು ರಾಮಬಾಣ!
Bad Cholesterol Control: ದೈನಂದಿನ ಜೀವನದಲ್ಲಿ ನಾವು ಸೇವಿಸುವ ಆಹಾರಗಳಲ್ಲಿ ಕೆಲ ಆಹಾರ ಪದಾರ್ಥಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಕೆಲಸ ಮಾಡುವುದಿಲ್ಲ ಮತ್ತು ಅದನ್ನು ನಿಯಂತ್ರಿಸುವ ಕೆಲಸ ಮಾಡುತ್ತವೆ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಯಾವ ಆಹಾರಗಳು ಸಹಾಯ ಮಾಡುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ, (Health News In Kannada)
ಬೆಂಗಳೂರು: ಆರೋಗ್ಯಕರ ಆಹಾರದ ಭಾಗವಾಗಿ ಸಿಹಿ ಪದಾರ್ಥಗಳನ್ನು ಎಂದಿಗೂ ಪರಿಗಣಿಸಲಾಗುವುದಿಲ್ಲ. ಏಕೆಂದರೆ ಅತಿಯಾದ ಸಕ್ಕರೆ ಅಂಶವು ನಿಮ್ಮ ದೇಹದ ತೂಕವನ್ನು ಹೆಚ್ಚಿಸುವುದಲ್ಲದೆ (Health News In Kannada), ಇತರ ಆರೋಗ್ಯ ಸಮಸ್ಯೆಗಳನ್ನೂ ಉಂಟುಮಾಡುತ್ತದೆ. ಮಧುಮೇಹ ರೋಗಿಗಳಿಗೆ ಮಾತ್ರವಲ್ಲದೆ ಅಧಿಕ ಕೊಲೆಸ್ಟ್ರಾಲ್ ಇರುವವರಿಗೆ ಸಕ್ಕರೆ ಅಂಶ ಹೆಚ್ಚಿರುವ ಪದಾರ್ಥಗಳನ್ನು ತಿನ್ನಬೇಡಿ ಎಂದು ಸಲಹೆ ನೀಡಲಾಗುತ್ತದೆ, ಆದರೆ ಎಲ್ಲಾ ಸಕ್ಕರೆ ಪದಾರ್ಥಗಳು ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸುವ ಕೆಲಸ ಮಾಡುವುದಿಲ್ಲ, ಈ ಲೇಖನದಲ್ಲಿ ನಾವು ಅಂತಹ ಕೆಲವು ಸಿಹಿ ಆಹಾರಗಳ ಪದಾರ್ಥಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ. ಇವು ಅಧಿಕ ಕೊಲೆಸ್ಟ್ರಾಲ್ ರೋಗಿಗಳಿಗೆ ಪ್ರಯೋಜನಕಾರಿ ಸಾಬೀತಾಗುತ್ತವೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಅಂತಹ ಸಿಹಿ ಆಹಾರಗಳು ಯಾವುವು ತಿಳಿದುಕೊಳ್ಳೋಣ ಬನ್ನಿ (Health News In Kannada)
1. ಚಾಕೊಲೇಟ್
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಚಾಕೊಲೇಟ್ ಸೇವನೆಯು ಪ್ರಯೋಜನಕಾರಿಯಾಗಿದೆ. ಚಾಕೊಲೇಟ್‌ನಲ್ಲಿ ಇಂತಹ ಅನೇಕ ಅಂಶಗಳಿವೆ, ಅವು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಕೆಲಸ ಮಾಡುತ್ತವೆ ಮತ್ತು ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
2. ಕಬ್ಬಿನ ರಸ
ನೀವು ಸಿಹಿತಿಂಡಿಗಳನ್ನು ಇಷ್ಟಪಡುತ್ತಿದ್ದು , ಕೆಟ್ಟ ಕೊಲೆಸ್ಟ್ರಾಲ್‌ನಿಂದ ತೊಂದರೆಗೊಳಗಾಗಿದ್ದರೆ, ಕಬ್ಬಿನ ರಸವು ನಿಮಗೆ ಉತ್ತಮ ಆಯ್ಕೆಯಾಗಿದೆ. ಕಬ್ಬಿನ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅನೇಕ ಅಧ್ಯಯನಗಳಲ್ಲಿ ಕಂಡುಬಂದಿದೆ.
3. ಸಿಹಿ ಹಣ್ಣುಗಳು
ನೀವು ಸಿಹಿತಿಂಡಿಗಳ ಹಂಬಲವನ್ನು ಹೊಂದಿದ್ದು, ಅಧಿಕ ಕೊಲೆಸ್ಟ್ರಾಲ್ ಭಯದಿಂದ ನೀವು ತಿನ್ನಲು ಇಷ್ಟಪಡದಿದ್ದರೆ, ಹಣ್ಣುಗಳು ನಿಮಗೆ ಉತ್ತಮ ಆಯ್ಕೆಯಾಗಿದೆ. ಚೆರ್ರಿ, ಲಿಚಿ, ಸಪೋಟ ಮತ್ತು ಬಾಳೆಹಣ್ಣು ಮುಂತಾದ ಅನೇಕ ಸಿಹಿ ಹಣ್ಣುಗಳನ್ನು ನೀವು ಸೇವಿಸಬಹುದು, ಅವು ನಿಮ್ಮ ಸಕ್ಕರೆಯ ಕಡುಬಯಕೆಗಳನ್ನು ಕಡಿಮೆ ಮಾಡಲು ಮತ್ತು ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
4. ಪೀನಟ್ ಬಟರ್
ಅಧಿಕ ಕೊಲೆಸ್ಟ್ರಾಲ್ ರೋಗಿಗಳಿಗೆ ಪೀನಟ್ ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಪೀನಟ್ ಬಟರ್ ನಲ್ಲಿ ಉತ್ತಮ ಪ್ರಮಾಣದ ಅಪರ್ಯಾಪ್ತ ಕೊಬ್ಬು ಕಂಡುಬರುತ್ತದೆ, ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನಿಮಗೆ ಸಹಾಯ ಮಾಡುತ್ತದೆ. ಅಲ್ಲದೆ, ಇದು ನಿಮ್ಮ ಸಿಹಿ ಕಡುಬಯಕೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ-Corona ಅಷ್ಟೇ ಅಲ್ಲ ಇದೀಗ ಈ ಮಾರಣಾಂತಿಕ ವೈರಸ್ ಕೂಡ ಡಬ್ಲ್ಯೂಹೆಚ್ಓ ಚಿಂತೆ ಹೆಚ್ಚಿಸಿದೆ! ಇಲ್ಲಿವೆ ಅದರ ಲಕ್ಷಣಗಳು
5. ಒಣದ್ರಾಕ್ಷಿ
ನೀವು ಕೆಲವು ಸಿಹಿ ತಿಂಡಿಗಳನ್ನು ತಿನ್ನಲು ಬಯಸುತ್ತಿದ್ದರೆ, ಒಣದ್ರಾಕ್ಷಿ ನಿಮಗೆ ಉತ್ತಮ ಆಯ್ಕೆಯಾಗಿದೆ. ಇದು ನಿಮ್ಮ ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಒಣದ್ರಾಕ್ಷಿಗಳು ಫೈಬರ್ ಸೇರಿದಂತೆ ಅನೇಕ ಅಗತ್ಯ ಪೋಷಕಾಂಶಗಳನ್ನು ಹೊಂದಿರುತ್ತವೆ, ಅವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ-ಈ ದೇಸೀ ಉಪಾಯದಿಂದ ನರ-ನರಗಳಲ್ಲಿ ಅಡಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೊರಹಾಕಿ!
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ