ಬೆಂಗಳೂರು: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದು ಗಂಭೀರ ಸ್ಥಿತಿಯನ್ನು ಸೂಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು ತುಂಬಾ ಮುಖ್ಯ. ವಿಶ್ವ ಆರೋಗ್ಯ ಸಂಸ್ಥೆ  ಪ್ರಕಾರ, ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಾಗುವಿಕೆಯಿಂದ ಹೃದಯಾಘಾತ, ಹೃದಯ ಸ್ತಂಬನ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ವಿಶ್ವದಾದ್ಯಂತ ಈ ರೋಗಗಳಿಂದ ಸಾವನ್ನಪ್ಪಿದವರ ಸಂಖ್ಯೆ 2.6 ಮಿಲಿಯನ್ ಎಂಬುದು ಅತ್ಯಂತ ಆತಂಕದ ಸಂಗತಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳವು ತುಂಬಾ ಗಂಭೀರವಾದ ವಿಷಯವಾಗಿದೆ. ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಂದರ್ಭದಲ್ಲಿ, ನಿಮ್ಮ ಆರೋಗ್ಯದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. (Health News In Kannada)


COMMERCIAL BREAK
SCROLL TO CONTINUE READING

ಮುಖ್ಯವಾಗಿ ನಾವು ಸೇವಿಸುವ ಆಹಾರದ ಕಡೆಗೆ ಹೆಚ್ಚಿನ ಒತ್ತು ನೀಡಬೇಕು. ನಿಮ್ಮ ಆಹಾರ ಪದ್ಧತಿಯನ್ನು ನಿಯಮಿತವಾಗಿ ಗಮನಿಸಿದರೆ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ನೀವು ಮನೆಮದ್ದುಗಳನ್ನು ಪ್ರಯತ್ನಿಸಬಹುದು. ಇಂದು ನಾವು ನಿಮಗೆ ಅಂತಹ ಒಂದು ದೇಸೀ ಪಾಕವಿಧಾನದ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ, ಇದು ಪ್ರತಿಯೊಂದು ಮನೆಯಲ್ಲೂ ಸುಲಭವಾಗಿ ಲಭ್ಯವಿದೆ. ಈ ಮನೆಮದ್ದು ತುಳಸಿ ಎಲೆಗಳು. 


ತುಳಸಿ ಗಿಡ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ತುಳಸಿ ಎಲೆಗಳನ್ನು ಬಳಸಬಹುದು. 2018 ರಲ್ಲಿ ಜರ್ನಲ್ ಆಫ್ ಫಂಕ್ಷನಲ್ ಫುಡ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ತುಳಸಿ ಸಸ್ಯವು ನಿಮ್ಮ ಚಯಾಪಚಯ ಅಸ್ವಸ್ಥತೆಗಳನ್ನು ನಿವಾರಿಸುತ್ತದೆ. 40 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಇದು ಸಾಕಷ್ಟು ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ತುಳಸಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿನ ಎಲ್‌ಡಿಎಲ್ ಮಟ್ಟವನ್ನು ಸಹ ಕಡಿಮೆ ಮಾಡಬಹುದು ಎಂದು ಅಧ್ಯಯನಗಳು ಕಂಡುಕೊಂಡಿವೆ.


ಇದನ್ನೂ ಓದಿ-ಊಟಕ್ಕೂ ಮುನ್ನ ಈ ಕೆಂಪು ತರಕಾರಿ ಜ್ಯೂಸ್ ಸೇವಿಸಿ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದಿಲ್ಲ!


ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ತುಳಸಿ ಎಲೆಗಳನ್ನು ಹೇಗೆ ಸೇವಿಸಬೇಕು
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ನೀವು ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಅಗಿಯಬಹುದು. ಇದಲ್ಲದೆ, ನೀವು ಇದನ್ನು ಚಹಾದ ರೂಪದಲ್ಲಿಯೂ ಕೂಡ ಇದನ್ನು ಬಳಸಬಹುದು. ಎರಡೂ ಸಂದರ್ಭಗಳಲ್ಲಿ ಇದು ನಿಮಗೆ ಆರೋಗ್ಯಕರವಾಗಿರುತ್ತದೆ. ಕೆಲವರು ತುಳಸಿ ಎಲೆಗಳಿಂದ ಪುಡಿ ಮಾಡಿ ಆಹಾರದಲ್ಲಿ ಬಳಸುತ್ತಾರೆ. ಇದು ಹೆಚ್ಚಿನ ಪ್ರಮಾಣದಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.


ಇದನ್ನೂ ಓದಿ-ಖಾಲಿ ಹೊಟ್ಟೆ ಕೇವಲ ಒಂದೇ ಒಂದು ನಿಮಿಷ ಈ ಎಲೆ ಅಗೆಯಿರಿ ದಿನವಿಡೀ ಹೈ ಕೊಲೆಸ್ಟ್ರಾಲ್ ನಿಮಗೆ ಕಾಡುವುದಿಲ್ಲ!


(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ