Benefits of Eating Lady Finger: ಕಳಪೆ ಮಟ್ಟದ ಜೀವನಶೈಲಿ ಹಾಗೂ ಬೇಕಾಬಿಟ್ಟಿ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಹೃದಯಾಘಾತ ಮತ್ತು ಮಧುಮೇಹದ ಅಪಾಯ ಕಾಡುತ್ತದೆ. ಉತ್ತಮ ಆರೋಗ್ಯಕ್ಕಾಗಿ, ನಾವು ಆರೋಗ್ಯಕರ ಆಹಾರವನ್ನು ನಮ್ಮ ಡಯಟ್ ನಲ್ಲಿ ಸೇರಿಸಿಕೊಳ್ಳಬೇಕು. ಅಂತಹುದೇ ಒಂದು ಹಸಿರು ತರಕಾರಿಯ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ, ಇದರ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೋಗಲಾಡಿಸುತ್ತದೆ, ಅಷ್ಟೇ ಅಲ್ಲ ಇದು ದೇಹದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸುತ್ತದೆ.


COMMERCIAL BREAK
SCROLL TO CONTINUE READING

ಬೆಂಡೆಕಾಯಿ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ
ಬೆಂಡೆಕಾಯಿ ಸಾಮಾನ್ಯವಾಗಿ ವಿಟಮಿನ್ಗಳು, ಖನಿಜಗಳು ಮತ್ತು ಫೈಬರ್ ನಿಂದ ಸಮೃದ್ಧವಾಗಿದೆ. ಇದಲ್ಲದೆ, ಇದರಲ್ಲಿ ಪೆಕ್ಟಿನ್ ಕೂಡ ಕಂಡುಬರುತ್ತದೆ, ಇದರ ಸಹಾಯದಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ರಕ್ತದೊತ್ತಡವೂ ನಿಯಂತ್ರಣದಲ್ಲಿರುತ್ತದೆ. ನೆನಪಿಡಿ, ಹೆಚ್ಚಿನ ಕೊಲೆಸ್ಟ್ರಾಲ್ ಅನ್ನು ಅನೇಕ ಗಂಭೀರ ಕಾಯಿಲೆಗಳ ಮೂಲವೆಂದು ಪರಿಗಣಿಸಲಾಗುತ್ತದೆ.


ಮಧುಮೇಹ ನಿಯಂತ್ರಿಸುವಲ್ಲಿ ಸಹಕಾರಿ
ಬೆಂಡೆಕಾಯಿ ಫೈಬರ್‌ನ ಸಮೃದ್ಧ ಮೂಲವಾಗಿದೆ. ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸರಿಯಾಗಿಡುತ್ತದೆ, ಇದು ಹಸಿವನ್ನು ಉಂಟುಮಾಡುವುದಿಲ್ಲ. ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ ಏಕೆಂದರೆ ಈ ಹಸಿರು ತರಕಾರಿಯನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.


ಇದನ್ನೂ ಓದಿ-Turmeric Milk Side Effects ಅರಿಶಿಣ ಹಾಲು ಸೇವನೆಯಿಂದಲೂ ಕೂಡ ಅಡ್ಡ ಪರಿಣಾಮಗಳು ಸಂಭವಿಸುತ್ತವೆ, ಎಚ್ಚರ!


ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ
ಕೊರೊನಾವೈರಸ್ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲಾಗುತ್ತಿದೆ, ಇಂತಹ ಪರಿಸ್ಥಿತಿಯಲ್ಲಿ ಲೇಡಿ ಫಿಂಗರ್ ನಿಮಗೆ ಹೆಚ್ಚು ಉಪಯುಕ್ತವಾಗಬಹುದು. ನೀವು ಈ ತರಕಾರಿಯನ್ನು ದೈನಂದಿನ ಆಹಾರದಲ್ಲಿ ಸೇರಿಸಿಕೊಂಡರೆ, ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.


ಇದನ್ನೂ ಓದಿ-Hair Care Tips:ಮಳೆಗಾಲದ ಋತುವಿನಲ್ಲಿ ಕೂದಲಿಗೆ ಬಣ್ಣ ಅನ್ವಯಿಸಬೇಕೆ? ಈ ಸಂಗತಿಗಳು ನೆನಪಿನಲ್ಲಿಡಿ

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.