Bad Cholesterol Control Tips: ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಾಗುವುದರಿಂದ ಹಲವು ಗಂಭೀರ ಕಾಯಿಲೆಗಳ ಅಪಾಯ ಕೂಡ ಹೆಚ್ಚಾಗುತ್ತದೆ.  ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿನ ಒಂದು ಮೇಣದಂತಹ ಪದಾರ್ಥವಾಗಿದ್ದು. ಅದರಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಎಂಬ ಎರಡು ವಿಧಗಳಿವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ, ಅದು ರಕ್ತನಾಳಗಳಲ್ಲಿ ಸಂಗ್ರಹಗೊಳ್ಳಲು ಪ್ರಾರಂಭಿಸುತ್ತದೆ ಮತ್ತು ರಕ್ತದ ಹರಿವಿಗೆ ಅಡಚಣೆ ಉಂಟುಮಾಡುತ್ತದೆ. ಇದು ನಂತರ ಅಧಿಕ ರಕ್ತದೊತ್ತಡ, ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಗಂಭೀರ ಕಾಯಿಲೆಗಳ ಅಪಾಯವು ಹೆಚ್ಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ತುಂಬಾ ಮುಖ್ಯ. ಕೊಲೆಸ್ಟರಾಲ್ ಮಟ್ಟವನ್ನು ಕಡಿಮೆ ಮಾಡಲು, ನಾವು ನಮ್ಮ ಆಧಾರದ ಕಡೆಗೆ ವಿಶೇಷ ಗಮನ ಹಾರಿಸಬೇಕು. ನಮ್ಮ ಸುತ್ತಲೂ ಅನೇಕ ತರಕಾರಿಗಳಿದ್ದು, ಅವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಇಂದು ನಾವು ಈ ಲೇಖನದಲ್ಲಿ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಕೆಲವು ತರಕಾರಿಗಳ (Vegetables To Throw Out Bad Cholesterol From Body) ಬಗ್ಗೆ ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ (Health News In Kannada)


COMMERCIAL BREAK
SCROLL TO CONTINUE READING

1. ಬೆಂಡೇಕಾಯಿ 
ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಬೆಂಡೇಕಾಯಿ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಕರಗುವ ಫೈಬರ್ ಅನ್ನು ಹೊಂದಿರುತ್ತದೆ, ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.


2. ಬೆಳ್ಳುಳ್ಳಿ
ಬೆಳ್ಳುಳ್ಳಿಯ ಸೇವನೆಯು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಇದು ಹೈಪರ್ಲಿಪಿಡೆಮಿಯಾ ವಿರೋಧಿ ಗುಣಗಳನ್ನು ಹೊಂದಿದೆ, ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದೇಹದಲ್ಲಿ ಹೆಚ್ಚಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ನೀವು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 1 ರಿಂದ 2 ಕುಡಿ ಬೆಳ್ಳುಳ್ಳಿಯನ್ನು ಅಗಿಯಬಹುದು.


3. ಬೀನ್ಸ್
ಬೀನ್ಸ್ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿ. ಇದರಲ್ಲಿ ಜೀವಸತ್ವಗಳು, ಫೈಬರ್, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಹೇರಳ ಪ್ರಮಾಣದಲ್ಲಿ ಕಂಡುಬರುತ್ತವೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ತಿನ್ನುವುದರಿಂದ ದೇಹದಲ್ಲಿನ ರಕ್ತನಾಳಗಳು ಬಲಗೊಳ್ಳುತ್ತವೆ.(List Of Foods To Lower Cholestero)


4. ಬದನೆಕಾಯಿ
ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಬದನೆಕಾಯಿಯನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದು ತುಂಬಾ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ಫೈಬರ್ ನಿಂದ ಇದು ಸಮೃದ್ಧವಾಗಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಇದನ್ನೂ ಓದಿ-High BP Control Tips: ಅಧಿಕ ರಕ್ತದೊತ್ತಡದ ರೋಗಿಗಳಿಗೆ ರಾಮಬಾಣ ಬಿಳಿ ಬಣ್ಣದ ಬೀಜಗಳು!


5. ಪಾಲಕ
ಪಾಲಕ್ ಒಂದು ತರಕಾರಿಯಾಗಿದ್ದು ಅದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದು ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳಲ್ಲಿ ಸಮೃದ್ಧವಾಗಿದೆ, ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.


ಇದನ್ನೂ ಓದಿ-Tips For Mens Stamina: ನಿತ್ಯ ಖಾಲಿ ಹೊಟ್ಟೆ 2 ಬೆಳ್ಳುಳ್ಳಿ ಸೇವಿಸಿದರೆ ಪುರುಷರಿಗೆ ಸಿಗುತ್ತೆ ಈ ಲಾಭ, ಸೇವಿಸುವ ವಿಧಾನ ಇಲ್ಲಿದೆ!


(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ