ಬೆಂಗಳೂರು : ಕೊಲೆಸ್ಟ್ರಾಲ್ ಎಂದ ಕೂಡಲೇ ಸಾಮಾನ್ಯವಾಗಿ ಜನರು ಭಯ ಬೀಳುತ್ತಾರೆ. ಆದರೆ ಇದರಲ್ಲೂ ಎರಡು ವಿಧಗಳಿವೆ. ಒಳ್ಳೆಯ  ಕೊಲೆಸ್ಟ್ರಾಲ್ ಮತ್ತು ಕೆಟ್ಟ  ಕೊಲೆಸ್ಟ್ರಾಲ್. ದೇಹದಲ್ಲಿ ಆರೋಗ್ಯಕರ ಕೋಶಗಳನ್ನು ರಚಿಸಲು ರಕ್ತದಲ್ಲಿ ಉತ್ತಮ ಕೊಲೆಸ್ಟ್ರಾಲ್ ಇರುವುದು ಅಗತ್ಯ. ಆದರೆ ಕೆಟ್ಟ ಕೊಲೆಸ್ಟ್ರಾಲ್ ಅಂದರೆ ಎಲ್ಡಿಎಲ್ ಪ್ರಮಾಣವು ಹೆಚ್ಚಾದಾಗ, ರಕ್ತನಾಳಗಳಲ್ಲಿ ಕೊಬ್ಬು ಸಂಗ್ರಹವಾಗಲು ಪ್ರಾರಂಭಿಸುತ್ತದೆ.  ಇದು ರಕ್ತದ ಹರಿವಿಗೆ ಅಡಚಣೆಯನ್ನು ಉಂಟುಮಾಡುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದಂತೆಯೇ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಆರಂಭವಾಗುತ್ತದೆ. ಈ ಅಪಾಯಗಳನ್ನು ತಪ್ಪಿಸಲು, ಆರೋಗ್ಯಕರ ಆಹಾರ ಮತ್ತು ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದಂತೆ  ದೇಹ ನಮಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸುತ್ತದೆ. ಹೌದು ನಮ್ಮ ದೇಹ ನೀಡುವ ಸೂಚನೆಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು.  


COMMERCIAL BREAK
SCROLL TO CONTINUE READING

 ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ದೇಹ ನೀಡುತ್ತದೆ ಸೂಚನೆ : 
 1. ಉಗುರಿನ ಬಣ್ಣ ಬದಲಾಗುತ್ತದೆ : 
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾದಾಗ, ಅಪಧಮನಿಗಳಲ್ಲಿ ಕೊಬ್ಬು ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದು ರಕ್ತನಾಳಗಳಲ್ಲಿ ರಕ್ತದ ಹರಿವನ್ನು ನಿರ್ಬಂಧಿಸುತ್ತದೆ. ಕೈ ಮತ್ತು ಕಾಲುಗಳ ಬೆರಳುಗಳಿಗೆ ಸರಿಯಾದ ರಕ್ತ ಪೂರೈಕೆಯ ಕೊರತೆಯಿಂದಾಗಿ, ಉಗುರುಗಳ ಬಣ್ಣವು ತಿಳಿ ಗುಲಾಬಿ ಬಣ್ಣದಿಂದ ಹಳದಿ ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ಸಿಗುವ ಈ ಸಂಕೇತವನ್ನು ನಿರ್ಲಕ್ಷಿಸಬೇಡಿ.


ಇದನ್ನೂ ಓದಿ : Watermelon: ಕಲ್ಲಂಗಡಿಯನ್ನು ಫ್ರಿಡ್ಜ್‌ನಲ್ಲಿಟ್ಟು ತಿನ್ನುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು


2. ಕಾಲುಗಳ ಮರಗಟ್ಟುವಿಕೆ :
ನಿಮ್ಮ ಪಾದಗಳು ಮರಗಟ್ಟಲು ಪ್ರಾರಂಭಿಸುತ್ತಿದ್ದರೆ ಅದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಇದು ಅಧಿಕ ಕೊಲೆಸ್ಟ್ರಾಲ್ ನ ಸಂಕೇತವಾಗಿರಬಹುದು. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ರಕ್ತನಾಳಗಳ ಮೂಲಕ ರಕ್ತದ ಹರಿವು ಮತ್ತು ಆಮ್ಲಜನಕದ ಪೂರೈಕೆಯಲ್ಲಿ ಅಡಚಣೆ ಉಂಟಾಗುತ್ತದೆ. ಈ ಕಾರಣದಿಂದಾಗಿ, ಕಾಲುಗಳಲ್ಲಿ ನೋವು ಮತ್ತು ಅವರ ಮರಗಟ್ಟುವಿಕೆ, ಜುಮ್ಮೆನಿಸುವಿಕೆ  ಕಾಣಿಸಿಕೊಳ್ಳುತ್ತದೆ. 


3. ಅಧಿಕ ರಕ್ತದೊತ್ತಡ :
ಅಧಿಕ ರಕ್ತದೊತ್ತಡ ಮತ್ತು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳಕ್ಕೆ ನೇರ ಸಂಬಂಧವಿದೆ. ರಕ್ತದಲ್ಲಿ ಕೊಬ್ಬು ಹೆಚ್ಚಾದಷ್ಟೂ ರಕ್ತದೊತ್ತಡ ಹೆಚ್ಚುತ್ತದೆ. ಏಕೆಂದರೆ ಕೊಲೆಸ್ಟ್ರಾಲ್‌ನಿಂದ ರಕ್ತ ಪೂರೈಕೆಯಲ್ಲಿ ಅಡಚಣೆ ಉಂಟಾದಾಗ, ಹೃದಯಕ್ಕೆ ರಕ್ತವನ್ನು ಪಂಪ್ ಮಾಡಲು ಅಪಧಮನಿಗಳು ಹೆಚ್ಚು ಶ್ರಮಿಸಬೇಕಾಗುತ್ತದೆ.


ಇದನ್ನೂ ಓದಿ : ಹಲ್ಲುಗಳ ಮೇಲೆ ಪರಿಣಾಮ ಬೀರುತ್ತದೆ ಹೈ ಬ್ಲಡ್ ಶುಗರ್ , ಇದನ್ನು ತಡೆಯುವುದು ಹೇಗೆ ?


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.