ಇದೊಂದು ನೀರು ಸಾಕು !ಕಿಡ್ನಿ ಸ್ಟೋನ್ ಎಷ್ಟೇ ದೊಡ್ಡ ಗಾತ್ರದ್ದಾಗಿದ್ದರೂ ಶಸ್ತ್ರ ಚಿಕಿತ್ಸೆ ಇಲ್ಲದೆ ಕಲ್ಲು ಕರಗಿಸಿ ಬಿಡುತ್ತದೆ !

How To Dissolve Kidney Stones Naturally : ಕೆಲವು ಮನೆಮದ್ದುಗಳ ಸಹಾಯದಿಂದ, ಶಸ್ತ್ರಚಿಕಿತ್ಸೆಯಿಲ್ಲದೆ ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಬಹುದು. ಈ 2 ಮನೆಮದ್ದುಗಳು ಕಿಡ್ನಿಯಲ್ಲಿರುವ ದೊಡ್ಡ ಗಾತ್ರದ ಕಲ್ಲನ್ನು ಕೂಡಾ ಕರಗಿಸಿ ಮೂತ್ರಪಿಂಡ ದಿಂದ ಹೊರ ಹಾಕುತ್ತವೆ.    

Written by - Ranjitha R K | Last Updated : Mar 10, 2025, 02:46 PM IST
  • ಜನರು ಅನೇಕ ಕಾಯಿಲೆಗಳಿಗೆ ಬಲಿಯಾಗುತ್ತಾರೆ.
  • ಅವುಗಳಲ್ಲಿ ಒಂದು ಮೂತ್ರಪಿಂಡದ ಕಲ್ಲುಗಳ ಸಮಸ್ಯೆ.
  • ಕೆಲವು ಮನೆಮದ್ದುಗಳ ಸಹಾಯದಿಂದ ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಬಹುದು.
ಇದೊಂದು ನೀರು ಸಾಕು !ಕಿಡ್ನಿ ಸ್ಟೋನ್ ಎಷ್ಟೇ ದೊಡ್ಡ ಗಾತ್ರದ್ದಾಗಿದ್ದರೂ ಶಸ್ತ್ರ ಚಿಕಿತ್ಸೆ ಇಲ್ಲದೆ ಕಲ್ಲು ಕರಗಿಸಿ ಬಿಡುತ್ತದೆ !

How To Dissolve Kidney Stones Naturally : ಕೆಟ್ಟ ಆಹಾರ ಪದ್ಧತಿ ಮತ್ತು ಕಳಪೆ ಜೀವನಶೈಲಿಯಿಂದಾಗಿ, ಜನರು ಅನೇಕ ಕಾಯಿಲೆಗಳಿಗೆ ಬಲಿಯಾಗುತ್ತಾರೆ.  ಅವುಗಳಲ್ಲಿ ಒಂದು ಮೂತ್ರಪಿಂಡದ ಕಲ್ಲುಗಳ ಸಮಸ್ಯೆ. ಮೂತ್ರಪಿಂಡದ ಕಲ್ಲುಗಳಿಂದ ಬಳಲುತ್ತಿರುವ ಜನರಿಗೆ ಹೆಚ್ಚಾಗಿ ಬೆನ್ನಿನ ಬಲಭಾಗದಲ್ಲಿ ತೀವ್ರವಾದ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಈ ನೋವು ಎಷ್ಟು ಹೆಚ್ಚಾಗಿರುತ್ತದೆ ಎಂದರೆ ದೈನಂದಿನ ಕೆಲಸ ಮಾಡಲು, ಮಲಗಲು ಅಥವಾ ಎದ್ದೇಳಲು  ತೊಂದರೆಯಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಅನೇಕ ಗಂಭೀರ ಸಮಸ್ಯೆಗಳು ಉಂಟಾಗಬಹುದು. ಈ ಸಮಸ್ಯೆಯನ್ನು ತೊಡೆದುಹಾಕಲು ಅನೇಕ ಜನರು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ. ಆದರೆ ಅನೇಕ ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆಯ ಸ್ವಲ್ಪ ಸಮಯದ ನಂತರ ಮತ್ತೆ ಕಲ್ಲುಗಳು ಆಗುವುದು ಸಾಮಾನ್ಯವಾಗಿದೆ. ನೀವು ಕೂಡಾ ಈ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಕೆಲವು ಮನೆಮದ್ದುಗಳ ಸಹಾಯದಿಂದ ಮೂತ್ರಪಿಂಡದ ಕಲ್ಲುಗಳನ್ನು ಔಷಧಿ ಅಥವಾ ಶಸ್ತ್ರಚಿಕಿತ್ಸೆ ಇಲ್ಲದೆ ತೆಗೆದುಹಾಕಬಹುದು. 

Add Zee News as a Preferred Source

ಬಾರ್ಲಿ ನೀರು : 
ಬಾರ್ಲಿ ನೀರು ಕಿಡ್ನಿ ಸ್ಟೋನ್ ನೋವಿನಿಂದ ತ್ವರಿತ ಪರಿಹಾರವನ್ನು ನೀಡುತ್ತದೆ.  ಇದರಲ್ಲಿರುವ ಮೂತ್ರವರ್ಧಕ ಗುಣಲಕ್ಷಣಗಳು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ನಿಮ್ಮ ಮೂತ್ರಪಿಂಡಗಳನ್ನು ಆರೋಗ್ಯವಾಗಿಡುತ್ತದೆ. ಬಾರ್ಲಿ ನೀರು ಮೂತ್ರನಾಳವನ್ನು ಸ್ವಚ್ಛಗೊಳಿಸುತ್ತದೆ.  ಇದರಿಂದಾಗಿ ಕಲ್ಲುಗಳು ಸುಲಭವಾಗಿ ಮೂತ್ರನಾಳದ ಮೂಲಕ ಹೊರಬರಬಹುದು.   ಬಾರ್ಲಿ ನೀರನ್ನು ತಯಾರಿಸಲು, ಮೊದಲು ಒಂದು ಪಾತ್ರೆಯಲ್ಲಿ ಒಂದು ಲೋಟ ನೀರನ್ನು ಬಿಸಿ ಮಾಡಿ. ಈಗ ಒಂದು ಹಿಡಿ ಬಾರ್ಲಿಯನ್ನು ಸೇರಿಸಿ ಚೆನ್ನಾಗಿ ಕುದಿಸಿ. ಚೆನ್ನಾಗಿ ಕುದ್ದ ಮೇಲೆ ನೀರನ್ನು ಫಿಲ್ಟರ್ ಮಾಡಿ. ಸ್ವಲ್ಪ ತನ್ನಗಾಗಿರುವಾಗಲೇ ಸೇವಿಸಿ. ಈ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ,  ಕಿಡ್ನಿ ಸ್ಟೋನ್ ನೋವಿನಿಂದ ತಕ್ಷಣ ಪರಿಹಾರ ಪಡೆಯಬಹುದು.

ಇದನ್ನೂ ಓದಿ : ಆರೋಗ್ಯಕ್ಕೆ ಒಳ್ಳೆಯದ್ದು ಎಂಬ ಕಾರಣಕ್ಕೆ ಹೆಚ್ಚು ಎಳನೀರು ಕುಡಿದರೆ ಏನಾಗುತ್ತೆ ಗೊತ್ತಾ? ದೇಹಕ್ಕೆ ವಿಷವಿದ್ದಂತೆ ನೀವು ಮಾಡುವ ಈ ಸಣ್ಣ ತಪ್ಪು

ಹುರುಳಿ ಕಾಳು : 
ಮೂತ್ರಪಿಂಡದ ಕಲ್ಲಿನ ಸಮಸ್ಯೆ ಇದ್ದರೆ, ವಾರಕ್ಕೆ ಎರಡರಿಂದ ಮೂರು ಬಾರಿ ಹುರುಳಿ ಕಾಳನ್ನು ಸೇವಿಸಬಹುದು. ಇದು ಕಲ್ಲುಗಳ ನೋವನ್ನು ನಿವಾರಿಸುವಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಈ ಬೇಳೆಯಲ್ಲಿರುವ ಕ್ಯಾಲ್ಸಿಯಂ ಆಕ್ಸಲೇಟ್ ಕಿಡ್ನಿ ಸ್ಟೋನ್ ನಿಂದ ಆಗುವ ನೋವಿನಿಂದ ಪರಿಹಾರ ನೀಡುತ್ತದೆ. ಇದಲ್ಲದೆ, ಹುರುಳಿ ಕಾಳು ದೇಹದಲ್ಲಿ ಸಂಗ್ರಹವಾದ ವಿಷವನ್ನು ತೆಗೆದುಹಾಕಲು, ಮೂತ್ರದ ಹರಿವನ್ನು ಹೆಚ್ಚಿಸಲು ಮತ್ತು ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಕರಗುವ ಸಾಧ್ಯತೆ ಇದೆ. ಇದು ನೋವಿನಿಂದಲೂ ಪರಿಹಾರ ನೀಡುತ್ತದೆ.

ಇದನ್ನೂ ಓದಿ : ಯಾವುದೇ ದುಬಾರಿ ಟ್ರೀಟ್‌ಮೆಂಟ್‌ ಬೇಡ.. ಈ ಒಣ ಹಣ್ಣನ್ನು ನೀರಿನಲ್ಲಿ ನೆನೆಸಿ ಕುಡಿದರೆ ಬುಡದಿಂದಲೇ ಕಪ್ಪಾಗುತ್ತೆ ಬಿಳಿ ಕೂದಲು!

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 
V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

(ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಇದನ್ನು ಜೀ ನ್ಯೂಸ್ ಅನುಮೋದಿಸುವುದಿಲ್ಲ.) 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News