Diabetes Symptoms and causes : ಇತ್ತೀಚಿನ ದಿನಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಅನೇಕ ರೀತಿಯ ಕಾಯಿಲೆಗಳು ಕಾಡುತ್ತಿವೆ.  ಇವುಗಳಲ್ಲಿ ಮಧುಮೇಹವೂ ಒಂದು. ಇಂದಿನ ಕಾಲದಲ್ಲಿ ಲಕ್ಷಾಂತರ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ದಿನೇ ದಿನೇ ಮಧುಮೇಹ ರೋಗಿಗಳ ಸಂಖ್ಯೆಯಲ್ಲಿ ಕೂಡಾ ಹೆಚ್ಚಳ ಕಂಡು ಬರುತ್ತಿದೆ. ಮಧುಮೇಹದ ಅಪಾಯ ಹೆಚ್ಚಾಗಲು, ನಮ್ಮ ನಿತ್ಯದ ಅಭ್ಯಾಸಗಳೇ ಕಾರಣವಾಗಿದೆ. 


COMMERCIAL BREAK
SCROLL TO CONTINUE READING

ಮಧುಮೇಹ ಹೆಚ್ಚಾಗಲು ಈ ಅಭ್ಯಾಸಗಲೇ ಕಾರಣ : 
ಜಡ ಜೀವನಶೈಲಿ :
ಪ್ರತಿಯೊಬ್ಬರೂ ವಿಶ್ರಾಂತಿ ಪಡೆಯಲು ಇಷ್ಟಪಡುತ್ತಾರೆ. ಆದರೆ ಅತಿ ಹೆಚ್ಚು ವಿಶ್ರಾಂತಿ ಕೂಡಾ ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಒಂದೇ ಸ್ಥಳದಲ್ಲಿ ದೀರ್ಘಕಾಲ ಕುಳಿತುಕೊಳ್ಳುವುದು ಅಥವಾ ಮಲಗುವುದು, ಯಾವುದೇ ದೈಹಿಕ ಚಟುವಟಿಕೆಯನ್ನು ಮಾಡದಿರುವುದು ಇದು ಹೃದಯ ಮತ್ತು ಶ್ವಾಸಕೋಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆನಲ್ಸ್ ಆಫ್ ಇಂಟರ್ನಲ್ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ದಿನದ ಹೆಚ್ಚಿನ ಸಮಯವನ್ನು ಕುಳಿತುಕೊಂಡು ಕಳೆಯುವ ಜನರಲ್ಲಿ ಮಧುಮೇಹ, ಹೃದ್ರೋಗ ಮತ್ತು ಕ್ಯಾನ್ಸರ್ ನ  ಅಪಾಯ ಹೆಚ್ಚು ಎನ್ನಲಾಗಿದೆ. ಆದ್ದರಿಂದ ಕಚೇರಿಯಲ್ಲಿ ಕೆಲಸ ಮಾಡುವವರು ಕೂಡಾ ಆಗಾಗ ತಮ್ಮ ಜಾಗದಿಂದ ಎದ್ದು ಸ್ವಲ್ಪ ಹೊತ್ತು ಸುತ್ತಾಡಿ ಬರಬೇಕು ಎಂದು ಹೇಳಲಾಗುತ್ತದೆ. 


ಇದನ್ನೂ ಓದಿ : ಟೊಮ್ಯಾಟೊ-ಬದನೆ-ಪಾಲಕ್ ಸೊಪ್ಪು ಸೇವನೆಯಿಂದ ಕಿಡ್ನಿ ಸ್ಟೋನ್ ಸಮಸ್ಯೆ ಉಂಟಾಗುತ್ತಾ?


ನಿದ್ರೆಯ ಕೊರತೆ :
ರಾತ್ರಿ ವೇಳೆ ಸಾಕಷ್ಟು ನಿದ್ದೆ ಮಾಡದೇ  ಇರುವುದು ಎಂದರೆ ಹಲವಾರು ಕಾಯಿಲೆಗಳಿಗೆ ಆಹ್ವಾನ ನೀಡಿದಂತೆ. ತಡರಾತ್ರಿಯವರೆಗೆ ಎಚ್ಚರವಾಗಿರುವುದು, ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ರಾತ್ರಿಯಲ್ಲಿ ಕನಿಷ್ಠ 8 ಗಂಟೆಗಳ ನಿದ್ರೆ ಮಾಡುವುದು ಅಗತ್ಯವಾಗಿರುತ್ತದೆ. 


ಒತ್ತಡ :
ಒತ್ತಡ ಎನ್ನುವುದು ಮಧುಮೇಹಕ್ಕೆ ನೇರವಾಗಿ ಸಂಬಂಧಿಸಿಲ್ಲ ಎನ್ನುವುದನ್ನು ಅನೇಕ  ಅಧ್ಯಯನಗಳು ಬಹಿರಂಗಪಡಿಸಿವೆ. ಆದರೆ ಒತ್ತಡದಿಂದಾಗಿ, ದೇಹದಲ್ಲಿ 'ಕಾರ್ಟಿಸೋಲ್' ಎಂಬ ಹಾರ್ಮೋನ್ ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದು ಇನ್ಸುಲಿನ್ ವೇಗದ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚಿನ ಕಾರ್ಟಿಸೋಲ್ ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುತ್ತದೆ. ಈ ರೀತಿಯಾಗಿ, ಇದು ಮಧುಮೇಹದ ಅಪಾಯ ಕೂಡಾ ಹೆಚ್ಚುತ್ತದೆ. 


ಇದನ್ನೂ ಓದಿ : ದಿನಕ್ಕೆ ಕುಡಿಯಬೇಕು ಇಷ್ಟೇ ಲೋಟ ಚಹಾ, ಇಲ್ಲವಾದರೆ ಅಂಟಿಕೊಳ್ಳುವುದು ಕಾಯಿಲೆ


ಧೂಮಪಾನ ಮತ್ತು ಮದ್ಯಪಾನ :
ಅನೇಕ ಜನರು ಧೂಮಪಾನ ಮತ್ತು ಮದ್ಯಪಾನ ಮಾಡುವ ಅಭ್ಯಾಸವನ್ನು ಹೊಂದಿದ್ದಾರೆ.  ಈ ಅಭ್ಯಾಸಗಳು ಹೃದಯದ ಕಾಯಿಲೆಗಳು, ರಕ್ತದೊತ್ತಡ ಮತ್ತು ಮಧುಮೇಹಕ್ಕೆ ನೇರವಾಗಿ ಸಂಬಂಧಿಸಿವೆ. ಅತಿಯಾಗಿ ಮದ್ಯಪಾನ ಮಾಡುವುದರಿಂದ ಲಿವರ್ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಮಧುಮೇಹದ ಸಮಸ್ಯೆ ಹೆಚ್ಚಾಗುತ್ತದೆ.


ಅನಾರೋಗ್ಯಕರ ಆಹಾರ :
ಅನಾರೋಗ್ಯಕರ ಆಹಾರ ಮತ್ತು ಜಂಕ್ ಫುಡ್ ಸೇವನೆಯು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಇತ್ತೀಚಿನ ದಿನಗಳಲ್ಲಿ  ಜನರು ಜಂಕ್ ಫುಡ್ ಗೆ ಮೊರೆ ಹೋಗುತ್ತಿದ್ದಾರೆ. ಈ ಅಭ್ಯಾಸವು   ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. 


 



(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.  ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.