ಬೆಂಗಳೂರು: ಬೆಳಿಗ್ಗೆ ಎದ್ದ ನಂತರ ನೀವು ಮಾಡುವ ಕೆಲಸವು ನಿಮ್ಮ ಫಿಟ್‌ನೆಸ್ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ತೂಕವನ್ನು ಕಡಿಮೆ ಮಾಡಲು, ಮಲಬದ್ಧತೆ ಮತ್ತು ಗಾಸ್ ಸಂಬಂದಿತ ಸಮಸ್ಯೆಗಳನ್ನು ತಪ್ಪಿಸಲು ನೀವು ಬೆಳಗ್ಗೆ ಎದ್ದ ಕೂಡಲೇ ಈ ಅಭ್ಯಾಸವನ್ನು ಅಳವಡಿಸಿಕೊಳ್ಳಬೇಕು.


COMMERCIAL BREAK
SCROLL TO CONTINUE READING

ಸಾಮಾನ್ಯವಾಗಿ ಬೆಳಗ್ಗೆ ಎದ್ದ ಕೂಡಲೇ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಮನೆಯಲ್ಲಿ ಹಿರಿಯರು ಹೇಳುವುದನ್ನು ನೀವು ಕೇಳಿರುತ್ತೀರಿ. ಆದರೆ ಬೆಳಗ್ಗೆ ಎದ್ದ ತಕ್ಷಣವೇ ನೀರು ಕುಡಿಯುವುದರಿಂದ ಆಗುವ ಐದು ಅತ್ಯುತ್ತಮ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ...?


ಆರೋಗ್ಯಕ್ಕೆ ನೀರು ಬಹಳ ಮುಖ್ಯ. ನೀವು ಬೆಳಗ್ಗೆ ಎದ್ದ ಕೂಡಲೇ ನೀರು ಕುಡಿಯುವ ಮೂಲಕ ನಿಮ್ಮ ದಿನವನ್ನು ಪ್ರಾರಂಭಿಸಿದರೆ ಇದರಿಂದ ಅನೇಕ ಪ್ರಯೋಜನಗಳಿವೆ. ಅಂದಹಾಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹಲವರು ಹೇಳುತ್ತಾರೆ. ಆದರೆ ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ಎಂದು ತಿಳಿಯೋಣ ಬನ್ನಿ...


ಡಯಟ್ ಕ್ಲಿನಿಕ್ನ ಮುಖ್ಯ ಆಹಾರ ತಜ್ಞರಾದ ಶೀಲಾ ಸೆಹ್ರಾವತ್, "ನೀವು ರಾತ್ರಿಯಲ್ಲಿ ಹಲವು ಗಂಟೆಗಳ ಕಾಲ ಮಲಗಿರುತ್ತೀರಿ. ನಂತರ ಎಚ್ಚರವಾದಾಗ, ದೇಹದಲ್ಲಿನ ನೀರು ಹೀರಲ್ಪಟ್ಟಿರುತ್ತದೆ" ಎಂದು ಹೇಳುತ್ತಾರೆ. ಬೆಳಗ್ಗೆ ನೀರು ಕುಡಿಯುವುದರಿಂದ ರಾತ್ರಿಯ ನೀರಿನ ಕೊರತೆ ನಿವಾರಣೆಯಾಗುತ್ತದೆ.'' ಹಾಗಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಅತಿ ಮುಖ್ಯ ಎಂದು ತಿಳಿಸಿದ್ದಾರೆ.


ದೇಹದ ಆಂತರಿಕ ಶುದ್ಧೀಕರಣ: ಬೆಳಗ್ಗೆ ಎದ್ದ ನಂತರ ನೀರು ಕುಡಿಯುವುದರಿಂದ ದೇಹದಲ್ಲಿ ಉತ್ಪತ್ತಿಯಾಗುವ ಹಾನಿಕಾರಕ ಅಂಶಗಳನ್ನು ತೆಗೆದುಹಾಕಲಾಗುತ್ತದೆ. ಈ ಕಾರಣದಿಂದಾಗಿ, ಚರ್ಮವು ಸಹ ಹೊಳೆಯುತ್ತದೆ.


ಹೀರಿಕೊಳ್ಳುವ ಸಾಮರ್ಥ್ಯ: ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರ ದೊಡ್ಡ ಅನುಕೂಲವೆಂದರೆ ಮನುಷ್ಯನ ಕರುಳನ್ನು ಸರಿಯಾಗಿ ಸ್ವಚ್ಛಗೊಳಿಸಲಾಗುತ್ತದೆ. ದಿನದಲ್ಲಿಊಟ ಮಾಡಿದ ನಂತರ ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮರ್ಥ್ಯವೂ ಹೆಚ್ಚಾಗುತ್ತದೆ.


ರೋಗನಿರೋಧಕ ಶಕ್ತಿ: ಬೆಳಗ್ಗೆ ನೀರು ಕುಡಿಯುವುದರಿಂದ ದೇಹದ ಆಂತರಿಕ ವ್ಯವಸ್ಥೆಯನ್ನು ಸಮತೋಲನಗೊಳಿಸುತ್ತದೆ. ಮಾನವನ ಕೆಲಸದ ಸಾಮರ್ಥ್ಯ ಹೆಚ್ಚಾಗುತ್ತದೆ. ದೇಹದ ರೋಗನಿರೋಧಕ ಶಕ್ತಿ ಕೂಡ ಸುಧಾರಿಸುತ್ತದೆ. 


ತೂಕ ಕಡಿಮೆ ಮಾಡುವುದರಲ್ಲಿಯೂ ಸಹ ಪ್ರಯೋಜನಕಾರಿ: ಬೆಳಿಗ್ಗೆ ನೀರು ಕುಡಿಯುವುದರಿಂದ ದೇಹದ ಹೆಚ್ಚುವರಿ ಕೊಬ್ಬನ್ನು ಸಹ ಸುಲಭವಾಗಿ ಕಡಿಮೆ ಮಾಡಬಹುದು. ಇದು ದಿನದಲ್ಲಿ ಹೆಚ್ಚು ಕ್ಯಾಲೊರಿಗಳನ್ನು ಕಳೆಯಲು ಸಹ ನಿಮಗೆ ಸಹಾಯ ಮಾಡುತ್ತದೆ.


ದೇಹದಲ್ಲಿ ನೀರಿನ ಕೊರತೆಯಿಂದ ಮಲಬದ್ಧತೆ ಮತ್ತು ಇತರ ಹೊಟ್ಟೆಯ ತೊಂದರೆಗಳು ಉಂಟಾಗುತ್ತವೆ. ಇದು ಹೊಟ್ಟೆಯಲ್ಲಿ ಮಲಬದ್ಧತೆಗೆ ಕಾರಣವಾಗುತ್ತದೆ. ಬೆಳಗ್ಗೆ ಎದ್ದ ಕೂಡಲೇ ನೀರು ಕುಡಿಯುವುದರಿಂದ ಈ ಸಮಸ್ಯೆಯಿಂದ ಹೊರಬರಬಹುದು. ನೀವು ಪ್ರತಿದಿನ ಬೆಳಗ್ಗೆ ಎದ್ದ ಕೊಡಲೇ ನೀರು ಕುಡಿಯುತ್ತಿದ್ದರೆ, ನೀವು ಅನೇಕ ರೋಗಗಳಿಂದ ಶಾಶ್ವತವಾಗಿ ದೂರವಿರುತ್ತೀರಿ.