ಬೆಂಗಳೂರು : ತುಪ್ಪವು ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿ ಬಳಸುವ ಆಹಾರ ಪದಾರ್ಥವಾಗಿದೆ. ತುಪ್ಪವನ್ನು ಸಾಮಾನ್ಯವಾಗಿ ಚಪಾತಿ, ದೋಸೆ, ದಾಲ್ ಮತ್ತು ಪಲ್ಯದ ಜೊತೆ ಸೇರಿಸಲಾಗುತ್ತದೆ. ತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತುಪ್ಪದಲ್ಲಿರುವ ಬ್ಯುಟರಿಕ್ ಆಮ್ಲವು ಮಲಬದ್ಧತೆ ಸಮಸ್ಯೆಗೆ ತುಂಬಾ ಪ್ರಯೋಜನಕಾರಿ ಮತ್ತು ಚಯಾಪಚಯವನ್ನು ಹೆಚ್ಚಿಸುತ್ತದೆ. ಬೆಚ್ಚನೆಯ ನೀರಿಗೆ ತುಪ್ಪ ಬೆರೆಸಿ ಸೇವಿಸುವುದರಿಂದ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನವಾಗಲಿದೆ. ಸಾಮಾನ್ಯವಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರನ್ನು ಕುಡಿಯುತ್ತಾರೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಆದರೆ, ಬಿಸಿ ನೀರಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಹೆಚ್ಚು ಪ್ರಯೋಜನವಾಗಲಿದೆ. ಹಾಗಾದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಹೇಗೆ ಮತ್ತು ಏಕೆ ಸೇವಿಸಬೇಕು ನೋಡೋಣ.
ಬಿಸಿ ನೀರಿಗೆ ತುಪ್ಪ ಬೆರೆಸಿ ಸೇವಿಸುವುದರಿಂದ ಆಗುವ ಲಾಭಗಳು :
ತುಪ್ಪ ಸಾಕಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಬೆಚ್ಚಗಿನ ನೀರಿನಲ್ಲಿ ತುಪ್ಪವನ್ನು ಬೆರೆಸಿ ಕುಡಿಯುವುದರಿಂದ ಜೀರ್ಣ ಕ್ರಿಯೆ ಆರೋಗ್ಯಕರವಾಗಿರುತ್ತದೆ. ಇದು ಹೃದಯದ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ತುಪ್ಪದಲ್ಲಿರುವ ಕೊಬ್ಬಿನಾಮ್ಲಗಳು ಹೃದಯಕ್ಕೆ ತುಂಬಾ ಪ್ರಯೋಜನಕಾರಿ. ಇದರ ಹೊರತಾಗಿ ಕ್ಯಾಲೋರಿಗಳು, ಆರೋಗ್ಯಕರ ಕೊಬ್ಬುಗಳು, ವಿಟಮಿನ್ ಎ, ಇ ಇತ್ಯಾದಿಗಳು ತುಪ್ಪದಲ್ಲಿ ಕಂಡುಬರುತ್ತವೆ.
ಇದನ್ನೂ ಓದಿ : ರಕ್ತನಾಳಗಳಲ್ಲಿನ ಹಠಮಾರಿ ಜಿಡ್ಡನ್ನು ಹೊಡೆದೋಡಿಸಲು ಈ ಹರ್ಬಲ್ ಟೀ ಅನ್ನು ನಿಮ್ಮ ಆಹಾರದ ಭಾಗವಾಗಿಸಿ!
ತುಪ್ಪದಲ್ಲಿ ಅನೇಕ ಪೌಷ್ಟಿಕಾಂಶಗಳಿವೆ. ಇದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಪ್ರತಿದಿನ ಬೆಳಿಗ್ಗೆ ಬೆಚ್ಚಗಿನ ನೀರಿನಲ್ಲಿ ತುಪ್ಪವನ್ನು ಬೆರೆಸಿ ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ. ಇದನ್ನು ಪ್ರತಿದಿನ ಕುಡಿಯುವುದರಿಂದ ಜೀರ್ಣಕಾರಿ ಕಿಣ್ವಗಳ ಸ್ರವಿಸುವಿಕೆ ಹೆಚ್ಚಾಗುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿನೊಂದಿಗೆ ತುಪ್ಪವನ್ನು ಬೆರೆಸಿ ಕುಡಿಯುವುದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಚರ್ಮವನ್ನು ಆರೋಗ್ಯವಾಗಿಡಲು ತುಪ್ಪ ಉಪಯುಕ್ತವಾಗಿದೆ.
ತೂಕ ಇಳಿಸಲು ಸಹಕಾರಿ :
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 2 ಚಮಚ ತುಪ್ಪವನ್ನು ಬೆಚ್ಚಗಿನ ನೀರಿಗೆ ಬೆರೆಸಿ ಕುಡಿದರೆ ಕೊಬ್ಬು ಕರಗುತ್ತದೆ. ಪ್ರತಿದಿನ ತುಪ್ಪವನ್ನು ತಿನ್ನುವುದರಿಂದ ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರು ಅಥವಾ ಆಹಾರದೊಂದಿಗೆ ತೆಗೆದುಕೊಳ್ಳಬಹುದು.
ಇದನ್ನೂ ಓದಿ : ದಾಳಿಂಬೆ ಸಿಪ್ಪೆಯನ್ನು ನಿಷ್ಪ್ರಯೋಜಕವೆಂದು ಪರಿಗಣಿಸಬೇಡಿ, ಅದರ 6 ಪ್ರಯೋಜನಗಳನ್ನು ತಿಳಿಯಿರಿ
ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 2 ಚಮಚ ತುಪ್ಪವನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಅನೇಕ ರೀತಿಯ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಬೆಚ್ಚನೆಯ ನೀರಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶ ದೂರವಾಗುತ್ತದೆ.
ಸೂಚನೆ: ಈ ಲೇಖನ ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದಿದ್ದೇವೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಈ ಮಾಹಿತಿಯನ್ನು ಜೀ ಮೀಡಿಯಾ ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.