ಈ ವರ್ಷ ಬೇಸಿಗೆಯ ಬಿಸಿ ಬೇಗನೆ ತಟ್ಟಿದೆ ಮತ್ತು ಬಿಸಿಲು ಏಕಾಏಕಿ ವೇಗವಾಗಿ ಹೆಚ್ಚಾಗಲು ಪ್ರಾರಂಭಿಸಿದೆ. ಮಾರ್ಚ್ ತಿಂಗಳಿನಲ್ಲಿಯೇ ಹವಾಮಾನ ಇಲಾಖೆಯಿಂದ ಬಿಸಿಗಾಳಿ ಬಿಸಲಿದೆ ಎಚ್ಚರಿಕೆಯಿಂದ ಇರಿ ಎಂದು ಹೇಳಿದೆ. ಹೀಗಾಗಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅನಿವಾರ್ಯವಾಗುತ್ತದೆ. ಬೇಸಿಗೆ ಕಾಲದಲ್ಲಿ ದೇಹದಲ್ಲಿ ನೀರಿನ ಕೊರತೆ ಹೆಚ್ಚಾಗಿರುತ್ತದೆ. ಇದಕ್ಕಾಗಿ ಕೆಲ ಹಣ್ಣು ಮತ್ತು ತರಕಾರಿ ಸೇವನೆಯು ತುಂಬಾ ಸಹಕಾರಿಯಾಗಿದೆ. ಅದ್ರಲ್ಲೂ ಕಲ್ಲಂಗಡಿ ಹಣ್ಣು ಸೇವಿಸುವುದು ಬಹಳ ಮುಖ್ಯ. ಪ್ರಸ್ತುತ ಕಲ್ಲಂಗಡಿ ಮಾರುಕಟ್ಟೆಗಳಲ್ಲಿ ಲಭ್ಯವಿದೆ. ಬೇಸಿಗೆಯ ಬಿಸಿಲಿನಿಂದ ದೇಹವನ್ನು ರಕ್ಷಿಸಲು, ನಿಮ್ಮ ದೈನಂದಿನ ಆಹಾರದಲ್ಲಿ ಸೇವಿಸಿ. ಅದರ ಪ್ರಯೋಜನಗಳ ಬಗ್ಗೆ ನಿಮಗ್ಗಲಿ ಮಾಹಿತಿ ಇಲ್ಲಿದೆ ನೋಡಿ..
1. ಬೇಸಿಗೆಯಲ್ಲಿ ಅತಿ ದೊಡ್ಡ ಸಮಸ್ಯೆ ಎಂದರೆ ಡಿಹೈಡ್ರೇಷನ್(Dehydration) ಅಂದರೆ ನೀರಿನ ಕೊರತೆ. ನೀರಿನ ಕೊರತೆಯಿಂದ ದೌರ್ಬಲ್ಯ ಉಂಟಾಗಿ ಆರೋಗ್ಯ ಹದಗೆಡುತ್ತದೆ. ಇದನ್ನು ತಪ್ಪಿಸಲು, ಸಾಕಷ್ಟು ನೀರು ಕುಡಿಯುವುದರ ಜೊತೆಗೆ, ಪ್ರತಿದಿನ ಕಲ್ಲಂಗಡಿ ಸೇವಿಸಿ. ಇದು 92% ದ್ರವವನ್ನು ಹೊಂದಿರುತ್ತದೆ, ಇದರಿಂದಾಗಿ ದೇಹವು ಸಾಕಷ್ಟು ಜಲಸಂಚಯನವನ್ನು ಪಡೆಯುತ್ತದೆ.
ಇದನ್ನೂ ಓದಿ : Diabetes: ಪ್ರತಿದಿನ ಈ ಎಲೆಗಳನ್ನು ಜಗಿಯುವುದರಿಂದ ಡಯಾಬಿಟಿಸ್ ಗೆ ಪಡೆಯಿರಿ ಪರಿಹಾರ!
2. ಕಲ್ಲಂಗಡಿಯಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್ ಬಿ 1, ವಿಟಮಿನ್ ಬಿ-5, ವಿಟಮಿನ್ ಬಿ 6 ಮತ್ತು ಆಂಟಿಆಕ್ಸಿಡೆಂಟ್ ಗುಣಗಳು ಇವೆ, ಇದು ದೇಹಕ್ಕೆ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ.
3. ಕಲ್ಲಂಗಡಿ(Watermelon) ಸೇವನೆಯು ತೂಕವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ. ಇದರಲ್ಲಿರುವ ನೀರು ಮತ್ತು ನಾರಿನಂಶವು ಹೊಟ್ಟೆಯನ್ನು ತುಂಬಿಸುತ್ತದೆ. ಇದು ಹಸಿವನ್ನು ಕಡಿಮೆ ಮಾಡುತ್ತದೆ ಮತ್ತು ಆಹಾರವನ್ನು ನಿಯಂತ್ರಣದಲ್ಲಿಡುತ್ತದೆ.
4. ಬಿಸಿಲಿನ ಹೊಡೆತದಿಂದ ಜನ ಹೆಚ್ಚಾಗಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಕಲ್ಲಂಗಡಿ ಸೇವನೆಯು ಈ ಬಿಸಿಲಿನ ಅಪಾಯದಿಂದ ನಿಮ್ಮನ್ನು ರಕ್ಷಿಸುತ್ತದೆ. ಇದರಲ್ಲಿರುವ ಎಲೆಕ್ಟ್ರೋಲೈಟ್‌ಗಳು ದೇಹವು ಬಾಹ್ಯ ಉಷ್ಣದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : Ginger: ಹಸಿ ಶುಂಠಿಯನ್ನು ಹೀಗೆ ಸೇವಿಸಿ ಕೊಲೆಸ್ಟ್ರಾಲ್, ರಕ್ತದೊತ್ತಡಕ್ಕೆ ಪರಿಹಾರ ಕಂಡುಕೊಳ್ಳಿ.!
5. ಉತ್ತಮ ಜೀರ್ಣಕ್ರಿಯೆಗಾಗಿ, ಫೈಬರ್ನಲ್ಲಿ ಸಮೃದ್ಧವಾಗಿರುವ ಆಹಾರವನ್ನು ತೆಗೆದುಕೊಳ್ಳಲು ತಜ್ಞರು ಶಿಫಾರಸು ಮಾಡುತ್ತಾರೆ. ಬೇಸಿಗೆ ಕಾಲದಲ್ಲಿ ಕಲ್ಲಂಗಡಿ ಹಣ್ಣನ್ನು(Watermelon) ಸೇವಿಸುವುದರಿಂದ ಜೀರ್ಣಕ್ರಿಯೆ ಸರಿಯಾಗಿರುತ್ತದೆ. ಇದರಲ್ಲಿರುವ ನಾರಿನಂಶವು ಹೊಟ್ಟೆಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.