ವಿವಿಧ ಜೀವಸತ್ವಗಳು ಮತ್ತು ಖನಿಜಗಳ ನಿಧಿ ಎಂದೇ ಪರಿಗಣಿಸಲ್ಪಡುವ ನಿಂಬೆಹಣ್ಣಿನ ಪಾನೀಯವನ್ನು ಪ್ರತಿದಿನ ಸೇವಿಸುವುದರಿಂದ ಆರೋಗ್ಯದಾಯಕ ಜೀವನ ನಿಮ್ಮದಾಗುತ್ತದೆ. 


COMMERCIAL BREAK
SCROLL TO CONTINUE READING

ಇದು ನೀರು, ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು ಮತ್ತು ಸಕ್ಕರೆಗಳನ್ನು ಹೊಂದಿರುತ್ತದೆ. ನಿಂಬೆ ವಿಟಮಿನ್ 'ಸಿ' ಉತ್ತಮ ಮೂಲವಾಗಿದೆ. ಇದು ವಿಟಮಿನ್ B6, ಫೋಲೇಟ್ ಮತ್ತು ವಿಟಮಿನ್-ಇ ನಂತಹ ವಿವಿಧ ವಿಟಮಿನ್ಗಳನ್ನು ಒಳಗೊಂಡಿದೆ. ಅಲ್ಲದೆ ನಿಂಬೆ ಪಾನಕವು ನಿದ್ದೆ ಮಾಡಲು ಒಳ್ಳೆಯದು. ಇದರ ಜೊತೆಗೆ ನಿಂಬೆ ರಸದ ಬಗ್ಗೆ ನೀವು ಈ ಐದು ಉಪಯೋಗಗಳನ್ನು ತಿಳಿಯಲೇಬೇಕು.


* ಸ್ಥೂಲಕಾಯ ನಿವಾರಣೆ : ನೀವೇನಾದರೂ ನಿಮ್ಮ ತೂಕವನ್ನು ಕಡಿಮೆಮಾಡಿಕೊಳ್ಳಬೇಕು ಎಂದುಕೊಂಡಿದ್ದರೆ, ಇದು ಸುಲಭ ಉಪಾಯ. ಪ್ರತಿನಿತ್ಯ ಬೆಳಿಗ್ಗೆ ಒಂದು ಲೋಟ ಬಿಸಿನೀರಿಗೆ ನಿಬೆ ಹಣ್ಣಿನ ರಸ ಹಾಕಿ ಕುಡಿಯಿರಿ. ದಿನಕ್ಕೆ ಎರಡು ಬಾರಿಯಾದರೂ ನಿಂಬೆರಸ ಮತ್ತು ಜೇನುತುಪ್ಪ ಮಿಶ್ರಿತ ನೀರು ಸೇವನೆ ಮತ್ತು ಗಂಟೆಗೊಮ್ಮೆ ಒಂದು ಲೋಟ ನೀರು ಕುಡಿದರೆ, ಉತ್ತಮ ಫಲಿತಾಂಶ ಕಾಣಬಹುದು. 


* ಮಲಬದ್ಧತೆ ನಿವಾರಣೆ : ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ. ಇನ್ನು ನಿಂಬೆಹಣ್ಣಿನಲ್ಲಿ  ವಿಟಮಿನ್ 'ಸಿ' ಮತ್ತು ವಿಟಮಿನ್ 'ಎ' ಹೆಚ್ಚು ಪ್ರಮಾಣದಲ್ಲಿದೆ. ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರವಾಗುತ್ತದೆ.


* ಹೊಟ್ಟೆ ನೋವು ನಿವಾರಣೆ : ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ. ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ. ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. 


* ಚರ್ಮದ ಸಮಸ್ಯೆಗಳಿಗೆ ರಾಮಬಾಣ : ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ. ನಿಂಬೆ ಹಣ್ಣಿಗೆ ಒಂದು ಹನಿ ಜೇನುತುಪ್ಪ ಬೆರೆಸಿ, ಮುಖಕ್ಕೆ ಹಚ್ಚಿ 15 ನಿಮಿಷಗಳ ನಂತರ ತೊಳೆದರೆ, ಮುಖದ ಮೇಲಿನ ಕಪ್ಪು ಕಲೆಗಳು ಮಾಯವಾಗಿ, ಚರ್ಮ ಕಾಂತಿಯುತವಾಗುತ್ತದೆ. ಡೆಡ್ ಸ್ಕಿನ್ ತೆಗೆಯಲು ನಿಂಬೆ ಹಣ್ಣು ಉತ್ತಮ ಔಷಧ. 


* ಮಧುಮೇಹ ನಿಯಂತ್ರಣ : ಮಧುಮೇಹ ಸಂಬಂಧಿ ಕಣ್ಣಿನ ರೋಗಗಳನ್ನು ನಿವಾರಿಸುವುದರೊಂದಿಗೆ, ನಿಂಬೆ ಹಣ್ಣಿನಲ್ಲಿರುವ ಹೆಸ್ಪರ್ಟಿನ್(hesperetin) ಎಂಬ ರಾಸಾಯನಿಕ ರಕ್ತದಲ್ಲಿರುವ ಸಕ್ಕರೆಯ ಅಂಶ (ಸಕ್ಕರೆಯ ಪ್ರಮಾಣವು ರಕ್ತದಲ್ಲಿ ಹೆಚ್ಚು ಇದ್ದಾಗ)ವನ್ನು ಸಹ ಕಡಿಮೆ ಮಾಡುತ್ತದೆ.