Belly fat reducing tips : ಇತ್ತಿಚೀನ ದಿನಗಳಲ್ಲಿ ಬಹುತೇಕ ಮಂದಿಯದ್ದು ದೇಹ ತೂಕ ಹೆಚ್ಚುತ್ತಿರುವುದೇ ಸಮಸ್ಯೆ. ದೇಹ ತೂಕ ಇಳಿಸಿಕೊಳ್ಳಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡಿದರೂ ಏನೂ ಪ್ರಯೋಜನವಾಗುವುದಿಲ್ಲ. ಒಂದೊಮ್ಮೆ ನೀವು ಮಾಡಿದ ಪ್ರಯತ್ನದ   ಫಲವಾಗಿ ದೇಹದ ಇತರ ಭಾಗಗಳ ಕೊಬ್ಬು ಕರಗಿದರೂ ಹೊಟ್ಟೆಯ ಭಾಗದ ಬೊಜ್ಜು ಕರಗಿಸುವುದು ಅಷ್ಟು ಸುಲಭವಲ್ಲ. ಕೆಲವೊಮ್ಮೆ ಕೊಬ್ಬು ಕರಗಿಸಲು ಮಾಡುವ ಎಲ್ಲಾ ಪ್ರಯತ್ನಗಳೂ ವ್ಯರ್ಥ ಎಂದೆನಿಸಲು ಆರಂಭವಾಗುತ್ತದೆ. ವ್ಯಾಯಾಮದ ಜೊತೆಗೆ ಕೆಲವು ನೈಸರ್ಗಿಕ ವಿಧಾನಗಳನ್ನು ಅನುಸರಿಸುವ ಮೂಲಕ ದೇಹ ಕೊಬ್ಬನ್ನು ಸುಲಭವಾಗಿ  ಕರಗಿಸಬಹುದು. 


COMMERCIAL BREAK
SCROLL TO CONTINUE READING

 ಹೊಟ್ಟೆಯ ಕೊಬನ್ನು ಕರಗಿಸಬೇಕೆ? : 
ಅನೇಕ ಜನರಲ್ಲಿ ದೇಹದ ಇತರ ಭಾಗಗಳು ತೆಳ್ಳಗೆ ಇರುತ್ತವೆ. ಆದರೆ, ಹೊಟ್ಟೆ ಮತ್ತು ಸೊಂಟದ ಭಾಗ ಮಾತ್ರ ದಪ್ಪಗಿರುತ್ತದೆ. ಅನಾರೋಗ್ಯಕರ ಆಹಾರ ಸೇವನೆ ಕೂಡಾ ಇದಕ್ಕೆ ಕಾರಣ. ಇನ್ಸ್ಟಂಟ್ ಆಹಾರ ಸೇವನೆಯಿಂದ  ಹೊಟ್ಟೆಯ ಭಾಗ ದಪ್ಪಾಗಾಗಲು ಆರಂಭವಾಗುತ್ತದೆ. ಒಮ್ಮೆ ಹೊಟ್ಟೆ ಮತ್ತು ಸೊಂಟದ ಭಾಗದಲ್ಲಿ ಕೊಬ್ಬು ಸಂಗ್ರಹವಾದರೆ ಅದನ್ನು ಕಳೆದುಕೊಳ್ಳುವುದು ಅಷ್ಟು ಸುಲಭವಲ್ಲ. 


ಇದನ್ನೂ ಓದಿ : ಡಯಾಬಿಟಿಸ್ ರೋಗಿಗಳಿಗೆ ವರದಾನವಿದ್ದಂತೆ ಈ ಮನೆಮದ್ದುಗಳು..ಟ್ರೈ ಮಾಡಿ ನೋಡಿ


ಇಲ್ಲಿ ಹೇಳಲಾದ ಕೆಲವು ಮನೆಮದ್ದುಗಳು ಹೊಟ್ಟೆಯಲ್ಲಿ ಸಂಗ್ರಹವಾದ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಲಹೆಗಳನ್ನು ಅನುಸರಿಸುವ ಮೂಲಕ ನೇರವಾಗಿ ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಿಕೊಳ್ಳಬಹುದು. ಇವುಗಳನ್ನು ಬಳಸುವುದರಿಂದ ಖಂಡಿತವಾಗಿಯೂ ಹೊಟ್ಟೆ ಮತ್ತು ಸೊಂಟದ ಭಾಗದ ಕೊಬ್ಬನ್ನು ಕಡಿಮೆಗೊಳಿಸುವುದು ಸಾಧ್ಯವಾಗುತ್ತದೆ. ಅಲ್ಲದೆ ಇವುಗಳ ಸೇವನೆ ಯಾವುದೇ ರೀತಿಯ ಅಡ್ಡ ಪರಿಣಾಮವನ್ನು ಉಂಟು ಮಾಡುವುದಿಲ್ಲ.


ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಮನೆಮದ್ದುಗಳು:
ನೆಲ್ಲಿಕಾಯಿ ರಸ:
ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ನೆಲ್ಲಿಕಾಯಿ ರಸವು ಪರಿಣಾಮಕಾರಿಯಾಗಿದೆ. ನೆಲ್ಲಿಕಾಯಿಯಲ್ಲಿ ಫೈಬರ್ ಅಂಶ ಹೆಚ್ಚಿನ ಪ್ರಮಾ ಣದಲ್ಲಿ ಇರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.  ನೆಲ್ಲಿಕಾಯಿ ರಸವು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 


ಇದನ್ನೂ ಓದಿ : ಮಳೆಗಾಲದಲ್ಲಿ ತುರಿಕೆಯ ಕಾಟವೇ? ಫಂಗಲ್ ಸೋಂಕಿಗೆ ನಿಮ್ಮ ಅಂಗೈಯಲ್ಲಿದೆ ಚಿಕಿತ್ಸೆ


ಮೆಂತ್ಯೆ  :
ತೂಕ ಇಳಿಸುವ ಆಹಾರದಲ್ಲಿ ಫೈಬರ್‌ನಲ್ಲಿ ಸಮೃದ್ಧವಾಗಿರುವ ಮೆಂತ್ಯೆಗೆ ವಿಶಿಷ್ಟ ಸ್ಥಾನ ಇರಲೇಬೇಕು. ಮೆಂತ್ಯೆಯನ್ನು  ರಾತ್ರಿಯಿಡೀ ನೆನೆಸಿ ಮರುದಿನ ಬೆಳಿಗ್ಗೆ ಈ ನೀರನ್ನು ಬಿಸಿ ಮಾಡಿ  ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಹೀಗೆ  ಪ್ರತಿದಿನ ಈ ನೀರನ್ನು ಕುಡಿಯುತ್ತಾ ಬಂದರೆ ಹೊಟ್ಟೆ ಭಾಗದ ಕೊಬ್ಬು ಸುಲಭವಾಗಿ ಕರಗುವುದು.  ಇದು ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡಲು ಕೂಡಾ ಸಹಾಯ ಮಾಡುತ್ತದೆ. 


ನಿಂಬೆ ರಸ : 
ನಿಂಬೆ ರಸ ಕೂಡಾ ಉಬ್ಬಿರುವ ಹೊಟ್ಟೆಯನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ನಿಂಬೆ ರಸವು ಚಯಾಪಚಯವನ್ನು ಸುಧಾರಿಸುತ್ತದೆ. ಕೊಬ್ಬನ್ನು ಕರಗಿಸುತ್ತದೆ. ಅದರಲ್ಲೂ ಹೊಟ್ಟೆಯ ಭಾಗದ ಕೊಬ್ಬನ್ನು ಕಡಿಮೆ ಮಾಡುವಲ್ಲಿ ತ್ವರಿತ ಪರಿಣಾಮವನ್ನು  ಬೀರುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅರ್ಧ ಚಮಚ ಜೇನುತುಪ್ಪ ಮತ್ತು  ನಿಂಬೆ ರಸವನ್ನು ಬಿಸಿ ನೀರಿಗೆ ಹಾಕಿ ಕುಡಿಯಿರಿ. ತೂಕ ಇಳಿಸುವ ಪ್ರಯತ್ನಗಳಲ್ಲಿ ನಿಂಬೆ ರಸ ಅತ್ಯಂತ ಪ್ರಯೋಜನಕಾರಿಯಾಗಿದೆ. 


ಇದನ್ನೂ ಓದಿ : Diabetes: ಮಧುಮೇಹಿಗಳಿಗೆ ವರದಾನ ಈ ಹಣ್ಣಿನ ಎಲೆ.. ಸಂಶೋಧನೆಯಲ್ಲೂ ಸಾಬೀತಾಗಿದೆ!


 ಓಮ ಕಾಳಿನ ನೀರು :  
ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಓಮ ಕಾಳಿನ ನೀರನ್ನು ಕುಡಿಯುತ್ತಿದ್ದರೆ, ಹೊಟ್ಟೆಯ ಗಾತ್ರದಲ್ಲಿ ಶೀಘ್ರ ವ್ಯತ್ಯಾಸವನ್ನು ಕಾಣಬಹುದು. ಒಂದು ಚಮಚ ಓಮ ಕಾಳನ್ನು 3 ಗ್ಲಾಸ್ ನೀರಿನಲ್ಲಿ ಹಾಕಿ ಕುದಿಸಿ. ಈ ನೀರು 3 ಲೋಟದಿಂದ 2 ಲೋಟಕ್ಕೆ ಇಳಿಯುವವರೆಗೆ ಕುದಿಸಬೇಕು. ರಾತ್ರಿ ಊಟವಾದ ಅರ್ಧ ಗಂಟೆಯ ನಂತರ ಈ ನೀರನ್ನು ಕುಡಿಯಿರಿ ಮತ್ತು ಮರುದಿನ ಬೆಳಿಗ್ಗೆ ಉಳಿದ ನೀರನ್ನು ಕುಡಿಯಿರಿ.  ಹೀಗೆ ಮಾಡುತ್ತಾ ಬಂದರೆ ಕೆಲವೇ ದಿನಗಳಲ್ಲಿ ಪರಿಣಾಮ ಕಂಡು ಬರುವುದು. 


ಓಮ ಕಾಳಿನ ನೀರು ದೇಹದಲ್ಲಿ ಜೀರ್ಣಕಾರಿ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕೊಬ್ಬನ್ನು ಕರಗಿಸುತ್ತದೆ ಮತ್ತು ದೇಹದ ತೂಕವನ್ನು ತ್ವರಿತವಾಗಿ ಮತ್ತು ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಕಡಿಮೆ ಮಾಡುತ್ತದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.