Diabetes Control Tips: ಮಧುಮೇಹ ರೋಗಿಗಳು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಇನ್ಸುಲಿನ್ ಚುಚ್ಚುಮದ್ದನ್ನು ಸಹ ತೆಗೆದುಕೊಳ್ಳುತ್ತಾರೆ. ಆದರೆ ನೈಸರ್ಗಿಕ ವಿಧಾನಗಳ ಮೂಲಕವೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಮಧುಮೇಹವು ಆನುವಂಶಿಕವಾಗಿರಬಹುದು ಆದರೆ ಇದು ಸಾಮಾನ್ಯವಾಗಿ ಕೆಟ್ಟ ಆಹಾರ ಪದ್ಧತಿ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದ ಸಂಭವಿಸುತ್ತದೆ. 


COMMERCIAL BREAK
SCROLL TO CONTINUE READING

ಮಧುಮೇಹಕ್ಕೆ ಖಚಿತವಾದ ಚಿಕಿತ್ಸೆ ಕಂಡುಹಿಡಿಯಲು ವಿಜ್ಞಾನಿಗಳಿಗೆ ಇನ್ನೂ ಸಾಧ್ಯವಾಗಿಲ್ಲ, ಆದಾಗ್ಯೂ, ಆರೋಗ್ಯಕರ ಆಹಾರದ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಭಾರತದ ಖ್ಯಾತ ಆರೋಗ್ಯ ತಜ್ಞ ನಿಖಿಲ್ ವಾಟ್ಸ್ ಯಾವ ಹಸಿರು ಸಸ್ಯಗಳ ಸಹಾಯದಿಂದ ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿ ಇಡಬಹುದು ಎಂದು ಹೇಳಿದ್ದಾರೆ. 


ಇದನ್ನೂ ಓದಿ: ಈ 5 ಲಕ್ಷಣ ಕಾಣಿಸಿಕೊಂಡರೆ, ಹೃದಯವು ಅನಾರೋಗ್ಯದಿಂದ ಬಳಲುತ್ತಿದೆ ಎಂದರ್ಥ ! 


1. ಕರಿಬೇವಿನ ಎಲೆಗಳು : ಕರಿಬೇವಿನ ಎಲೆಗಳನ್ನು ಸಾಮಾನ್ಯವಾಗಿ ದಕ್ಷಿಣ ಭಾರತದ ಪಾಕವಿಧಾನಗಳಲ್ಲಿ ಬಳಸಲಾಗುತ್ತದೆ. ವಿಟಮಿನ್‌ಗಳು, ಖನಿಜಗಳು, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಇದರಲ್ಲಿ ಕಂಡುಬರುತ್ತವೆ. ಮಧುಮೇಹ ರೋಗಿಗಳು ಇದರ ಸದುಪಯೋಗ ಪಡೆಯಬೇಕೆಂದರೆ ಕರಿಬೇವಿನ ಸೊಪ್ಪಿನಿಂದ ಟೀ ತಯಾರಿಸಿ ಕುಡಿಯಬಹುದು.


2. ಅಮೃತ ಬಳ್ಳಿ : ಕರೋನಾ ಅವಧಿಯಲ್ಲಿ ಈ ಸಸ್ಯದಿಂದ ಪಡೆದ ಗಿಡಮೂಲಿಕೆಗಳನ್ನು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬಳಸಲಾಗುತ್ತಿತ್ತು. ಆದರೆ ನೀವು ಬೆಳಿಗ್ಗೆ ಎದ್ದ ನಂತರ ಅಮೃತ ಬಳ್ಳಿಯ ರಸ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಬಹಳಷ್ಟು ಸಹಾಯ ಮಾಡುತ್ತದೆ.


3. ಬೇವಿನ ಎಲೆಗಳು : ಪ್ರತಿಯೊಬ್ಬರಿಗೂ ಬೇವಿನ ಔಷಧೀಯ ಗುಣಗಳ ಬಗ್ಗೆ ತಿಳಿದಿರುತ್ತಇದರ ಎಲೆಗಳು, ಹಣ್ಣುಗಳು, ಹೂವುಗಳು, ತೊಗಟೆ ಮತ್ತು ಮರವನ್ನು ಔಷಧೀಯ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ನೀವು ಬೆಳಿಗ್ಗೆ ಎದ್ದ ನಂತರ ಬೇವಿನ ಎಲೆ ಅಗಿಯುತ್ತಿದ್ದರೆ, ಅದು ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.


ಇದನ್ನೂ ಓದಿ: ಚಳಿಗಾಲದಲ್ಲಿ ಹಸಿ ಬಟಾಣಿ ಸೇವಿಸಿದರೆ ಈ ಆರೋಗ್ಯ ಸಮಸ್ಯೆ ಕಾಡುವುದೇ ಇಲ್ಲ 


ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.